ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಮೊದಲ ಸೆಟ್ ನ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಯದುವೀರ್ ಆಸ್ತಿ ಎಷ್ಟು ಅನ್ನೋ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಯದುವೀರ್ ಒಡೆಯರ್ ಚರಾಸ್ತಿ ಮೌಲ್ಯ 4,99,59,303 ರೂಪಾಯಿ ಇದ್ದು, ಸದ್ಯ ಅವರ ಬಳಿ ಕೈಯಲ್ಲಿ ಒಂದು ಲಕ್ಷ ರೂಪಾಯಿ ನಗದು ಇದೆ. ಇನ್ನು ಯದುವೀರ್ ಒಡೆಯರ್ ಅವರ 2 ಬ್ಯಾಂಕ್ ಖಾತೆಗಳಲ್ಲಿ 23.55 ಲಕ್ಷ ಹಣ ಇದೆ. ಒಂದು ಕೋಟಿ ಮೌಲ್ಯದ ವಿವಿಧ ಕಂಪನಿಗಳಲ್ಲಿ ಬಾಂಡ್ ಮತ್ತು ಶೇರ್ ಹೊಂದಿದ್ದಾರೆ. ಇನ್ನು 4 ಕೆಜಿ ಚಿನ್ನ ಮತ್ತು 20 ಕೆಜಿ ಬೆಳ್ಳಿ ಇದೆ ಎಂದು ನಾಮಪತ್ರ ಅಫಿಡೆವಿಟ್ನಲ್ಲಿ ಘೋಷಿಸಿಕೊಂಡಿದ್ದಾರೆ.ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಹಾರಾಜ ಆಗಿದ್ದರೂ ಸಹ ಅವರು ಯಾವುದೇ ಕೃಷಿ ಭೂಮಿ, ಸ್ವಂತ ಮನೆ ಹೊಂದಿಲ್ಲ. ವಾಣಿಜ್ಯ ಕಟ್ಟಡಗಳಿಲ್ಲ. ಬ್ಯಾಂಕ್ನಿಂದ ಸಾಲ ಸಹ ಪಡೆದಿಲ್ಲ. ಹಾಗೇ ಯಾವುದೇ ರೀತಿಯ ಆದಾಯ ತೆರಿಗೆ ಹಣ ಬಾಕಿ ಉಳಿಸಿಕೊಂಡಿಲ್ಲ. ಇನ್ನು ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಯಾವ ಪ್ರಕರಣ ದಾಖಲಾಗಿಲ್ಲ ಎಂದು ಯದುವೀರ್ ಅಫಿಡವಿಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.
ಮೋದಿಯವರಿಗಿಂತ ದೊಡ್ಡವರಾದ್ರಾ ಯತ್ನಾಳ್, ಕಿತ್ತು ಬಿಸಾಕ್ರಿ ಅವ್ರನ್ನು: ರೇಣುಕಾಚಾರ್ಯ ವಾಗ್ದಾಳಿ
ಬೆಂಗಳೂರು:ರಾಜ್ಯ ಬಿಜೆಪಿಯಲ್ಲಿ ಯತ್ನಾಳ್ ಮತ್ತು ವಿಜಯೇಂದ್ರ ಬಣದ ನಡುವೆ ತಿಕ್ಕಾಟ ಜೋರಾಗಿದೆ. ಇಂದು ಸುದ್ದಿಗೋಷ್ಠಿ ನಡೆಸಿದ ಮಾಜಿ ಸಚಿವ ರೇಣುಕಾಚಾರ್ಯ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಗ್ದಾಳಿ...
Read moreDetails