• Home
  • About Us
  • ಕರ್ನಾಟಕ
Sunday, July 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ: ಆದ್ರೂ ಯಾಕಿಂಗಾಯ್ತು: ಎಲ್ಲಾ ಪಕ್ಷದ ಶಾಸಕರನ್ನು ಕೇಳಿದ ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
January 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೈಸೂರು ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿ ಸೂಚನೆ

ADVERTISEMENT

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ವಿಮಾನಯಾನ ಸಚಿವರನ್ನು ಭೇಟಿಯಾಗಲು ನಿರ್ಧರಿಸಿದ ಸಿಎಂ

ಬೆಂಗಳೂರು ಜ10: 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಮೇಲಿನಂತೆ ಪ್ರಶ್ನಿಸಿದರು.

ಮೈಸೂರಿನ‌ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳು ಕೇಳಿದರು.

ಹೊಸ ಬಡಾವಣೆ ಮಾಡುವಾಗ ವಿದ್ಯುತ್‌  ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ  ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು 950 ಬಡಾವಣೆಗಳನ್ನು ಹಸ್ತಾಂತರಿಸದೇ ಇರುವುದರಿಂದ ಸಮಸ್ಯೆ ಮುಂದುವರೆದಿದೆ ಎಂದು‌ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಬಳಿಕ ನಗರಪಾಲಿಕೆ, ಮುಡಾ ಕುರಿತಾಗಿ ಪ್ರತ್ಯೇಕ ಸಭೆ ಕರೆಯಲು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿಗಳು ಈ ಬಗ್ಗೆ ಕೇಂದ್ರದ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಕೇಂದ್ರ ವಿಮಾನಯಾನ ಸಚಿವರನ್ನು ಜ 15 ರಂದು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಮೈಸೂರು ಜಿಲ್ಲಾಭಿವೃದ್ಧಿ ಕುರಿತಾದ ಸಭೆಯ ಇತರೆ ಮುಖ್ಯಾಂಶಗಳು:

•ವಿಮಾನ ನಿಲ್ದಾಣ ವಿಸ್ತರಣೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಪೂರ್ಣಗೊಳಿಸಲಿದೆ.ಯೋಜನೆಯಡಿ ಇನ್ನೂ 46 ಎಕ್ರೆ ಭೂಸ್ವಾಧೀನ ಆಗಬೇಕಿದೆ. ಈಗಾಗಲೇ 111 ಎಕ್ರೆ ಭೂಸ್ವಾಧೀನಕ್ಕೆ ಪಾವತಿ ಮಾಡಲಾಗಿದೆ. ಇನ್ನೂ 95 ಎಕ್ರೆ ಪಾವತಿ ಆಗಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

•ಶಿಥಿಲಗೊಂಡಿರುವ ಲಾನ್ಸ್‌ಡೌನ್‌ ಕಟ್ಟಡವನ್ನು ತೆರವುಗೊಳಿಸಿ ಅದೇ ಮಾದರಿಯಲ್ಲಿ ಕಟ್ಟಡ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಕುರಿತಾದ ಎಲ್ಲಾ ಕಾನೂನು ತೊಡಕುಗಳನ್ನು ಬಗೆಹರಿಸಬೇಕು.

• ಶಿಥಿಲ ಪರಿಸ್ಥಿತಿಯಲ್ಲಿರುವ ದೇವರಾಜ ಅರಸು ಮಾರುಕಟ್ಟೆಯನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು.

• ದಳವಾಯಿ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಗಟ್ಟಿ ಅಭಿವೃದ್ಧಿಪಡಿಸಲು ರೂ. 25 ಕೋಟಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಇದೇ ರೀತಿ ಕುಕ್ಕರಳ್ಳಿ ಕೆರೆ ಪುನಶ್ಚೇತನಕ್ಕೆ ಕ್ರಮ. ಇದಕ್ಕಾಗಿ ಕೆರೆ ಅಭಿವೃದ್ದಿ ಶುಲ್ಕ ಬಳಸಿಕೊಳ್ಳಲು ಸೂಚನೆ.

• ಮೈಸೂರು ನಗರ ಹಾಗೂ ಹೊಸದಾಗಿ ನಿರ್ಮಿಸಲಾಗಿರುವ ಬಡಾವಣೆಗಳಲ್ಲಿ ಒಳಚರಂಡಿ ನಿರ್ಮಾಣ, ಕೊಳಚೆ ನೀರು ಸಂಸ್ಕರಣೆ ಯೋಜನೆ ಜಾರಿಗೆ ರೂ.670 ಕೋಟಿ ಡಿಪಿಆರ್‌ ಸಿದ್ಧಪಡಿಸಲಾಗಿದ್ದು, ಅದನ್ನು ಸಂಪುಟದ ಮುಂದೆ ಮಂಡಿಸಲು ಸೂಚನೆ.

• ಅಂಬೇಡ್ಕರ್‌ ಭವನ ಕಾಮಗಾರಿಯನ್ನು ರೂ.23.83 ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸುವ ಯೋಜನೆಯನ್ನು ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಲು ಸೂಚನೆ.

• ಸಾಲಿಗ್ರಾಮ ತಾಲೂಕಿನಲ್ಲಿ 50 ಕೋಟಿ ವೆಚ್ಚದಲ್ಲಿ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ. ಇದೇ ರೀತಿ ಪಿರಿಯಾಪಟ್ಟಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚನೆ.

• ಮೈಸೂರು ನಗರದಲ್ಲಿ 46 ಕಿಮೀ ವ್ಯಾಪ್ತಿಯಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದೆ.

• ಐಟಿ ಪಾರ್ಕ್‌ ಸ್ಥಾಪನೆಗೆ ಕೋಚನಹಳ್ಳಿಯಲ್ಲಿ ಜಮೀನು ನೀಡುವ ಕುರಿತು ಕ್ರಮ. ಕೋಚನಹಳ್ಳಿಯಲ್ಲಿ ಕೆಐಎಡಿಬಿಗೆ 404 ಎಕ್ರೆ ಜಮೀನು ಸ್ವಾಧೀನ ಕುರಿತಾಗಿ ಈಗಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ.

• ಫಿಲ್ಮ್‌ ಸಿಟಿ ನಿರ್ಮಾಣ ಕಾರ್ಯವನ್ನು ಆದಷ್ಟು ಬೇಗನೆ ಆರಂಭಿಸಲು ಕ್ರಮ ಕೈಗೊಳ್ಳಬೇಕು.

• ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ರೂ.13 ಕೋಟಿ ಯೋಜನೆ ಸಿದ್ಧಪಡಿಸಲಾಗಿದೆ.

Tags: A. S. PonnannaBJPCongress PartyDr. Mantar GowdaG. D. Harish GowdaG. T. DevegowdaK. Harish GowdaK. VenkateshMUDAMysoreT. S. Srivatsatanveer saitಬಿಜೆಪಿಸಿದ್ದರಾಮಯ್ಯ
Previous Post

ರಮೇಶ್ ಬಿಧುರಿ ಟಾಂಗ್‌ ಕೊಟ್ಟ ಸಿಎಂ ಅತಿಶಿ..!

Next Post

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Related Posts

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
0

https://youtube.com/live/zK_8kusfh_Q

Read moreDetails
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

July 12, 2025

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

July 12, 2025

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

July 12, 2025
Next Post
ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ದಪಡಿಸಿ:ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

Recent News

Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

by ಪ್ರತಿಧ್ವನಿ
July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ
Top Story

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

by ಪ್ರತಿಧ್ವನಿ
July 13, 2025
Top Story

Byrathi Suresh: ಸಿದ್ದರಾಮಯ್ಯನ ಮೇಲಿನ ಹೊಟ್ಟೆ ಉರಿಗೆ ಇಲ್ಲಸಲ್ಲದ ಆರೋಪ ಮಾಡ್ತಾರೆ..!!

by ಪ್ರತಿಧ್ವನಿ
July 12, 2025
Top Story

DK Suresh: ಶಿವಕುಮಾರ್ ಪಕ್ಷದ ಪ್ರಾಮಾಣಿಕ ಕಾರ್ಯಕರ್ತ, ಶಾಸಕರ ಬಲಾಬಲ ಪ್ರದರ್ಶಿಸುವ ವ್ಯಕ್ತಿತ್ವ ಅವರದಲ್ಲ..

by ಪ್ರತಿಧ್ವನಿ
July 12, 2025
Top Story

CT Ravi: ಕಾಂಗ್ರೇಸ್‌ ಪಕ್ಷದಲ್ಲಿ ಡಿಕೆ ಶಿವಕುಮಾರ್‌ಗೆ ಶಾಸಕರ ಬೆಂಬಲ ಇಲ್ಲ..

by ಪ್ರತಿಧ್ವನಿ
July 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಶಿಡ್ಲಘಟ್ಟ

July 13, 2025
ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

ಕೆಬಿ ಗಣಪತಿ ನಿಧನಕ್ಕೆಕೆಯುಡಬ್ಲ್ಯೂಜೆ ಸಂತಾಪ

July 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada