ಯಮುನಾ ನದಿ ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ದೆಹಲಿಯಲ್ಲಿ ಜನರು ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಯಮುನಾ ನದಿ 205.33 ಅಡಿ ಎತ್ತರದಲ್ಲಿ ತುಂಬಿ ಹರಿಯುತ್ತಿದೆ. ಗರಿಷ್ಠ ಮಿತಿ 204.5 ಅಡಿ ಎತ್ತರ ಹೊಂದಿದ್ದು, ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.
ಯಮುನಾ ನದಿ ಪಾತ್ರದಲ್ಲಿನ ದೆಹಲಿ ಜನರು ಕೂಡಲೇ ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ. ರಾಜಧಾನಿಯಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.ʼ
ಭಾರತೀಯ ಹವಾಮಾನ ಇಲಾಖೆ ಉತ್ತರ ಭಾರತದಲ್ಲಿ ಇನ್ನು ಕೆಲವು ದಿನಗಳ ಕಾಲ ಮಳೆ ಆಗಲಿದೆ ಎಂದು ಸೂಚನೆ ನೀಡಿದ್ದು, ಉತ್ತರಾಖಂಡ್, ಹಿಮಾಚಲ ಪ್ರದೇಶಗಳಲ್ಲಿ ಕೂಡ ಭಾರೀ ಮಳೆಯ ಮುನ್ಸೂಚನೆ ನೀಡಿದೆ.