ನವದೆಹಲಿ (Newdelhi): 2024ರ ಡಬ್ಲ್ಯುಪಿಎಲ್ (WPL) ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (Mumbai Indians) ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಫೈನಲ್ಸ್ ಗೆ (Finals) ಲಗ್ಗೆ ಇಟ್ಟಿದೆ.
ದೆಹಲಿಯಲ್ಲಿ ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 5 ರನ್ಗಳಿಂದ ಮಣಿಸಿದ ಸ್ಮೃತಿ ಮಂಧಾನ (smriti mandhana) ನಾಯಕತ್ವದ RCB ಇದೇ ಮೊದಲ ಬಾರಿಗೆ ಮಹಿಳೆಯರ ಪ್ರೀಮಿಯರ್ ಲೀಗ್ ಫೈನಲ್ ತಲುಪಿದೆ.

ಮೊದಲು ಬ್ಯಾಟ್ ಮಾಡಿದ ಬೆಂಗಳೂರು ತಂಡ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 135 ರನ್ ಗಳ ಗುರಿ ನೀಡಿತು. 136 ರನ್ ಗಳ ಗುರಿ ಬೆನ್ನಟ್ಟಿದ ಮುಂಬೈ ತಂಡ 6 ವಿಕೆಟ್ ನಷ್ಟಕ್ಕೆ 130 ರನ್ ಗಳಿಸಲಷ್ಟೇ ಶಕ್ತವಾಯಿತು.
ಗುರಿ ಬೆನ್ನಟ್ಟಿದ ಮುಂಬೈ ಉತ್ತಮ ಆರಂಭ ಪಡೆದಿತ್ತು. ಆರ್‌ಸಿಬಿಗೆ ಮೊದಲ ಯಶಸ್ಸು ತಂದುಕೊಟ್ಟ ಶ್ರೇಯಾಂಕಾ ಪಾಟೀಲ್ (Shreyanka Patil) ಅವರು ಹೇಲಿ ಮ್ಯಾಥ್ಯೂಸ್ (Hayley Matthews), ಯಾಸ್ತಿಕಾ ಭಾಟಿಯಾ (Yastika Bhatia) ಅವರ ವಿಕೆಟ್ ಪಡೆದು ಮುಂಬೈಗೆ ಪೆಟ್ಟು ನೀಡಿದರು.

ನೇಟ್ ಸಿವರ್ ಬ್ರಂಟ್ 23 ರನ್ ಗಳ ಇನಿಂಗ್ಸ್ ಆಡಿದರು. ಅದೇ ಸಮಯದಲ್ಲಿ ಅಮೆಲಿಯಾ ಕೆರ್ ಮತ್ತು ನಾಯಕಿ ಹರ್ಮನ್‌ಪ್ರೀತ್ ಕೌರ್ (Harmanpreet Kaur) ನಡುವೆ ಅರ್ಧಶತಕದ ಜೊತೆಯಾಟವಿತ್ತು. ಆದಾಗ್ಯೂ, ಹರ್ಮನ್‌ಪ್ರೀತ್ ಕೌರ್ ಅವರನ್ನು ಔಟ್ ಮಾಡುವ ಮೂಲಕ ಶ್ರೇಯಾಂಕಾ ಈ ಜೊತೆಯಾಟವನ್ನು ಮುರಿದು RCB ಅನ್ನು ಪಂದ್ಯಕ್ಕೆ ಮರಳಿ ತಂದರು. ಅಮೆಲಿಯಾ ಕೆರ್ 27 ರನ್ ಗಳಿಸಿ ಅಜೇಯರಾಗಿ ಉಳಿದರು.

ಇದಕ್ಕೂ ಮುನ್ನ ಆರ್‌ಸಿಬಿ ಪರ ಎಲ್ಲಿಸ್ ಪೆರ್ರಿ (Ellyse Perry) ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ 66 ರನ್ ಗಳಿಸಿದ್ದರು. ಆದರೆ, ಬೌಲಿಂಗ್‌ನಲ್ಲಿ ಮುಂಬೈ ಪರ ಹ್ಯಾಲಿ ಮ್ಯಾಥ್ಯೂಸ್ ಮತ್ತು ನ್ಯಾಟ್ ಸಿವರ್ ಬ್ರಂಟ್ ತಲಾ ಎರಡು ವಿಕೆಟ್ ಪಡೆದರು.
ಟೂರ್ನಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಗೆಲುವು ಸಾಧಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ಗೆ ಲಗ್ಗೆ ಇಟ್ಟಿದ್ದು ಇದೀಗ ಆರ್ ಸಿಬಿ (RCB) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಚಾಂಪಿಯನ್ ಪಟ್ಟಕ್ಕಾಗಿ ಸೆಣೆಸಲಿವೆ.
#wpl #rcb #mumbaiindians #cricket #wpl2024