ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನ ರದ್ದುಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ. ಅಲ್ಲದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ಮತ್ತ ವಿಸ್ತರಣೆ ಮಾಡಿದೆ.ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ.
ಪತ್ನಿ ಕಿರುಕುಳಕ್ಕೆ ಬಲಿಯಾದ ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ತಂದೆಯಿಂದ ಪೋಲೀಸರ ಮೇಲೆ ಆರೋಪ..
ಸಮಷ್ಟಿಪುರ್: ಬಿಹಾರದ ಸಮಷ್ಟಿಪುರ ಜಿಲ್ಲೆಯ ವೈನಿ ಪೊಲೀಸ್ ಠಾಣೆಯ ನಿವಾಸಿ, ಮೃತ ಇಂಜಿನಿಯರ್ ಅತುಲ್ ಸುಭಾಷ್ ಅವರ ತಂದೆ ಪವನ್ ಮೋದಿ ಅವರು ಸಮಷ್ಟಿಪುರ ಪೊಲೀಸರ ಕಾರ್ಯಾಚರಣೆಯ...
Read moreDetails