
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡುವ ವಿಚಾರದ ಬಗ್ಗೆ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಸಲು ನಾವು ಹೋರಾಟ ಮಾಡಿದ್ದು ನಿಜ. ಈ ಬಗ್ಗೆ ಹೈಕಮಾಂಡ್ ಕೈಗೊಳ್ಳುವ ನಿರ್ಣಯಕ್ಕೆ ನಾವು ಬದ್ಧ ಎಂದಿದ್ದಾರೆ.

ಯಡಿಯೂರಪ್ಪರವರ ಬಗ್ಗೆ ನಮಗೆ ಅಪಾರವಾದ ಗೌರವ ಇದೆ. ಯಡಿಯೂರಪ್ಪ ರಾಜ್ಯ ಪ್ರವಾಸ ಮಾಡಿದರೆ ಸ್ವಾಗತ ಎಂದಿರುವ ರಮೇಶ್ ಜಾರಕಿಹೊಳಿ, ಯಾಕೆ ಪ್ರವಾಸ ಮಾಡುತ್ತಿದ್ದಾರೆ ಅದನ್ನ ಸ್ಪಷ್ಟಪಡಿಸಬೇಕು. ಮಗನ ಸ್ಥಾನ ಭದ್ರ ಮಾಡೋಕೆ ಮಾಡ್ತಿದಾರಾ..? ಪಕ್ಷ ಭದ್ರ ಮಾಡೋಕೆ ಮಾಡ್ತಿದಾರಾ..? ಅದನ್ನು ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಯಡಿಯೂರಪ್ಪರವರೇ ನಿಮ್ಮ ಬಗ್ಗೆ ಗೌರವ ಇದೆ, ವಯಸ್ಸಾಗಿದೆ ಪಕ್ಷ ಎಲ್ಲವನ್ನು ನಿಮಗೆ ಕೊಟ್ಟಿದೆ. ದಯವಿಟ್ಟು ಪಕ್ಷವನ್ನು ಬ್ಲ್ಯಾಕ್ಮೇಲ್ ಮಾಡಿ. ವಿಜಯೇಂದ್ರ ಬೆನ್ನು ಹತ್ತಿದ್ರೆ ನೀವೂ ಹಾಳಾಗುತ್ತೀರಿ. ಮಗನಾಗಿ ನೋಡಬೇಡಿ, ವೈಫಲ್ಯಗೊಂಡ ಅಧ್ಯಕ್ಷ ಅಂತಾ ನೋಡಿ. ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕಕ್ಕೆ ಸಹಕಾರ ಕೊಡಿ ಎಂದಿದ್ದಾರೆ ರಮೇಶ್ ಜಾರಕಿಹೊಳಿ.