ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಕೊಲೆ ಆರೋಪಿಯಾಗಿರುವ ಆಶಿಶ್ ಮಿಶ್ರಾ ತಂದೆ ಗೃಹ ಸಚಿವ ಅಜಯ್ ಮಿಶ್ರಾ ಹೇಳಿದ್ದಾರೆ. ಆಶಿಶ್ ಮಿಶ್ರಾ ಕಳೆದ ವರ್ಷ ಅಕ್ಟೋಬರ್ನಲ್ಲಿ ಲಖಿಂಪುರದಲ್ಲಿ ರೈತರ ಗುಂಪಿನ ಮೇಲೆ ಕಾಲು ಹರಿಸಿದ್ದಾರೆ ಎಂದು ಆರೋಪಿಸಲಾಗಿದೆ, ಇದು ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ಚುನಾವಣೆಗಳಲ್ಲಿ ಬಿಜೆಪಿ ಮೇಲೆ ಪರಿಣಾಮ ಬೀರುವ ಭಾರಿ ನಿರೀಕ್ಷೆ ಇತ್ತು ಮತ್ತು ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು.
ಆದಾಗ್ಯೂ, ಪಕ್ಷವು ಐತಿಹಾಸಿಕ ಎರಡನೇ ಜನಾದೇಶದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಲಖಿಂಪುರ ಖೇರಿಯಲ್ಲಿ ಎಲ್ಲಾ ಎಂಟು ಸ್ಥಾನಗಳನ್ನು ಜಯಗಳಿಸಿದೆ.
ಜಾಮೀನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ನಾಳೆ ಇದ್ದು ಅದರ ಒಂದು ದಿನ ಮುಂಚಿತವಾಗಿ ಅಜಯ್ ಮಿಶ್ರಾ, ಮೊದಲಿನಿಂದಲೂ ‘ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ, ಮತ್ತೆ ಸರ್ಕಾರ ರಚನೆ ಮಾಡುತ್ತೇವೆ ಎಂದು ಹೇಳುತ್ತಿದ್ದೆವು. ಈಗ ಬಹುಮತದೊಂದಿಗೆ ಮತ್ತೊಮ್ಮೆ ಸರ್ಕಾರ ರಚಿಸಲಾಗಿದೆ ಎಂದು ಹೇಳಿದ್ದಾರೆ.
“ಕಾನೂನು ಮತ್ತು ಸುವ್ಯವಸ್ಥೆ (ಉತ್ತರ ಪ್ರದೇಶದಲ್ಲಿ) ಉತ್ತಮವಾಗಿಲ್ಲದಿದ್ದರೆ, ನಮಗೆ ಬಹುಮತ ಸಿಗುತ್ತಿರಲಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ANI ಗೆ ಉಲ್ಲೇಖಿಸಿದ್ದಾರೆ.

ಕಳೆದ ತಿಂಗಳು ರಾಜ್ಯ ಚುನಾವಣೆ ಆರಂಭವಾಗುತ್ತಿದ್ದಂತೆ ಆಶಿಶ್ ಮಿಶ್ರಾ ನ್ಯಾಯಾಲಯದಿಂದ ಜಾಮೀನು ಪಡೆದಿದ್ದರು. ಇದು ಭೀಕರ ಘಟನೆಯಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ರೈತರಲ್ಲಿ ಕೋಪ ಮತ್ತು ನಿರಾಶೆಯನ್ನು ಉಂಟುಮಾಡಿತು, ಇದರಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಪತ್ರಕರ್ತರು ಸಹ ಸಾವನ್ನಪ್ಪಿದರು.
ಈ ವಿಷಯವು ಯೋಗಿ ಆದಿತ್ಯನಾಥ್ ಸರ್ಕಾರದ ತೀವ್ರ ಟೀಕೆಗೆ ಕಾರಣವಾಯಿತು ಮತ್ತು ಕೊಲೆ ಆರೋಪಿ ತಂದೆ ಸರ್ಕಾರದ ಭಾಗವಾಗಿದ್ದು ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಆರೋಪಿಸಿದರು.
ವಿರೋಧ ಪಕ್ಷಗಳು ಯೋಗಿ ಸರ್ಕಾರವನ್ನು “ಬಡವರ ವಿರೋಧಿ” ಮತ್ತು “ರೈತ ವಿರೋಧಿ” ಎಂದು ಆರೋಪಿಸಿ ವಾಗ್ದಾಳಿ ನಡೆಸಿದರು.
ರೈತ ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ಹಲವರು, ಉತ್ತರ ಪ್ರದೇಶ ರಾಜ್ಯದಿಂದ ಬಿಜೆಪಿಯನ್ನು ಹೊರಹಾಕುವ ಇದು ಉತ್ತಮ ಸಮಯ ಎಂದು ಹೇಳಿತ್ತು ಆದರೆ ಈ ಲೆಕ್ಕಾರವೆಲ್ಲ ಚುನಾವಣೆಯಲ್ಲಿ ತಲೆಕೆಳಗಾಗಿಸಿವೆ.