ದೆಹಲಿ : ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳ ಹೋರಾಟ ತೀವ್ರತೆಯನ್ನು ಪಡೆದುಕೊಂಡಿದೆ. ಇಂದು ನೂತನ ಸಂಸತ್ ಭವನ ಉದ್ಘಾಟನೆಯ ಹಿನ್ನೆಲೆಯಲ್ಲಿ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಿದ ಕುಸ್ತಿಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
यौन शोषण करने वाला गुंडा बृज भूषण आज संसद में बैठा है और हमें सड़क पर घसीटा जा रहा है।
— Sakshee Malikkh (@SakshiMalik) May 28, 2023
Sad day for Indian sports pic.twitter.com/ckAPmbtl4S
ಇಂದು ಮಹಿಳಾ ಮಹಾ ಪಂಚಾಯತ್ಗೆ ಕರೆ ನೀಡಿದ್ದ ಕುಸ್ತಿಪಟುಗಳು ಜಂತರ್ಮಂತರ್ನಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದು ಸೆಕ್ಯೂರಿಟಿಯನ್ನು ಮೀರಿ ನೂತನ ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ , ಈ ವೇಳೆ ದೆಹಲಿ ಪೊಲೀಸರು ಕುಸ್ತಿಪಟುಗಳಾದ ಸಾಕ್ಷಿ ಮಲ್ಲಿಕ್, ಭಜರಂಗ್ ಪೂನಿಯಾ, ವಿನೇಶ್ ಪೋಗಟ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.
यह डरावना है। जिसको पकड़कर जेल में डालना था वो आजाद घूम रहा है। जिनके सम्मान की रक्षा करनी थी उनको दिल्ली की सड़कों पर घसीटा जा रहा है। हमने "हिटलर के राज" के बारे में सुना था लेकिन अब मोदी जी के शासन में उसे ही साक्षात देख रहे है, एक अपराधी को बचाने के लिये किस हद तक गिरेगी मोदी… pic.twitter.com/vFPdTnoMy5
— Chandra Shekhar Aazad (@BhimArmyChief) May 28, 2023
ಸಾಕ್ಷಿ ಮಲ್ಲಿಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಅನೇಕ ಫೋಟೋಗಳನ್ನು ಹಾಗೂ ವಿಡಿಯೋಗಳನ್ನು ಹಂಚಿಕೊಂಡಿದ್ದು ನ್ಯಾಯ ಕೇಳುತ್ತಿರುವ ನಮ್ಮನ್ನು ದೆಹಲಿ ಪೊಲೀಸರು ಈ ರೀತಿ ನಡೆಸಿಕೊಳ್ತಿದ್ದಾರೆ ಎಂದು ಕಿಡಿಕಾರಿದ್ದಾರೆ . ಪೊಲೀಸರುನ ಜಂತರ್ಮಂತರದಲ್ಲಿ ಕುಸ್ತಿಪಟುಗಳನ್ನು ಎಳೆದಾಡುತ್ತಿರುವ ವಿಡಿಯೋ ಪೋಸ್ಟ್ ಮಾಡಿದ ಸಾಕ್ಷಿ ಮಲ್ಲಿಕ್, ಎಲ್ಲಾ ಕುಸ್ತಿಪಟುಗಳನ್ನು ವೃದ್ಧ ತಾಯಂದಿರನ್ನು ಬಂಧಿಸಿದ ಬಳಿಕ ಇದೀಗ ಪೊಲೀಸರು ಜಂತರ್ ಮಂತರ್ನಲ್ಲಿ ನಮ್ಮ ಮೆರವಣಿಗೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಇದು ಯಾವ ರೀತಿಯ ಗೂಂಡಾಗಿರಿ ಎಂದು ಪ್ರಶ್ನಿಸಿದ್ದಾರೆ,