ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ.ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧದ ED ದಾಖಲು ಮಾಡಿದ್ದ ಕೇಸ್ ರದ್ದುಪಡಿಸಿದ್ದ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.

ಈ ಪ್ರಕರಣದಲ್ಲಿ ಹೈಕೋರ್ಟ್ ನ ಆದೇಶನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂ ಮೆಟ್ಟಿಲೇರಿತ್ತು.ಆದ್ರೆ ಈ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ನೀಡಿದ್ದ ಕಾರಣಗಳಲ್ಲಿ ಯಾವುದೇ ದೋಷಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಮಾತ್ರವಲ್ಲದೇ EDಯನ್ನು ಸುಪ್ರೀಂ ಕೋರಿ ತರಾಟೆಗೆ ತೆಗೆದುಕೊಂಡಿದೆ.

ಈ ಬಗ್ಗೆ ಜಾರಿ ನಿರ್ದೇಶಾಲಯಕ್ಕೆ ತರಾಟೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್,ನೀವು ರಾಜಕೀಯ ಹೋರಾಟ ಮಾಡುತ್ತಿದ್ದೀರಿ.ರಾಜಕೀಯ ಹೋರಾಟಕ್ಕೆ ED ಬಳಕೆ ಆಗ್ತಿರುವುದ್ಯಾಕೆ? ರಾಜಕೀಯ ಹೋರಾಟವನ್ನ ಚುನಾವಣೆಯಲ್ಲಿ ನಡೆಸಲಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಹೀಗಾಗಿ ಇ.ಡಿ ಸಮನ್ಸ್ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ED ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾ ಮಾಡಿದೆ.ಆ ಮೂಲಕ ಎ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿಗೆ ಬಿಗ್ ರಿಲೀಫ್ ಸಿಕ್ಕಿದೆ.