• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Any Mind by Any Mind
October 5, 2023
in Top Story
0
ದಸರಾ ಅಂಗವಾಗಿ ಯದುವೀರ್ ದರ್ಬಾರ್ : 9ಕ್ಕೆ ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ
Share on WhatsAppShare on FacebookShare on Telegram

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಅಂಗವಾಗಿ ಮೈಸೂರು ಅರಮನೆಯ ಖಾಸಗಿ ದರ್ಬಾರ್ ಹಾಲ್ನಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್ ನಡೆಸಲಿದ್ದು, ಇದಕ್ಕಾಗಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯವು ಇದೇ ಅಕ್ಟೋಬರ್ 9ರಂದು ಸಂಪ್ರದಾಯದಂತೆ ನಡೆಯಲಿದೆ. ರಾಜ ದರ್ಬಾರ್ಗೆ ಮೈಸೂರು ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದ್ದು, ಅಕ್ಟೋಬರ್ 9ರಂದು ರತ್ನ ಖಚಿತ ಸಿಂಹಾಸನ ಜೋಡಣಾ ಕಾರ್ಯ ನಡೆಯಲಿದೆ. ಅರಮನೆಯ ಖಾಸಗಿ ದರ್ಬಾರ್ ಹಾಲ್ನಲ್ಲಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ನಡೆಯಲಿದ್ದು, ಅಂದು ಮುಂಜಾನೆಯಿಂದಲೇ ನವಗ್ರಹ, ಗಣಪತಿ ಹೋಮ-ಹವನ ನೆರವೇರಲಿದೆ.

ADVERTISEMENT

ಅಕ್ಟೋಬರ್ 15ರಿಂದ ಅರಮನೆಯಲ್ಲಿ ನವರಾತ್ರಿ ಸಂಭ್ರಮ ಆರಂಭವಾಗಲಿದ್ದು, ವಿವಿಧ ಧಾರ್ಮಿಕ ಕೈಂಕರ್ಯ ನೆರವೇರಿಸಿ ಬ್ರಾಹ್ಮಿ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುವುದು. ಅರಮನೆಯಲ್ಲಿ ಅಕ್ಟೋಬರ್ 20ರಂದು ಸರಸ್ವತಿ ಪೂಜೆ, 21ರಂದು ಕಾಳರಾತ್ರಿ ಪೂಜೆ, 23ರಂದು ಆಯುಧ ಪೂಜೆ, 24ರಂದು ವಿಜಯದಶಮಿ ಪೂಜೆ ನಡೆಯಲಿದೆ. ಇನ್ನ ನವೆಂಬರ್ 8ರಂದು ರತ್ನ ಖಚಿತ ಸಿಂಹಾಸನವನ್ನ ವಿಂಗಡಣೆ ಮಾಡಿ ಭದ್ರತಾ ಕೊಠಡಿಗೆ ರವಾನೆ ಮಾಡಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ.

ಸಂಪ್ರದಾಯದಂತೆ ಮೈಸೂರು ತಾಲೂಕಿನ ಗೆಜ್ಜಗಳ್ಳಿ ಗ್ರಾಮದ ವೀರಶೈವರು ಮಡಿ ಬಟ್ಟೆತೊಟ್ಟು ದೇವರಿಗೆ ಕೈಮುಗಿದು, ಸಿಂಹಾಸನದ 6 ಭಾಗಗಳನ್ನು ತಂದು ಅಂಬಾವಿಲಾಸ ರತ್ನಗಂಬಳಿಯ ಮೇಲೆ 15 ಅಡಿ ಅಗಲ ಮತ್ತು ಉದ್ದವಿರುವ ಜಾಗದಲ್ಲಿ ಕೂರ್ಮಾವತಾರ ಆಸನವನ್ನು ಜೋಡಿಸಿ, ಕಾಲುಗಳನ್ನು ಅಳವಡಿಸುವರು. ನಂತರ ಪುರೋಹಿತರು ರತ್ನಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಬಿಳಿ ಬಟ್ಟೆಯಿಂದ ಮುಚ್ಚುತ್ತಾರೆ. ಈ ವೇಳೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರ ಖುದ್ದು ಮಾರ್ಗದರ್ಶನದಲ್ಲಿ ಸಿಂಹಾಸನದ ಜೋಡಣೆ ಕಾರ್ಯವು ಜರುಗಲಿದೆ. ಹಿಂದಿನ ಕಾಲದಲ್ಲಿ ಪ್ರತಿನಿತ್ಯವೂ ಮಹಾರಾಜರು ಸಿಂಹಾಸನವೇರಿ ದರ್ಬಾರ್ ನಡೆಸುತ್ತಿದ್ದರಾದರೂ ನವರಾತ್ರಿ ವೇಳೆ ನಡೆಯುತ್ತಿದ್ದ ದರ್ಬಾರ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇತ್ತು. ಸ್ವಾತಂತ್ರ್ಯದ ನಂತರ ನವರಾತ್ರಿ ಸಮಯದಲ್ಲಿ ಖಾಸಗಿಯಾಗಿ ಹಿಂದಿನ ಧಾರ್ಮಿಕ ಕೈಂಕರ್ಯದೊಂದಿಗೆ ದರ್ಬಾರ್ ನಡೆಸಲಾಗುತ್ತಿದ್ದು, ಇದು ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿದೆ.

Tags: dasaradasarafestivalMysuru
Previous Post

ಕರಾವಳಿ ಭಾಗದ ಕಥಾಹಂದರ ಹೊಂದಿರುವ “ಕುದ್ರು” ಚಿತ್ರ ಅಕ್ಟೋಬರ್ 13 ರಂದು ತೆರೆಗೆ

Next Post

ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

Related Posts

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?
Top Story

ಯಶ್‌ ‘ಟಾಕ್ಸಿಕ್’ಗೆ ಉಪ್ಪಿ ಫಿದಾ; ಸಿನಿಮಾ ನೋಡಿ ಏನಂದ್ರು ಗೊತ್ತಾ?

by ಪ್ರತಿಧ್ವನಿ
August 28, 2026
0

ರಿಯಲ್ ಸ್ಟಾರ್ ಉಪೇಂದ್ರ ಅವರು ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾವನ್ನು ವೀಕ್ಷಿಸಿದ್ದು, ಚಿತ್ರದ ಬಗ್ಗೆ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಭಿನ್ನ ಪ್ರಯೋಗಗಳಿಗೆ ಹೆಸರಾಗಿರುವ...

Read moreDetails
‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

‘ಕಾವೇರಿ’ಯಲ್ಲಿ ಬಿಜೆಪಿ ನಾಯಕರ ದಂಡು; ಸಿದ್ದರಾಮಯ್ಯ ಭೇಟಿಯ ಹಿಂದೆ ರಾಜಕೀಯ ಲೆಕ್ಕಾಚಾರವೇ?

August 28, 2026
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
Next Post
ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

ಗೋವುಗಳ ಗುಂಡಿಕ್ಕಿ ಕೊಂದ ಪ್ರಕರಣ: ಆರೋಪಿ ಬಂಧನಕ್ಕೆ ಒತ್ತಾಯ- ವಿಶ್ವ ಹಿಂದೂ ಪರಿಷತ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada