• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಪ್ರತಿಧ್ವನಿ by ಪ್ರತಿಧ್ವನಿ
June 17, 2025
in Top Story, ಕರ್ನಾಟಕ
0
ವಿಶ್ವ ಯೋಗ ದಿನದಂದು ‘ಯೋಗ ಸಂಗಮ’ ಕಾರ್ಯಕ್ರಮ – ರಾಜ್ಯಾದ್ಯಂತ 5 ಲಕ್ಷ ಜನರಿಂದ ಯೋಗಭ್ಯಾಸ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Share on WhatsAppShare on FacebookShare on Telegram

ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ

ADVERTISEMENT

ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ

ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ ‘ಯೋಗ ಸಂಗಮ’ ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಂದು ರಾಜ್ಯಾದಾದ್ಯಂತ 5 ಲಕ್ಷ ಜನರು ಯೋಗಭ್ಯಾಸ ನಡೆಸಲು ರಾಜ್ಯ ಸರ್ಕಾರ ಅನುವು ಮಾಡಿಕೊಡುತ್ತಿದೆ ಎಂದರು.

‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಈ ಬಾರಿಯ ವಿಶ್ವ ಯೋಗ ದಿನಾಚರಣೆಯನ್ನ ಆಚರಿಸಲಾಗುವುದು. ಜೂನ್ 21 ರ ಮುಂಜಾನೆ 6 ಗಂಟೆಯಿಂದ 8 ಗಂಟೆಯವರೆಗೆ 5000 ಜನರು ವಿಧಾನ ಸೌಧದ ಮೆಟ್ಟಿಲುಗಳ ಎದುರು ಯೋಗಾಭ್ಯಾಸ ನಡೆಸಲಿದ್ದು, ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಶಾಸಕರು, ಸಂಸದರು, ಕ್ರೀಡಾಪಟುಗಳು, ತಾರೆಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Siddaramaiah on DK Shivakumar: ನವೆಂಬರ್ ಗೆ ಡಿಕೆಶಿ ಸಿಎಂ ಆಗ್ತಾರ.! ಮೌನವಾದ ಸಿಎಂ ಸಿದ್ದರಾಮಯ್ಯ #pratidhvani

ರಾಜ್ಯದಲ್ಲಿ ಮೈಸೂರನ್ನು ‘ಯೋಗ ಜಿಲ್ಲೆಯನ್ನಾಗಿ’ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದು, ಮೈಸೂರು ಜಿಲ್ಲೆಯ ಪ್ರತಿಯೊಂದ ಮನೆಗಳಲ್ಲಿ ಒಬ್ಬರಾದರೂ ಯೋಗಭ್ಯಾಸ ನಡೆಸುವಂತಾಗಬೇಕು ಎಂಬ ಗುರಿ ಹೊಂದಲಾಗಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಒಂದು ಜಿಲ್ಲೆಯನ್ನು ಸಂಪೂರ್ಣವಾಗಿ ಯೋಗ ಜಿಲ್ಲೆಯನ್ನಾಗಿ ರೂಪಿಸುವ ಕಾರ್ಯಕ್ಕೆ ರಾಜ್ಯ ಸರ್ಕಾರ ಕೈ ಹಾಕಿದ್ದು, ಈ ನಿಟ್ಟಿನಲ್ಲಿ ಮೈಸೂರು ಜಿಲ್ಲೆಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ತಿಳಿಸಿದರು.

ಮೈಸೂರಿನ ಅರಮನೆ ಆವರಣದಲ್ಲಿ ‘ಯೋಗ ಮಹಾಕುಂಭ’ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಯೋಗ ದಿನಾಚರಣೆಯಂದು 15000 ಜನರು ಯೋಗಭ್ಯಾಸ ನಡೆಸಲಿದ್ದಾರೆ. 30 ಜಿಲ್ಲಾ ಕೇಂದ್ರಗಳಲ್ಲಿ ‘ಯೋಗ ಸಂಗಮ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪ್ರತಿ ಕಾರ್ಯಕ್ರಮದಲ್ಲಿ ಕನಿಷ್ಠ 5000 ಜನರು ಭಾಗವಹಿಸಲಿದ್ದಾರೆ. ಬೆಳಗ್ಗೆ 7 ಗಂಟೆಯಿಂದ 7.45 ರ ವರೆಗೆ ರಾಜ್ಯದ 100 ಆರೋಗ್ಯ ಕೇಂದ್ರಗಳಲ್ಲಿ 45 ನಿಮಿಷಗಳ ಯೋಗ ಪ್ರಾತ್ಯಕ್ಷಿಕೆ ಪ್ರದರ್ಶನ ನಡೆಯಲಿದೆ.

ರಾಜ್ಯದ ಹಲವೆಡೆ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಪಾರ್ಕ್, ಯೋಗ ಧನುಷ್, ಹಸಿರು ಯೋಗ, ಯೋಗ ಮಹಾಕುಂಭ, ಯೋಗ ಸಂಯೋಗ, ಯೋಗ ಅನ್ ಪ್ಲಗ್ಸ್ ನಂತಹ ಕಾರ್ಯಕ್ರಮಗಳನ್ನು ರಾಜ್ಯದ ಆಯುಷ್ ಇಲಾಖೆಯಿಂದ ಆಯೋಜಿಸಲಾಗಿದೆ. ಹಸಿರು ಯೋಗ ಕಾರ್ಯಕ್ರಮದ ಅಡಿಯಲ್ಲಿ 1 ಲಕ್ಷ ಗಿಡಗಳನ್ನ ನಡಲಾಗುವುದು. ಅಲ್ಲದೇ ಯೋಗ ಧನಷ್ ಎಂಬ ಕಾರ್ಯಕ್ರಮದ ಮೂಲಕ ರಾಜ್ಯದಾದ್ಯಂತ 5 ಲಕ್ಷ ಜನರಿಗೆ ಯೋಗ ಪ್ರೋಟೋಕಾಲ್ ಅನ್ನು ಹೇಳಿಕೊಡಲಾಗಿದ್ದು, ಕಾರ್ಯಕ್ರಮದ ಅಡಿಯಲ್ಲಿ 5000 ಶಾಲೆಗಳಲ್ಲಿ ಯೋಗ ಪ್ರೋಟೋಕಾಲ್ ಅನ್ನು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಯೋಗ ಅನ್‌ಪ್ಲಸ್ಟ್ ಕಾರ್ಯಕ್ರಮದ ಅಡಿಯಲ್ಲಿ ಈಗಾಗಲೇ ಯುವಕರಿಗೆ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರಾಷ್ಟ್ರೀಯ ಸ್ಪರ್ಧೆಗಳ ಮುಖಾಂತರ ಸುಮಾರು 25000 ಜನರಿಗೆ ಯೋಗ ಕಾರ್ಯಕ್ರಮಗಳ ಅಡಿಯಲ್ಲಿ ತರಬೇತಿ ನೀಡುವ ವಿಶೇಷ ಕಾರ್ಯಕ್ರಮಗಳ ವಿನ್ಯಾಸಗೊಳಿಸಲಾಗಿದೆ.

ಜೂನ್ ಕೊನೆ ವಾರದಲ್ಲಿ ಒಂದು ವಿಶ್ವ ಒಂದು ಆರೋಗ್ಯದಲ್ಲಿ ಯೋಗದ ಪಾತ್ರ ಎಂಬ ರಾಷ್ಟ್ರೀಯ ವಿಚಾರಸಂಕೀರ್ಣವನ್ನು ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನಭವನದಲ್ಲಿ ಆಯೋಜಿಸಿದ್ದು ಇದರಲ್ಲಿ ರಾಷ್ಟ್ರೀಯ ಯೋಗ ತಜ್ಞರುಗಳು ತಮ್ಮ ವಿಚಾರವನ್ನು ಮಂಡಿಸಲಿದ್ದಾರೆ. ಜುಲೈ ಮೊದಲನೆಯ ವಾರದಲ್ಲಿ ಬೆಂಗಳೂರಿನ ಪ್ರಸಿದ್ದ ನಿಮಾನ್ಸ್ ಆಸ್ಪತ್ರೆಯ ಸಭಾಂಗಣದಲ್ಲಿ ಮಾನಸ ಯೋಗ ಎಂಬ ವಿಚಾರ ಸಂಕೀರ್ಣವನ್ನು ಆಯೋಚಿಸಲಾಗಿದೆ. ಇದೇ ರೀತಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಮೈಸೂರಿನಲ್ಲಿ ಕಾರ್ಡಿಯೋ ಯೋಗ ಹಾಗೂ ಕಿದ್ವಾಯಿ ಗ್ರಂಥಿ ಸಂಸ್ಥೆ, ಬೆಂಗಳೂರಿನಲ್ಲಿ ಕಾರಿನೋ ಯೋಗ ಎಂಬ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ.

Tags: dinesh gundudinesh gundu liveDinesh Gundu Raodinesh gundu rao latestdinesh gundu rao newsdinesh gundu rao speechdinesh gundu rao wifedinesh gundu rao'sdinesh gundu roadinesh gundu roa + previous tagsdinesh gundu roa slams bjpdinesh gundu roa takes a dig on bjpDinesh Gunduraokarnataka minister dinesh gundu raokpcc chief dinesh gundu roarv deshpande on dinesh gundu roa resignation
Previous Post

ನಟಿ ರಚಿತಾ ರಾಮ್‌ ವಿರುದ್ದ ದೂರು ಕೊಟ್ಟ ನಟ ಶ್ರೀನಗರ ಕಿಟ್ಟಿ & ನಾಗಶೇಖರ್..!

Next Post

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

Related Posts

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
0

ವಿಕಾಸದ ಗುರಿಯತ್ತ ಸಾಗುತ್ತಿರುವ ನವ-ಡಿಜಿಟಲ್‌ ಭಾರತ ಎಲ್ಲ ಮಗ್ಗುಲುಗಳಲ್ಲೂ ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದೆ. ದೇಶದ ಪ್ರಗತಿ ಅಥವಾ ಅಭಿವೃದ್ಧಿಯ ಕಲ್ಪನೆಯನ್ನು ಆರ್ಥಿಕ ಪರಿಭಾಷೆಯಿಂದ ಹೊರತುಪಡಿಸಿ ವಿಶ್ಲೇಷಿಸುವಾಗ ಸಹಜವಾಗಿ...

Read moreDetails
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

ಕೋರ್ಟ್‌ಗೆ ಹಾಜರಾದ ರಾಜೀವ್‌ ಗೌಡ : ಕೈ ಮುಖಂಡನಿಗೆ ಜೈಲಾ? ಬೇಲಾ..?

January 27, 2026
Next Post
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada