ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ(yatindra siddaramiah) ಮತ್ತೆ ವಿವಾದದ ಕೇಂದ್ರಬಿಂದು ಆಗಿದ್ದಾರೆ. ಮತ್ತೊಮ್ಮೆ ಯಡವಟ್ಟಿನ ಹೇಳಿಕೆ ಕೊಟ್ಟು ಪೇಚಿಗೆ ಸಿಲುಕಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರು ಮಂಗಳ ಸೂತ್ರ ಮಾತ್ರವಲ್ಲ ಗಂಡ ಹಾಗೂ ಮಕ್ಕಳನ್ನು ಕಳೆದುಕೊಳ್ಳುತ್ತಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾತ್ನಾಡಿದ ಅವರು, ಬಿಜೆಪಿ ಕೋಮು ಗಲಭೆ ಸೃಷ್ಟಿಸಿ ಮಕ್ಕಳನ್ನು ಸಾಯುವಂತೆ ಮಾಡುತ್ತಾರೆ. ಮಕ್ಕಳನ್ನ ಕೋಮು ಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಗಳಾಗಿ ಮಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಮತೀಯ ಭಾವನೆ ಕೆರಳಿಸುವ ರೀತಿ ಮಾತನಾಡಿದ್ದಾರೆ. ಯಾವುದೇ ಪ್ರಜಾಪ್ರಭುತ್ವದಲ್ಲೂ ಈ ರೀತಿ ಮಾತನಾಡೋದಿಲ್ಲ. ಆದ್ರೆ, ಪ್ರಧಾನಿ ಮೋದಿ(pmmodiji) ಅವ್ರು ತುಚ್ಛವಾಗಿ ಮಾತನಾಡಿದ್ದಾರೆ. ಇಷ್ಟಾದ್ರೂ ಚುನಾವಣಾ ಆಯೋಗ ಯಾಕೆ ಕಣ್ಣುಮುಚ್ಚಿ ಕುಳಿತಿದ್ಯೋ ಗೊತ್ತಿಲ್ಲ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಯಾವುದೇ ಪ್ರಜಾಪ್ರಭುತ್ವದಲ್ಲೂ ಈ ರೀತಿ ಮಾತನಾಡೋದಿಲ್ಲ. ಆದ್ರೆ, ಪ್ರಧಾನಿ ಮೋದಿ ಅವ್ರು ತುಚ್ಛವಾಗಿ ಮಾತನಾಡಿದ್ದಾರೆ. ಇಷ್ಟಾದ್ರೂ ಚುನಾವಣಾ ಆಯೋಗ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಡಾ.ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ರು.

ರಾಜ್ಯದಲ್ಲಿ 70 ವರ್ಷಗಳಿಂದ ವಿವಿಧ ಪಕ್ಷಗಳು ಆಡಳಿತ ನಡೆಸಿವೆ. ಹಿಂದುಗಳಿಗೆ ಈವರೆಗೆ ಯಾವುದೇ ಅನ್ಯಾಯ ಆಗಿಲ್ಲ. ಬಿಜೆಪಿಯವರು(BJP) ಸಮಾಜವನ್ನು ಅಧಃಪತನಕ್ಕೆ ಹೋಗುವಂತೆ ಮಾಡುತ್ತಾರೆ. ಮಕ್ಕಳನ್ನು ಕೋಮುಗಲಭೆಯಲ್ಲಿ ತೊಡಗಿಸಿ ನಿರುದ್ಯೋಗಿಗಳನ್ನಾಗಿ ಮಾಡುತ್ತಾರೆ. ಮತೀಯ ಭಾವನೆ ಕೆರಳಿಸುವ ರೀತಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ ಎಂದು ಕಿಡಿಕಾರಿದ್ರು.ರಾಜಸ್ಥಾನದ ಬನ್ಸ್ವಾರಾದಲ್ಲಿ ಭಾನುವಾರ ಲೋಕಸಭಾ ಚುನಾವಣಾ ಪ್ರಚಾರ ರ್ಯಾ ಲಿ ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡಲಿದೆ ಎಂದಿದ್ದರು. ದೇಶದ ಸಂಪನ್ಮೂಲಗಳ ಮೇಲೆ ಅಲ್ಪಸಂಖ್ಯಾತರಿಗೆ ಮೊದಲ ಹಕ್ಕು ಇದೆ ಎಂಬ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ ಮೋದಿ, ಕಾಂಗ್ರೆಸ್ ಮಹಿಳೆಯರಿಂದ ಮಂಗಳಸೂತ್ರಗಳನ್ನು ಕಸಿದುಕೊಂಡು ನುಸುಳುಕೋರರಿಗೆ ನೀಡಲಿದೆ ಎಂದು ಟೀಕಿಸಿದ್ದರು.