ದೆಹಲಿ (delhi): ಎರಡನೇ ಆವೃತ್ತಿಯ ಡಬ್ಲ್ಯೂಪಿಎಲ್ (Womens Premier League 2024) ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಭರ್ಜರಿ ಜಯ ಸಾಧಿಸಿ ಫೈನಲ್ಸ್ (Finals) ಪ್ರವೇಶಿಸಿದೆ.

ಗುಜರಾತ್ ಜೈಂಟ್ಸ್ (Gujarat Giants) ವಿರುದ್ಧದ ಪಂದ್ಯದಲ್ಲಿ 7 ವಿಕೆಟ್ ಗೆಲುವಿನೊಂದಿಗೆ, ವುಮೆನ್ಸ್ ಪ್ರೀಮಿಯರ್ ಲೀಗ್ 2024ರ ಫೈನಲ್‌ಗೆ ಮೊದಲ ತಂಡವಾಗಿ ಲಗ್ಗೆ ಇಟ್ಟಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಗುಜರಾತ್ ತಂಡವು, ಮೇಲಿಂದ ಮೇಲೆ ವಿಕೆಟ್ ಕಳೆದುಕೊಂಡು ಕೇವಲ 126 ರನ್ ಗಳಿಸಿತು. ಸಾಧಾರಣ ಗುರಿ ಬೆನ್ನಟ್ಟಿದ ಡೆಲ್ಲಿ ತಂಡವು, ಶಫಾಲಿ ವರ್ಮಾ ಸ್ಫೋಟಕ ಅರ್ಧಶತಕದ ನೆರವಿಂದ ಕೇವಲ 13.1 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 129 ರನ್ ಗಳಿಸಿ ಗುರಿ ತಲುಪಿತು. ಅಲ್ಲದೆ ಯಾವುದೇ ಒತ್ತಡವಿಲ್ಲದಂತೆ ಫೈನಲ್‌ಗೆ ಲಗ್ಗೆ ಇಟ್ಟಿತು.

ಡಬ್ಲ್ಯೂಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದ ತಂಡವು ನೇರವಾಗಿ ಫೈನಲ್ ಪ್ರವೇಶಿಸುತ್ತದೆ. ಡೆಲ್ಲಿ ಆ ಕೆಲಸ ಮಾಡಿ ಮುಗಿಸಿದೆ. ಉಳಿದಂತೆ ಎರಡು ಹಾಗೂ ಮೂರನೇ ಸ್ಥಾನ ಪಡೆದ ತಂಡಗಳು ಎಲಿಮನೇಟರ್ ಪಂದ್ಯದಲ್ಲಿ ಆಡುತ್ತವೆ. ಎಲಿಮನೇಟರ್ ಪಂದ್ಯವು ಮುಂಬೈ ಇಂಡಿಯನ್ಸ್ ಹಾಗೂ ಆರ್‌ಸಿಬಿ ತಂಡಗಳ ನಡುವೆ ನಡೆಯಲಿದೆ. ಅದರಲ್ಲಿ ಗೆದ್ದ ತಂಡವು ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಎದುರಿಸಲಿದೆ.

#delhi #wpl #DelhiCapitals #finals #GujaratGiants #cricket

