• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

CM Siddaramaiah: ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ..?

ಪ್ರತಿಧ್ವನಿ by ಪ್ರತಿಧ್ವನಿ
October 14, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸರ್ಕಾರಿ ಗೆಜೆಟ್, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ಜಾತಿ ತಾರತಮ್ಯದ ಸಮಾಜದಲ್ಲಿ ಚಲನೆ ಇಲ್ಲ. ಚಲನೆ ಸಿಗಬೇಕಾದರೆ ವೈಜ್ಞಾನಿಕ ಮನೋಭಾವ ಮುಖ್ಯ, ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ: ಸಿಎಂ ಸಿದ್ದರಾಮಯ್ಯ(CM Siddaramaiah)

ADVERTISEMENT


ವಿದ್ಯೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ನೃಪತುಂಗ ವಿಶ್ವ ವಿದ್ಯಾಲಯದಲ್ಲಿ (Nrupathunga University)ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ರಾಮಾಯಣ ಬರಡದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೆ. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ‌ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿನಲ್ಲಿ ವಿಜ್ಞಾನದ ವಿದ್ಯಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.

ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆ ಕಡಿಮೆ ಆಗುತ್ತಿರುವುದು ಅಪಾಯದ ಸಂಗತಿ‌. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದರು. ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ‌ ಎಂದರು.

ಬಹಳ ಹಿಂದೆಯೇ ಬಸವಾದಿ ಶರಣರು ಮೌಡ್ಯ(Basavadi Sharanara Mowdya) , ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಗೂ ಮೌಡ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಗೊಳಿಸುವ ಸಲುವಾಗಿಯೇ ಮೌಡ್ಯವನ್ನು ಬಿತ್ತುತ್ತಾರೆ ಎಂದರು. ನಾನು ಮೊದಲ ಬಾರಿ ಮುಖ್ಯಮಂತ್ರಿ ಆದಾಗ “ಮೌಡ್ಯ ನಿಷೇಧ ಕಾಯ್ದೆ” ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಗೆ ಮೌಡ್ಯ ಮತ್ತು ಮೌಡ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿದ್ದಾರೆ ಎಂದರು.

ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಸಿದರು.

ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ (EX PM Javarahalal Nehru) ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿ ಹೊಂದಿದ್ದರು. ಇದಕ್ಕೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು.

52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿನ ನೂತನ ಕಟ್ಟಡ ಉದ್ಘಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಕೊಡಲು ಸಿದ್ದವಿದೆ ಎಂದು ಘೋಷಿಸಿದರು. ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ (Education Minister M C Sudhakar) ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

Tags: c m siddaramaiahCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videoJavaharalal Nehrukarnataka cm siddaramaiahkarnataka next cm siddaramaiahMC SudhakarSiddaramaiah CMsiddaramaiah karnataka cm
Previous Post

ಬೆಂಗಳೂರಿನಲ್ಲಿ ತಮಿಳಿನ ಡೀಸೆಲ್ ಸಿನಿಮಾ ಪ್ರಚಾರ.. ಇದೇ ದೀಪಾವಳಿ ಹಬ್ಬಕ್ಕೆ ಚಿತ್ರ ರಿಲೀಸ್

Next Post

Priyank Kharge: ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Priyank Kharge: ಬೆದರಿಕೆ ಕರೆಗಳಿಗೆಲ್ಲಾ ನಾನು ಹೆದರಲ್ಲ: ಪ್ರಿಯಾಂಕ್ ಖರ್ಗೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada