ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಭಾನುವಾರ ಕ್ಯಾಬಿನೆಟ್ ದರ್ಜೆಯ ಸವಲತ್ತುಗಳನ್ನು ನಯವಾಗಿ ತಿರಸ್ಕರಿಸಿದ್ದಾರೆ ಮತ್ತು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಲಾದ ಆದೇಶವನ್ನು ಹಿಂಪಡೆಯುವಂತೆ ಅವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಬೊಮ್ಮಾಯಿ ಅವರಿಗೆ ಬರೆದ ಒಂಬತ್ತು ಸಾಲಿನ ಪತ್ರದಲ್ಲಿ, ಯಡಿಯುರಪ್ಪ ಅವರು ಮಾಜಿ ಮುಖ್ಯಮಂತ್ರಿಗೆ ನೀಡಲಾಗಿರುವ ನ್ಯಾಯಸಮ್ಮತ ಪ್ರಯೋಜನಗಳನ್ನು ಪಡೆಯಲು ತೃಪ್ತಿ ಹೊಂದಿರುವುದಾಗಿ ಅವರು ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
“ಈ ಆದೇಶವನ್ನು ಹಿಂಪಡೆಯುವಂತೆ ನಾನು ನಮ್ಮ ನೂತನ ಮುಖ್ಯಮಂತ್ರಿಯನ್ನು ವಿನಂತಿಸುತ್ತೇನೆ” ಎಂದು ಅವರು ಭಾನುವಾರ ಸುದ್ದಿಗಾರರಿಗೆ ತಿಳಿಸಿದರು.
ಶನಿವಾರ, ಆಗಷ್ಟ್ 7ರಂದು ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಗಳ (DPAR) ಇಲಾಖೆಯು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವನ್ನು ನೀಡಲು ಸುತ್ತೋಲೆ ಹೊರಡಿಸಿತ್ತು, ಈ ಸೌಲಭ್ಯವು ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವರೊಂದಿಗೆ ಸರಿಸಮಾನವಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುವು ಮಾಡಿಕೊಡುತ್ತದೆ ಇದು ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದರಿಂದ ಮಾಜಿ ಮುಖ್ಯಮಂತ್ರಿ ಬಿ ಎಸ್ ವೈ ಮುಖ್ಯಮಂತ್ರಿಗಳ ಆದೇಶವನ್ನ ನಯವಾಗಿಯೆ ತಿರಸ್ಕರಿಸಿದ್ದಾರೆ.