• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಬಿಜೆಪಿಗೆ ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? : ರಣದೀಪ್‌ ಸುರ್ಜೆವಾಲ

ಪ್ರತಿಧ್ವನಿ by ಪ್ರತಿಧ್ವನಿ
October 20, 2021
in ಕರ್ನಾಟಕ, ರಾಜಕೀಯ
0
ಬಿಜೆಪಿಗೆ  ಯಾಕೆ ಮತ ಹಾಕುತ್ತಿದ್ದೀರಾ? ತೈಲ ಬೆಲೆ ಹೆಚ್ಚಳ ಮಾಡಿದ್ದಕ್ಕಾ? :  ರಣದೀಪ್‌ ಸುರ್ಜೆವಾಲ
Share on WhatsAppShare on FacebookShare on Telegram

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗುತ್ತಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದಾರೆ. ಕೆಪಿಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೆವಾಲ ಸುದ್ದಿಘೋಷ್ಟಿ ನಡೆಸಿದ್ದು ರಾಜ್ಯ ಹಾಗು ಕೇಂದ್ರ ಬಿಜೆಪಿ ಸರ್ಕಾರಗಳ ವಿರುದ್ದ ಹರಿಹಾಯ್ದಿದ್ದಾರೆ.

ADVERTISEMENT

ದೇಶ ಹಾಗೂ ರಾಜ್ಯಗಳಲ್ಲಿ ಒಂದೇ ಪರಿಸ್ಥಿತಿ. ಇಂದು ಜನಸಾಮಾನ್ಯರ ಸ್ಥಿತಿ ಶೋಚನೀಯವಾಗಿದೆ. ಕರ್ನಾಟಕದ ಬಡವರು, ದಲಿತರು, ಯುವಕರು, ಮಹಿಳೆಯರು ಇಂದು ಅತ್ಯಂತ ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ. ಜನರ ಆದಾಯ ಕಡಿಮೆಯಾಗಿದ್ದು, ವೆಚ್ಚ ಹೆಚ್ಚಾಗಿದೆ. ವ್ಯವಸಾಯ ಮಾಡುವವರ ಆದಾಯ ಅರ್ಧಕ್ಕೆ ಕುಸಿದಿದೆ. ವೆಚ್ಚ ದುಪ್ಪಟ್ಟಾಗಿದೆ. ಬೆಲೆ ಏರಿಕೆ ಪರಿಣಾಮವಾಗಿ ಜನ ದಿನಬೆಳಗಾದರೆ ದೇವರ ಜತೆಗೆ ಅಡುಗೆ ಸಿಲಿಂಡರ್, ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಆರತಿ ಎತ್ತುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕಿಡಿಕಾರಿದ್ದಾರೆ.

ಪೆಟ್ರೋಲ್ ಬೆಲೆ 110 ರೂ. ಆಗಿದೆ. ಡೀಸೆಲ್ ಬೆಲೆ 101.30 ರೂ. ಆಗಿದೆ. ಅಡುಗೆ ಅನಿಲ ಸಿಲಿಂಡರ್ ಬೆಲೆ 925 ರೂ. ಆಗಿದೆ. ಕಬ್ಬಿಣ, ಸೀಮೆಂಟ್, ಮರಳು, ಅಡುಗೆ ಎಣ್ಣೆ, ಬೇಳೆ ಕಾಳುಗಳು, ಯೂರಿಯಾ ಗೊಬ್ಬರ ಎಲ್ಲವೂ ದುಬಾರಿಯಾಗಿವೆ. ಸ್ವಾತಂತ್ರ್ಯ ಭಾರತದ 75 ವರ್ಷಗಳ ಇತಿಹಾಸದಲ್ಲಿ ಇದೇ ಗರಿಷ್ಠ.

ಮೋದಿ ಅವರು ಮಾತೆತ್ತಿದರೆ 75 ವರ್ಷಗಳ ಬಗ್ಗೆ ಮಾತನಾಡುತ್ತಾರೆ. ಆದರೆ ಕರ್ನಾಟಕ ಸೇರಿ ಇಡೀ ದೇಶ ಬೆಲೆ ಏರಿಕೆಯಿಂದ ತತ್ತರಿಸಿದೆ. ಬಿಜೆಪಿಗೆ ಯಾಕೆ ಮತ ಹಾಕಬೇಕು? ಬೆಲೆ ಏರಿಕೆಗಾ? ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಹೆಚ್ಚಳಕ್ಕಾ? ಯಾತಕ್ಕೆ ಹಾಕಬೇಕು ಮತ? ಎಂದು ಪ್ರಶ್ನಿಸಿದ್ದಾರೆ.

7 ವರ್ಷಗಳ ಹಿಂದೆ ಕಾಂಗ್ರೆಸ್ ಅಧಿಕಾರದಿಂದ ಕೆಳಗಿಳಿದಾಗ ಕಚ್ಚಾತೈಲ ಬೆಲೆ ಬ್ಯಾರಲ್ ಗೆ 108 ಅಮೆರಿಕನ್ ಡಾಲರ್ ಇತ್ತು. ಆಗ ಪೆಟ್ರೋಲ್ ಬೆಲೆ ಸುಮಾರು 70 ರೂ. ಇದ್ದರೆ, ಡೀಸೆಲ್ ಬೆಲೆ 54 ರೂ ಇತ್ತು. ಇಂದು ಕಚ್ಚಾ ತೈಲಬೆಲೆ ಬ್ಯಾರೆಲ್ ಗೆ ಸುಮಾರು 70-80 ಡಾಲರ್ ಮಧ್ಯೆ ಇದೆ. ಆದರೂ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿರುವುದೇಕೆ? ಕಾರಣ ಇದರ ಮೇಲೆ ಮೋದಿ ಹಾಗೂ ಬೊಮ್ಮಾಯಿ ಅವರ ತೆರಿಗೆ ಬಿದ್ದಿದೆ ಎಂದು ಆರೋಪಿಸಿದ್ದಾರೆ.

7 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೇವಲ ಪೆಟ್ರೋಲ್ ಹಾಗೂ ಡೀಸೆಲ್ ಮೂಲಕ ಜನರ ಜೇಬಿಗೆ ಕತ್ತರಿ ಹಾಕಿ 18 ಲಕ್ಷ ಕೋಟಿ ಹಣ ಸಂಪಾದಿಸಿದೆ. ರಾಜ್ಯ ಸರ್ಕಾರ ಕಳೆದ 20 ತಿಂಗಳಲ್ಲಿ 7 ಸಾವಿರ ಕೋಟಿ ಹಣವನ್ನು ಸುಲಿಗೆ ಮಾಡಿದೆ. ಸರ್ಕಾರ ಈ ರೀತಿ ನಡೆದುಕೊಂಡರೆ ಜನಸಾಮಾನ್ಯರ ಪಾಡೇನು? ಈ ವಿಚಾರ ಇಷ್ಟಕ್ಕೆ ನಿಲ್ಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಕೋವಿಡ್ ಸಮಯದಲ್ಲಿ ಸರ್ಕಾರ ಎಲ್ಲ ಜವಾಬ್ದಾರಿಯನ್ನು ಜನರ ಮೇಲೆ ಹಾಕಿ ನುಣುಚಿಕೊಂಡಿತು. ಜನರನ್ನು ರಕ್ಷಿಸಲಾಗದೆ ಮನೆ ಸೇರಿಕೊಂಡಿತ್ತು. ಯಾವುದೇ ಬಿಜೆಪಿ ನಾಯಕರು ನಿಮ್ಮ ಸಹಾಯಕ್ಕೆ ಬರಲಿಲ್ಲ. ಆದರೆ ಯುವ ನಾಯಕರಾದ ಮಾನೆ ಅವರು ಜನರ ಕಷ್ಟಕ್ಕೆ ಧಾವಿಸಿದ್ದಾರೆ. ಬಡವರಿಗೆ ಆರ್ಥಿಕ ನೆರವು ನೀಡಿ ಅವರ ಬೆನ್ನಿಗೆ ನಿಂತರು. ಆಕ್ಸಿಜನ್ ಕೊರತೆಯಿಂದ ಜನ ಉಸಿರುಗಟ್ಟಿ ಸಾಯುವಾಗ ಸಂಸದರಾಗಲಿ, ನಾಯಕರಾಗಲಿ, ಶಾಸಕ ಸ್ಥಾನಕ್ಕೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿಯಾಗಲಿ ಯಾರೂ ನೆರವಿಗೆ ಬರಲಿಲ್ಲ.

ಮಾನೆಯವರು ತಮ್ಮ ಯುವ ಕಾರ್ಯಕರ್ತರ ಜತೆ ಸೇರಿಕೊಂಡು ಆಕ್ಸಿಜನ್, ಆಕ್ಸಿಜನ್ ಕಾನ್ಸಂಟ್ರೇಟರ್ ಗಳ ವ್ಯವಸ್ಥೆ ಕಲ್ಪಿಸಿದ್ದರು. ಹೀಗಾಗಿ ಅವರಿಗೆ ಆಪದ್ಭಾಂದವ ಎಂಬ ಬಿರುದನ್ನು ಜನರೇ ಕೊಟ್ಟಿದ್ದಾರೆ ಎಂದು ಹಾನಗಲ್ ಅಭ್ಯರ್ಥಿ ಶ್ರೀನಿವಾಸ ಮಾನೆಯನ್ನು ಹಾಡಿ ಹೊಗಳಿದ್ದಾರೆ.

ಸಕ್ಕರೆ ಕಾರ್ಖಾನೆ ಮುಚ್ಚಿಸಿದ್ದಾರೆ ಆ ಕಾರ್ಖಾನೆ ನಡೆಯುತ್ತಿದ್ದರೆ ಇಲ್ಲಿನ ಕಬ್ಬು ಬೆಳೆಗಾರರಿಗೆ ಆಸರೆಯಾಗುತ್ತಿತ್ತು. ಪಂಜಾಬ್ ನಲ್ಲಿ ಪ್ರತಿ ಟನ್ ಕಬ್ಬಿಗೆ 4 ಸಾವಿರ ನೀಡುತ್ತಿದೆ. ಅಂತಹ ಸಣ್ಣ ರಾಜ್ಯವೇ 4 ಸಾವಿರ ನೀಡುತ್ತಿರುವಾಗ ಕರ್ನಾಟಕದಂತಹ ದೊಡ್ಡ ರಾಜ್ಯಗಳು ನೀಡಲು ಸಾಧ್ಯವಾಗುತ್ತಿಲ್ಲ ಏಕೆ? ಎಂದು ಪ್ರಶ್ನಿಸಿದ್ದಾರೆ.

ರೈತರು, ಬಡವರು, ಕಾರ್ಮಿಕರು, ದಲಿತರ ಜೀವನಕ್ಕೆ ಸಮರ್ಪಕ ಆರ್ಥಿಕ ನೆರವು ಸಿಕ್ಕಿದಾಗ ಮಾತ್ರ ದೇಶದ ಅರ್ಥವ್ಯವಸ್ಥೆ ಸರಿ ದಾರಿಯಲ್ಲಿ ಸಾಗುತ್ತದೆ. ಆಗ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಹೇಳಿದ್ದಾರೆ.

ಹಾನಗಲ್ ಕರ್ನಾಟಕದ ಅತ್ಯಂತ ಯುವ ಮತದಾರರು ಹೊಂದಿರುವ ವಿಧಾನಸಭಾ ಕ್ಷೇತ್ರವಾಗಿದ್ದು, ಇಲ್ಲಿ ಹೆಚ್ಚಿನ ಪ್ರಮಾಣದ ಮತದಾರರು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ. ಮೋದಿ ಅವರು ಪ್ರಧಾನಿಯಾಗುವ ಮುನ್ನ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ್ದರು. ಆದರೆ ಇಂದು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದ್ದು, ದೇಶದ ಇತಿಹಾಸದಲ್ಲಿ ಗರಿಷ್ಠ ಶೇ. 7-8 ರಷ್ಟು ನಿರುದ್ಯೋಗ ಪ್ರಮಾಣವಿದೆ. ಇದರಲ್ಲಿ ಕರ್ನಾಟಕ ಪ್ರಮುಖ ಸ್ಥಾನದಲ್ಲಿದೆ ಎಂದು ಆರೋಪಿಸಿದ್ದಾರೆ.

ರೈತರ ಬೆಳೆಗೆ ಉತ್ತಮ ಬೆಲೆ ನೀಡುತ್ತಿಲ್ಲ. ಕಾರ್ಮಿಕರಿಗೆ ವೇತನವಿಲ್ಲ. ನರೇಗಾ ಯೋಜನೆಗೆ ಹಣ ನೀಡುತ್ತಿಲ್ಲ. ಕೇಂದ್ರ ಸರ್ಕಾರ ಹುದ್ದೆಗಳಿಗೆ ನೇಮಕ ಮಾಡುತ್ತಿಲ್ಲ. ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಉದ್ಯೋಗಗಳಿಲ್ಲ. ಸರ್ಕಾರದ ಬಳಿಯೇ ಆಡಳಿತ ನಡೆಸಲು ಹಣವಿಲ್ಲ. ಸರ್ಕಾರ ಹಾಗೂ ಇಡೀ ಆಡಳಿತ ವ್ಯವಸ್ಥೆ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇದೇ ಕಾರಣಕ್ಕೆ ಬಿಜೆಪಿಯನ್ನು ಸುಳ್ಳು ಹಾಗೂ ಭ್ರಷ್ಟಾಚಾರದ ಪಕ್ಷ ಎಂದು ಕರೆಯಲಾಗುತ್ತಿದೆ. ಹೀಗಾಗಿ ಜನರಿಗೆ ಬದಲಾವಣೆ ತರಲು ಈಗ ಒಂದು ಅಮೂಲ್ಯ ಅವಕಾಶ ಸಿಕ್ಕಿದೆ. ನಮ್ಮ ಯುವ ನಾಯಕ ನಿಮ್ಮ ಪರವಾಗಿ ಧ್ವನಿ ಎತ್ತಿ ಈ ಕ್ಷೇತ್ರದ ಪರಿಸ್ಥಿತಿ ಬದಲಾಯಿಸುವ ಶಕ್ತಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ಬಿಜೆಪಿ ಸರ್ಕಾರದ ಪತನಕ್ಕೆ ನಾಂದಿ ಹಾಡಬೇಕು ಎಂದು ಕರೆ ನೀಡಿದ್ದಾರೆ.

Tags: BJPBy-electionbypollCongress PartyCovid 19hanagalRandeep Surjewalasindhagiಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉತ್ತರಾಖಂಡದಲ್ಲಿ ವರಣನ ಆರ್ಭಟ

Next Post

ಆಂಧ್ರಪ್ರದೇಶ: TDP ಪಕ್ಷದ ಕಛೇರಿಗಳ ಮೇಲೆ YSRCP ಕಾರ್ಯಕರ್ತರಿಂದ ದಾಳಿ, ರಾಜ್ಯದಲ್ಲಿ ಬಂದ್‌ ಗೆ ಕರೆ ನೀಡಿದ ಟಿಡಿಪಿ

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
ಆಂಧ್ರಪ್ರದೇಶ: TDP ಪಕ್ಷದ ಕಛೇರಿಗಳ ಮೇಲೆ YSRCP ಕಾರ್ಯಕರ್ತರಿಂದ ದಾಳಿ,  ರಾಜ್ಯದಲ್ಲಿ ಬಂದ್‌ ಗೆ ಕರೆ ನೀಡಿದ ಟಿಡಿಪಿ

ಆಂಧ್ರಪ್ರದೇಶ: TDP ಪಕ್ಷದ ಕಛೇರಿಗಳ ಮೇಲೆ YSRCP ಕಾರ್ಯಕರ್ತರಿಂದ ದಾಳಿ, ರಾಜ್ಯದಲ್ಲಿ ಬಂದ್‌ ಗೆ ಕರೆ ನೀಡಿದ ಟಿಡಿಪಿ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!