• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Jungle Mangal:ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.

ಪ್ರತಿಧ್ವನಿ by ಪ್ರತಿಧ್ವನಿ
June 25, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ‌

ADVERTISEMENT

ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ “ಜಂಗಲ್ ಮಂಗಲ್” ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್(Rakshith Kumar) , ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ. ಹತ್ತುವರ್ಷಗಳಿಂದ ಕನ್ನಡ ಹಾಗೂ ತುಳು ಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿರುವ ನನಗೆ ನಿರ್ದೇಶಕನಾಗಿ ಇದು ಮೊದಲ ಚಿತ್ರ. ಇದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆಯಾಗಿದ್ದರೂ, ಯೂನಿವರ್ಸಲ್ ಸಬ್ಜೆಕ್ಟ್ ಎನ್ನಬಹುದು. ಎಲ್ಲಾ ಪ್ರಾಂತ್ಯದಲ್ಲೂ ನಡೆಯುವ ಕಥೆಯೂ ಹೌದು‌. ಸಹ್ಯಾದ್ರಿ ಸ್ಟುಡಿಯೋಸ್ (Sahyadri Studios) ಮೂಲಕ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪ್ರಜೀತ್ ಹೆಗಡೆ(Prajeeth Hegde), ಸಂಕಲನಕಾರ ಮನು ಶೇಡ್ಗಾರ್ ಮುಂತಾದವರು ಬಂಡವಾಳ ಹಾಕಿದ್ದಾರೆ. ಯಶ್ ಶೆಟ್ಟಿ (Yash Shetty) ನಾಯಕನಾಗಿ, ಹರ್ಷಿತ ರಾಮಚಂದ್ರ ನಾಯಕಿಯಾಗಿ ನಟಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಉಗ್ರಂ ಮಂಜು(Ugram Manju), ಬಲ ರಾಜವಾಡಿ ಮುಂತಾದವರಿದ್ದಾರೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ ಜುಲೈ 4 ರಂದು ಚಿತ್ರ ತೆರೆಗೆ ಬರಲಿದೆ ಎಂದರು.

ನನಗೆ ನಾಯಕನಾಗಿಯೇ ನಟಿಸಬೇಕೆಂಬ ಆಸೆ ಇಲ್ಲ. ನಟನಾಗಿ ಗುರಿತಿಸಿಕೊಳ್ಳಬೇಕಷ್ಟೇ. ಆದರೆ ನಾನು ಮೊದಲು ನಾಯಕನಾಗಿ ನಟಿಸಿದ ಚಿತ್ರ “ಸೂಜಿದಾರ”(Sujidhara). ಅದರಲ್ಲಿ ನಾನು ನಾಯಕನಾಗಿ ನಟಿಸಲು ಒಪ್ಪಿಕೊಳ್ಳಲು ಕಥೆಯೇ ಕಾರಣ. ಆನಂತರ ಈ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಲು ಕಥೆಯೇ ಕಾರಣ. ನಿಜ ಹೇಳಬೇಕೆಂದರೆ ಈ ಚಿತ್ರಕ್ಕೆ ಕಥೆಯೇ ನಿಜವಾದ ನಾಯಕ . ಇನ್ನೂ ನಮ್ಮ ಚಿತ್ರಕ್ಕೆ ನಿರ್ಮಾಪಕ ಪ್ರಜೀತ್ ಹೆಗಡೆ ಅವರ ಸಹಕಾರ ಅಪಾರ. ಚಿತ್ರತಂಡದ ಎಲ್ಲರ ಸಹಕಾರವನ್ನು ಮರೆಯುವ ಹಾಗಿಲ್ಲ‌. ಕೆ.ವಿ.ಎನ್ ಸಂಸ್ಥೆಯ ಸುಪ್ರೀತ್ ಜುಲೈ 4 ರಂದು ಬಿಡುಗಡೆಯಾಗಲಿರುವ ನಮ್ಮ ಚಿತ್ರದ ವಿತರಣೆಗೆ ಸಹಾಯ‌ ಮಾಡುತ್ತಿದ್ದಾರೆ ಎಂದರು ನಾಯಕ ಯಶ್ ಶೆಟ್ಟಿ.

ದಿವ್ಯ ಎಂಬ ಮಧ್ಯಮ ವರ್ಗದ ಜವಾಬ್ದಾರಿಯುತ ಕರಾವಳಿ ಹೆಣ್ಣುಮಗಳ ಪಾತ್ರ ನನ್ನದು. ಅಂಗನವಾಡಿ ಶಿಕ್ಷಕಿಯ ಪಾತ್ರ ಎಂದು ತಮ್ಮ ಪಾತ್ರದ ಕುರಿತು ನಾಯಕಿ ಹರ್ಷಿತ ರಾಮಚಂದ್ರ (Harshith Ramachandra) ಹೇಳಿದರು.

ನಿರ್ದೇಶಕ ರಕ್ಷಿತ್ ಕುಮಾರ್ (Rakshith Kumar) ಒಂದೊಳ್ಳೆ ಕಥೆ ಮಾಡಿಕೊಂಡಿದ್ದಾರೆ. ನಾನು ಈ ಚಿತ್ರದಲ್ಲಿ ಖಳನಾಯಕ. ಈ ಹಿಂದೆ ಮಾಡಿರುವ ಚಿತ್ರಗಳಿಗಿಂತ ಭಿನ್ನ ಪಾತ್ರ ಎಂದು ಉಗ್ರಂ ಮಂಜು ತಿಳಿಸಿದರು‌.

ಸಂಕಲನಕಾರ – ನಿರ್ಮಾಪಕರಲ್ಲೊಬ್ಬರಾದ ಮನು ಶೇಡ್ಗಾರ್ ಹಾಗೂ ಬಂಡವಾಳ ಹೂಡಿರುವ ಪ್ರಜೀತ್ ಹೆಗಡೆ ಅವರು ಮಾತನಾಡಿ ಜುಲೈ 4 ರಂದು ತೆರೆಗೆ ಬರುತ್ತಿರುವ ನಮ್ಮ “ಜಂಗಲ್ ಮಂಗಲ್” ಚಿತ್ರವನ್ನು ಚಿತ್ರಮಂದಿರಗಳಲ್ಲಿ ನೋಡಿ ಪ್ರೋತ್ಸಾಹ ನೀಡಿ ಎಂದರು.

Tags: DivyaHarshith RamachandraJungle MangalKannada movieRakshith Kumarsandalwoodsimple suniugram manjuYash ShettyYograj Bhat
Previous Post

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ರಾಮನಗರ

Next Post

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

Zameer Ahmed: ಲಂಚ ಹಗರಣ: ರಾಜ್ಯ ʻಕೈʼ ನಾಯಕರಿಗೆ ಹೈಕಮಾಂಡ್‌ ಕ್ಲಾಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada