ವರುಣಾ ಕ್ಷೇತ್ರದ ಶಾಸಕ ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತಮ್ಮ ಸ್ವಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬೈಕ್‌ನಲ್ಲಿ ರೌಂಡ್ಸ್ ಹೊಡೆಯುವ ಮೂಲಕ ಸಾರ್ವಜನಿಕರ ಅಹವಾಲನ್ನು ಆಲಿಸಿದ್ದಾರೆ.
ವರುಣಾ ಕ್ಷೇತ್ರ ವ್ಯಾಪ್ತಿಗೆ ಬರುವ ನಂಜನಗೂಡು ತಾಲ್ಲೂಕಿನಲ್ಲಿರುವ ಹೊಸಕೋಟೆ ಗ್ರಾಮದ ಪ್ರತಿ ಮನೆ ಮನೆಗೂ ತೆರಳಿ ಸಾರ್ವಜನಿಕರ ಕುಂದು ಕೊರತೆಗಳನ್ನ ಆಲಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ನಮ್ಮ ತಂದೆಯವರಾದ ಸಿದ್ದರಾಮಯ್ಯನವರು ವರುಣಾ ಕ್ಷೇತ್ರದಿಂದ ಸ್ಪರ್ದಿಸಿದರೆ ಒಳಿತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಅಪ್ಪ ವರುಣಾದಿಂದ ಗೆದ್ದು ಸಿಎಂ ಆದರು, ಹೀಗಾಗಿ ಅವರಿಗೆ ವರುಣಾ ಕ್ಷೇತ್ರ ಲಕ್ಕಿ ಕೊನೆಯ ಚುನಾವಣೆಯಲ್ಲಿ ವರುಣಾದಿಂದ ಸ್ಪರ್ಧಿಸಬೇಕು ಅನ್ನೋದು ಜನರ ಇಚ್ಛೆ. ಕೋಲಾರ ಸೇರಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವಂತೆ ಆಹ್ವಾನಿಸುತ್ತಿದ್ದಾರೆ. ಆದರೆ, ಅಪ್ಪ ವರುಣಾದಿಂದ ಸ್ಪರ್ಧಿಸಬೇಕು ಎಂಬುದು ನನ್ನ ಆಸೆ ವರುಣಾದಿಂದ ಸ್ಪರ್ಧಿಸಿದರೆ ನಾನು ಅವರ ಪರವಾಗಿ ಪ್ರಚಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.











