ರಾಜ್ಯದಿಂದ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು ಕೊಡುವ ಮೂಲಕ ನರೇಂದ್ರ ಮೋದಿ (Narendra modi) ಕೈಯನ್ನು ಬಲ ಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (BSyadiyurappa) ನಾಯಕರಿಗೆ ಕರೆ ಕೊಟ್ಟರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ (BJP) ಕಾರ್ಯಕಾರಿಣಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಲೋಕಸಭೆ ಚುನಾವಣೆಯಲ್ಲಿ ಭಾರತವನ್ನೇ ಗೆಲ್ಲಿಸುವ ಚುನಾವಣೆ. ಜನ ಕಾಂಗ್ರೆಸ್ ಸರ್ಕಾರದ ವಿರುದ್ದ ಬೇಸತ್ತಿದ್ದಾರೆ. ರಾಜ್ಯದಲ್ಲಿ ಹೆಣ್ಣು ಮಕ್ಕಳ ರಕ್ಷಣೆಯಾಗುತ್ತಿಲ್ಲ. ಇದನ್ನ ನೋಡಿಕೊಂಡು ಸುಮ್ಮನೆ ಕೂರಲು ಸಾಧ್ಯವಿಲ್ಲ. ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳನ್ನ ಗೆಲ್ಲಬೇಕು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿ, ಯಾವ ಕ್ಷಣದಲ್ಲಾದರೂ ಲೋಕಸಭೆ ಚುನಾವಣೆ ಘೋಷಣೆಯಾಗಬಹುದು. ಏಪ್ರಿಲ್ ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಯಾರನ್ನೂ ಹಗುರವಾಗಿ ತೆಗೆದುಕೊಳ್ಳುವುದು ಬೇಡ ಎಂದು ತಿಳಿಸಿದರು.