ಮುಡಾ ಹಗರಣದ (MUDA scam) ಆರೋಪಗಳನ್ನು ಪರಿಗಣಿಸಿ ಸಿಎಂ ಸಿದ್ದರಾಮಯ್ಯ (Cm siddaramaiah) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮೈಸೂರು ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer odeyar) ಆಗ್ರಹಿಸಿದ್ದಾರೆ.
ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು,ಸಿಎಂ ತವರು ಜಿಲ್ಲೆಯಲ್ಲಿ ಹಗರಣ ನಡೆದಿದೆ. ಈ ಹಗರಣದಲ್ಲಿ ಸಿಎಂ ಹೆಸರು ಕೂಡ ತಳಕು ಹಾಕಿಕೊಂಡಿದೆ. ಹೀಗಾಗಿ ನಾವು ಅವರ ರಾಜೀನಾಮೆ ಕೇಳುತ್ತಿದ್ದೇವೆ ಎಂದಿದ್ದಾರೆ.
ಈ ಮುಡಾ ಹಗರಣದ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಸರ್ಕಾರ ಕೂಡಲೇ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಳ್ಳಬೇಕು, ಪ್ರಕರಣದ ತನಿಖೆ ಬಳಿಕ ತಪ್ಪಿತಸ್ಥರಲ್ಲ ಎಂದರೆ ಮತ್ತೆ ಅಧಿಕಾರಕ್ಕೆ ಬರಲಿ..ಯಾವುದೇ ಆಕ್ಷೇಪ ಇಲ್ಲ ಎಂದಿದ್ದಾರೆ.
ಸದ್ಯಕ್ಕೆ ಅವರ ವಿರುದ್ಧ ಅಗತ್ಯ ಕ್ರಮಕೈಗೊಳ್ಳಬೇಕು.ಮುಡಾ ಹಗರಣ ಪ್ರಕರಣ ಸದ್ಯಕ್ಕೆ ವಿಚಾರಣೆ ಮುಗಿಯುವುದಿಲ್ಲ.14 ಸೈಟ್ ವಾಪಸ್ ನೀಡಿದ ಬಳಿಕ ತಪ್ಪಾಗಿರುವುದನ್ನ ಸಿಎಂ ಒಪ್ಪಿಕೊಂಡಿದ್ದಾರೆ. ಹೀಗಾಗಿ ಬಿಜೆಪಿಯ ಹೋರಾಟ ಮತ್ತಷ್ಟು ನಿರಂತರವಾಗಿ ನಡೆಯಲಿದೆ ಎಂದು ಹೇಳಿದ್ದಾರೆ.