ಬೆಂಗಳೂರು (Bangalore) ಹಾಗೂ ಸುತ್ತಮುತ್ತಲ ಜಿಲ್ಲೆಗಳಿಗೆ ಕುಡಿಯುವ ನೀರು ಹರಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯನ್ನು (yettina hole project) ಇಂದು ಲೋಕಾರ್ಪಣೆ ಮಾಡಲು ಸರ್ಕಾರ ಮುಂದಾಗಿದೆ.
ಹಾಸನದ ಸಕಲೇಶಪುರ ತಾಲ್ಲೂಕಿನ ಪಶ್ಚಿಮಘಟ್ಟದ (werstern ghats) ಮೇಲ್ಬಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ, ಹೊಂಗದಹಳ್ಳದಿಂದ 24.01 ಟಿಎಂಸಿ ನೀರನ್ನು ಹರಿಸುವ ಯೋಜನೆಗೆ ಇಂದು ಚಾಲನೆ ನೀಡಲಾಗುತ್ತದೆ.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ, 6,657 ಗ್ರಾಮಗಳ ಸುಮಾರು 75.59 ಲಕ್ಷ ಜನರಿಗೆ ಕುಡಿಯುವ ನೀರು ಒದಗಿಸಲು ಉದ್ದೇಶಿಸಲಾಗಿದೆ. ಇಂದು ಸಿಎಂ ಸಿದ್ದರಾಮಯ್ಯ (Cm siddaramaiah), ಡಿಸಿಎಂ ಡಿಕೆ ಶಿವಕುಮಾರ್ (Dcm dk shivakumar) ಹಾಗೂ ಸಚಿವರು ಉದ್ಘಾಟನೆ ಮಾಡಲಿದ್ದಾರೆ.