• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇದು ಗೂಗ್ಲಿಯೂ ಹೌದು ; ಮೊದಲ ಬಾಲಿಗೆ ಸಿಕ್ಸರೂ ಹೌದು!

ರಾಜರಾಮ್ ತಲ್ಲೂರ್ by ರಾಜರಾಮ್ ತಲ್ಲೂರ್
August 3, 2022
in ಕರ್ನಾಟಕ, ದೇಶ, ರಾಜಕೀಯ
0
ಇದು ಗೂಗ್ಲಿಯೂ ಹೌದು ; ಮೊದಲ ಬಾಲಿಗೆ ಸಿಕ್ಸರೂ ಹೌದು!
Share on WhatsAppShare on FacebookShare on Telegram

ಒಂದು ಆಡಳಿತಪಕ್ಷ ದುರಾಡಳಿತದಲ್ಲಿ ತೊಡಗಿರುವಾಗ, ವಿರೋಧಪಕ್ಷ ಶಕ್ತಿಹೀನವಾಗುತ್ತಿದೆ ಎಂದು ಬಿಂಬಿತವಾಗುತ್ತಿರುವಾಗ ರಾಜ್ಯದ ಪ್ರಮುಖ ವಿರೋಧಪಕ್ಷ ಕಾಂಗ್ರೆಸ್ಸಿಗೆ ಇಂತಹದೊಂದು ಬೂಸ್ಟರ್ ಡೋಸ್ ಬೇಕಿತ್ತು. ಈಗ ಸಂಜೆಯ ಹೊತ್ತಿಗೆ ಕಾಂಗ್ರೆಸ್ಸಿಗರಲ್ಲಿ ಬೂಸ್ಟರ್ ಡೋಸ್ ಪಡೆದ ಭಾವ ಕಾರ್ಯಕರ್ತರ ನೆಲಮಟ್ಟದಲ್ಲೂ, ಸೋಷಿಯಲ್ ಮೀಡಿಯಾದ ಮುಗಿಲಿನಲ್ಲೂ ಕಾಣಿಸುತ್ತಿದೆ ಎಂಬ ಮಟ್ಟಿಗೆ ಈವತ್ತಿನ “ದಾವಣಗೆರೆ ಶೋಆಫ್” ಯಶಸ್ವಿ.

ADVERTISEMENT

ಒಂದು ಕ್ಷಣ, ಈ ಸಿದ್ಧರಾಮೋತ್ಸವದ ರನ್‌ಅಪ್ ಕಡೆ ಹಿಂದಿರುಗಿ ನೋಡಿ.

ಆಳುವವರ ಪರ ಇರುವ ರಾಜ್ಯದ ಬಹುತೇಕ ಮಾಧ್ಯಮಗಳು, ಇದು ಸಿದ್ಧರಾಮಯ್ಯ-ಡಿಕೆ ಶಿವಕುಮಾರ್ ನಡುವಿನ ಶೋಡೌನ್ ಎಂದೇ ಬಿಂಬಿಸಿದ್ದವು. ಕಾಂಗ್ರೆಸ್ಸಿನ ಒಡಕು ಈ ಸಮಾರಂಭದ ಮೂಲಕ ಹೊರಬೀಳಲಿದೆ ಎಂಬುದು ಅವರ ತುಂಬು ನಿರೀಕ್ಷೆ ಆಗಿತ್ತು. ಸಮಾರಂಭಕ್ಕೆ “ಐವತ್ತು ಕೋಟಿ ಖರ್ಚು ಮಾಡುವ ಸಮಾಜವಾದ” ಎಂಬ ಟೀಕೆಯಿಂದ ಹಿಡಿದು, ಸಿದ್ಧರಾಮಯ್ಯ ಸುಳ್ಳು ಜನ್ಮದಿನಾಂಕದೊಂದಿಗೆ ಹುಟ್ಟಿದ ಹಬ್ಬ ಆಚರಣೆಯ ತುರ್ತಿಗೆ ಬಿದ್ದಿದ್ದಾರೆ ಎಂಬಲ್ಲಿಯ ತನಕ “ಅಪ”ಪ್ರಚಾರ ನಡೆದಿತ್ತು. ಪ್ರಚಾರಕ್ಕಿಂತ ಅಪಪ್ರಚಾರದ ಅಬ್ಬರವೇ ಹೆಚ್ಚಿತ್ತು. ಇದರ ಪರಿಣಾಮವಾಗಿ ಈ ಸಮಾರಂಭದ ಹೆಸರು “ಸಿದ್ಧರಾಮೋತ್ಸವ” ಇರಬೇಕೇ ಬೇಡವೇ ಎಂಬ ಚರ್ಚೆ ಕೂಡ ಕಾಂಗ್ರೆಸ್ಸಿನೊಳಗೆ ನಡೆದ ಬಗ್ಗೆ ಸುದ್ದಿ ಆಗಿತ್ತು.

ಇಂತಹದೊಂದು “ಶೇಕೀ ರನ್ ಅಪ್” ಜೊತೆಗೇ ಆರಂಭಗೊಂಡ “ಸಿದ್ಧರಾಮಯ್ಯನವರ 75ನೇ ಹುಟ್ಟುಹಬ್ಬದ ತಯಾರಿ, ಇಂದು ಬೆಳಗ್ಗೆಯ ಹೊತ್ತಿಗೆ ಹದಿನೈದು ಕಿಲೋಮೀಟರ್ ಹಿಂದೆಯೇ ಜನಸಂದಣಿಯ ಕಾರಣಕ್ಕೆ ಟ್ರಾಫಿಕ್ ಜಾಮ್ ಎಂಬಂತಹ ಸುದ್ದಿಗಳ ಜೊತೆ ಅಂತಿಮ ಹಂತ ತಲುಪಿದ್ದು, ಕಾಂಗ್ರೆಸ್ಸಿಗರು ಈ ಸಮಾವೇಶವನ್ನು ಎಷ್ಟು ಗಂಭೀರವಾಗಿ ಪರಿಗಣಿಸಿದ್ದರು ಎಂಬುದಕ್ಕೆ ಸೂಚನೆ. ಕಾಂಗ್ರೆಸ್ಸಿಗೆ ತಾನು ಮರೆತೇ ಹೋಗಿದ್ದ “ಸ್ವಸಾಮರ್ಥ್ಯ ಮರುಪರಿಚಯ”ಕ್ಕೆ ಇಂತಹದೊಂದು ಬೂಸ್ಟರ್ ಡೋಸ್ ಅಗತ್ಯ ಇತ್ತು. ಒಂದಿಡೀ ಟರ್ಮ್ ಆಡಳಿತ ನಡೆಸಿದ್ದ ಸಿದ್ಧರಾಮಯ್ಯ ಸರ್ಕಾರ 55-45 ತರದಲ್ಲಿ ಸೋತರೂ ಬಾಹ್ಯ ಬೆಂಬಲದಿಂದ ಸರ್ಕಾರ ರಚಿಸಿದ್ದು, ಪ್ರಲೋಭನೆಯ ಪಕ್ಷಾಂತರಗಳಿಂದಾಗಿ ಅಧಿಕಾರ ಕಳೆದುಕೊಂಡದ್ದು… ಎಲ್ಲವನ್ನೂ ಕಾಂಗ್ರೆಸ್ ಕಾರ್ಯಕರ್ತರು ಮರೆತಂತೆ ಕಾಣುತ್ತಿತ್ತು.

ಯಾಕೆ ಈ ಮರೆವು ಉಂಟಾಗಿತ್ತೆಂದರೆ “ಡಬ್ಬಲ್ ಎಂಜಿನ್” ಭೋರ್ಗರೆತ ಅಷ್ಟು ಗಟ್ಟಿಯಾಗಿತ್ತು! ಜೊತೆಗೆ #ಡಿಯರ್_ಮೀಡಿಯಾ ಪ್ರತಿಪಕ್ಷವನ್ನೇ ಆಡಳಿತಪಕ್ಷವೆಂದು ಪರಿಗಣಿಸಿ ಪ್ರಹಾರ ನಿರತವಾಗಿತ್ತು. ಮೆದುಳಿಗೆ ಈ ಸತತ ಪ್ರಹಾರದ ಪರಿಣಾಮ ಮತ್ತು ಕೋವಿಡ್ ಮತ್ತಿತರ ಸಂಕಷ್ಟಗಳು ಕಾಂಗ್ರೆಸ್ ಕಾರ್ಯಕರ್ತರನ್ನು ವಿನಮನಸ್ಕಗೊಳಿಸಿದ್ದವು. ತಳಮಟ್ಟದಲ್ಲಿ ಅವರ ಶಕ್ತಿ ಸಾಮರ್ಥ್ಯಗಳು ಅವರಿಗೇ ಮರೆತುಹೋಗಿದ್ದವು. ಇಂದಿನ ಸಮಾರಂಭ ಅದನ್ನು ಬಡಿದೆಚ್ಚರಿಸಿದೆ. ಇಂದು ಸಮಾರಂಭದ ವೇದಿಕೆಯಲ್ಲಿದ್ದ ನಾಯಕಗಢಣದ ಮಾತುಗಳು, ಅಭಿವ್ಯಕ್ತಿಗಳು ಈ “ಸಂತಸ”ವನ್ನು ಸಾರಿ ಸಾರಿ ಹೇಳುತ್ತಿದ್ದವು. ಅವರೆಲ್ಲರ ನಿರೀಕ್ಷೆ ಮೀರಿ ದಾವಣಗೆರೆಗೆ ಕಾಂಗ್ರೆಸ್ ಕಾರ್ಯಕರ್ತರು ಲಗ್ಗೆ ಇಟ್ಟಿದ್ದರು!

ಈ ಸಮಾರಂಭ ಏಕೆ ಗೂಗ್ಲಿ ಎಂದರೆ, ಸಿದ್ಧರಾಮಯ್ಯ ಅವರ “ಜನ್ಮದಿನ ಸಂಭ್ರಮ” ಎಂದೇ ಎಲ್ಲರೂ ಊಹಿಸಿಕೊಂಡಿದ್ದ ಈ ಕಾರ್ಯಕ್ರಮ, ಕಾಂಗ್ರೆಸ್ಸಿನ ಮಟ್ಟಿಗೆ ವಿಧಾನಸಭಾ ಚುನಾವಣೆಗಳಿಗೆ ತಯಾರಿಯ ಉದ್ಘಾಟನಾ ಸಮಾರಂಭ ಆಗಿ ಬದಲಾಗಿತ್ತು. ಆ ಮಟ್ಟಿಗೆ ಕಾರ್ಯಕ್ರಮದ ಆಯೋಜಕರು ಮತ್ತು ಸಿದ್ಧರಾಮಯ್ಯನವರ ಸೂಕ್ಷ್ಮಗ್ರಾಹಿತ್ವವನ್ನು ಮೆಚ್ಚಬೇಕು. ಆಡಳಿತಪಕ್ಷಕ್ಕೆ ಇದು ಅನಿರೀಕ್ಷಿತ. ಇಂತಹದೊಂದು ನಿರೀಕ್ಷೆ ಇದ್ದಿದ್ದರೆ, ಅವರದನ್ನು ಬೇರೆ ರೀತಿಯಲ್ಲಿ ನಿಭಾಯಿಸಲು ಅವಕಾಶಗಳಿದ್ದವು. ಬೇರೆಲ್ಲ ವ್ಯವಸ್ಥೆ ಮಾಡಿಕೊಂಡು, ಸಿದ್ಧರಾಮಯ್ಯನವರನ್ನು ಕಟ್ಟಿ ಹಾಕುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಆಡಳಿತ ಪಕ್ಷಕ್ಕೆ ಈವತ್ತು ದಾವಣಗೆರೆಯಲ್ಲಿ ಸೇರಿದ ಜನಸಾಗರ, ವೇದಿಕೆಯಲ್ಲಿದ್ದ ಕಾಂಗ್ರೆಸ್ ನಾಯಕರ ಮೂಡ್ ಹೊಸ ಚಿಂತೆಯ ಗೆರೆಗಳನ್ನು ಮೂಡಿಸಿದ್ದರೆ ಅಚ್ಚರಿ ಇಲ್ಲ. ತಳಮಟ್ಟದಲ್ಲಿ ಎಲ್ಲವೂ ಸರಿಯಾಗಿಲ್ಲ, ಜನಸಾಮಾನ್ಯರ ಪರಿಸ್ಥಿತಿ ತೀರಾ ಕೆಟ್ಟಿದ್ದು, ಕೇವಲ “ಮೋದಿ” ಹೆಸರು ಈ ಬಾರಿ ಮತ್ತೊಮ್ಮೆ ಓಟು ತಂದುಕೊಡದು ಎಂಬುದು ಅವರಿಗೂ ಅರಿವಿದೆ.

ಈವತ್ತು ಬೆಳಗ್ಗೆ ದಾವಣಗೆರೆಯಲ್ಲಿ ಒಮ್ಮೆ ಜನಸಾಗರವನ್ನು ನೋಡಿದ ಬಳಿಕ ಕಾಂಗ್ರೆಸ್ ನಾಯಕರೆಲ್ಲರೂ “ಸಿಕ್ಸರ್” ಬಾರಿಸುವ ಹುಮ್ಮಸ್ಸಿನಲ್ಲಿದ್ದರು. ಅವರ ಮಾತುಗಳಲ್ಲಿ ಅದು ಮತ್ತೆ ಮತ್ತೆ ವ್ಯಕ್ತವಾಯಿತು. ಡಿ ಕೆ ಶಿವಕುಮಾರ್, ಸಿದ್ಧರಾಮಯ್ಯ ಮತ್ತು ಅವರ ಸರ್ವೋಚ್ಛನಾಯಕ ರಾಹುಲ್ ಗಾಂಧಿ ಮೂವರೂ ಬಹಳ ಎಚ್ಚರಿಕೆಯಿಂದ ತಮ್ಮ ಮಾತುಗಳನ್ನು ಆಯ್ದುಕೊಳ್ಳುವ ಮೂಲಕ, “ಸಿದ್ಧರಾಮೋತ್ಸವ” ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 2023ರ ಚುನಾವಣಾ ಪ್ರಚಾರದ ಆರಂಭ ಎಂಬುದನ್ನು ಕಾರ್ಯಕರ್ತರಿಗೆ ತಲುಪಿಸಿದರು.

ಈ ಸಿಕ್ಸರ್ ಕೂಡ ಆಡಳಿತ ಪಕ್ಷಕ್ಕೆ ಅನಿರೀಕ್ಷಿತ.

ಆಟ ಇಲ್ಲಿಗೇ ಮುಗಿಯುವುದಿಲ್ಲ. ಇದಿನ್ನೂ ಆರಂಭ ಮಾತ್ರ. ಆದರೆ ತಯಾರಿಯ ಕೊರತೆಯಿಂದ ಕಂಗೆಟ್ಟಿದ್ದ ಕಾಂಗ್ರೆಸ್ ಮಟ್ಟಿಗೆ ಇವತ್ತಿನದು ಭರ್ಜರಿ ಆರಂಭ ಎಂಬುದರಲ್ಲಿ ಸಂಶಯ ಇಲ್ಲ. ಕಾಂಗ್ರೆಸ್ಸಿಗರು ಈವತ್ತಿನದೇ ಕೊನೆಯ ಬಾಲ್, ಸಿಕ್ಸರ್ ಬಿದ್ದಿದೆ ಅಂದುಕೊಂಡು ತಣ್ಣಗೆ ಕುಳಿತರೆ ಮಾತ್ರ ಕೆಟ್ಟರು.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪೈಪ್‌ ಲೈನ್‌ ರಿಪೇರಿ ಎಫೆಕ್ಟ್:‌ ಟಿಜಿ ಲೇಔಟ್‌ ನಲ್ಲಿ ಮನೆಯೊಳಗೆ ಹರಿದ ಚರಂಡಿ ನೀರು!

Next Post

ಕಾಮನ್‌ ವೆಲ್ತ್:‌ ಭಾರತ ಪುರುಷರ ಹಾಕಿಗೆ ಭರ್ಜರಿ ಜಯ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
Next Post
ಏಷ್ಯಾಕಪ್ ಹಾಕಿ: ಭಾರತ-ಪಾಕಿಸ್ತಾನ 1-1 ರೋಚಕ ಡ್ರಾ

ಕಾಮನ್‌ ವೆಲ್ತ್:‌ ಭಾರತ ಪುರುಷರ ಹಾಕಿಗೆ ಭರ್ಜರಿ ಜಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada