ಮೈಸೂರು-ಕೊಡಗು(Mysore-Kodagu) ಲೋಕಸಭಾ(LokaSaba) ಕ್ಷೇತ್ರದ ಬಿಜೆಪಿ(BJP) ಅಭ್ಯರ್ಥಿಯಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಯದುವೀರ್ ಒಡೆಯರ್(Yaduveer Wadiyar) ಅವರು ಗುರುವಾರ ಬೆಂಗಳೂರಿನ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.

ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ(BS Yediyurappa) ಅವರು ಯದುವೀರ್ ಒಡೆಯರ ಅವರನ್ನು ಸ್ವಾಗತಿಸಿ, ಶುಭಕೋರಿದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(BY Vijayendra), ವಿಪಕ್ಷ ನಾಯಕ ಆರ್.ಅಶೋಕ್(R Ashok) ಸೇರಿದಂತೆ ಮತ್ತಿತರರು ಇದ್ದರು.

ಇಂದು ಸಂಜೆ ಮೈಸೂರಿಗೆ ಆಗಮಿಸಲಿರುವ ಯದುವೀರ್ ಒಡೆಯರ್ ಅವರು, ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದು, ಇದಾದ ಬಳಿಕ ನಗರಾಧ್ಯಕ್ಷ ಎಲ್. ನಾಗೇಂದ್ರ, ಸಂಸದ ಪ್ರತಾಪ್ ಸಿಂಹ(Prathap Simha) ಹಾಗೂ ಮಾಜಿ ಶಾಸಕ ಎಸ್.ಎ. ರಾಮದಾಸ್(SA Ramdas) ಅವರ ಮನೆಗಳಿಗೆ ಭೇಟಿ ನೀಡಲಿದ್ದಾರೆ.
#MysoreKodagu #YaduveerWadiyar #BJPKarnataka #Lokasaba2024 #BYVijayendra #BJPBSY