• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ರಸ್ತೆ, ಬಫರ್ ರಸ್ತೆ, ಎಲಿವೇಟೆಡ್ ಕಾರಿಡಾರ್, ಡಬಲ್ ಡೆಕ್ಕರ್ ರಸ್ತೆ ನಿರ್ಮಾಣ : ಡಿಕೆ ಶಿವಕುಮಾರ್‌ ಘೋಷಣೆ..

ಪ್ರತಿಧ್ವನಿ by ಪ್ರತಿಧ್ವನಿ
March 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..
Share on WhatsAppShare on FacebookShare on Telegram

ಬೆಂಗಳೂರು : “ಬೆಂಗಳೂರು ನಗರದ ಹಿತಕ್ಕೆ ನಾವು ಕೈಗೊಂಡಿರುವ ಅನೇಕ ತೀರ್ಮಾನಗಳ ಬಗ್ಗೆ ವಿರೋಧ ಪಕ್ಷದವರು ಟೀಕೆ ಮಾಡಬಹುದು, ಮಾಡಲಿ. ಆದರೆ ಮುಂದಿನ ಐದು ವರ್ಷಗಳ ನಂತರ ನಾನು ಉತ್ತಮ ನಿರ್ಧಾರ ಕೈಗೊಂಡೆ ಎಂದು ಹೇಳುತ್ತಾರೆ. ನನಗೆ ಅಷ್ಟೇ ಸಾಕು. ಈಗ ನಾನು ಬೇರೆಯವರಿಗೆ ಒಪ್ಪಿಸಲು ಆಗದೇ ಇರಬಹು, ಆದರೆ ಸಮಯ ಬಂದಾಗ ಅವರು ಒಪ್ಪುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ADVERTISEMENT

ವಿಧಾನಸಭೆಯಲ್ಲಿಂದು ಗ್ರೇಟರ್ ಬೆಂಗಳೂರು ವಿಚಾರವಾಗಿ ನಡೆದ ಚರ್ಚೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಗುರುವಾರ ಉತ್ತರಿಸಿದ್ದಾರೆ.‌

Safwansha Baharain on USIsraelIranWar : ಇರಾನ್ ಕೆಣಕಿದ್ದಾರೆ, ಇನ್ನು ಅಮೆರಿಕಕ್ಕೆ ಕಾದೈತೆ ಮಾರಿಹಬ್ಬ..!

“ಜಿಬಿಎ ಸಂಬಂಧಿಸಿದಂತೆ ವಿರೋಧ ಪಕ್ಷದ ನಾಯಕರು ಅನೇಕ ಚರ್ಚೆ ನಡೆಸಿದ್ದಾರೆ. ಅರ್.ಅಶೋಕ್ ಅವರು ಅಶ್ವಥ್ ನಾರಾಯಣ್ ಅವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಇವರ ಸಲಹೆಗಳನ್ನು ನಾನು ಒಪ್ಪುತ್ತೇನೆ. ಜೊತೆಗೆ ಟೀಕೆಯನ್ನೂ ಸಹ ಮಾಡಿದ್ದಾರೆ. ನಾನು ಟೀಕೆಯನ್ನು ಯಾವಾಗಲೂ ಸ್ವೀಕಾರ ಮಾಡುವವನು. ಟೀಕೆ ಇಲ್ಲದೇ ಹೋದರೆ ಯಾವುದೇ ಮನುಷ್ಯನನ್ನು ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ.

ಚಿನ್ನ ಪರೀಕ್ಷೆ ಮಾಡುವಾಗ ಬೆಂಕಿಗೆ ಹಾಕುತ್ತಾರೆ. ಮನುಷ್ಯನನ್ನು ಪರೀಕ್ಷೆ ಮಾಡುವಾಗ ಟೀಕೆಗಳು, ಆಪಾದ‌ನೆ ಮಾಡುತ್ತಾರೆ. ಇದನ್ನು ನಾವು ಯಾವ ರೀತಿ ತಿದ್ದಿಕೊಳ್ಳಬೇಕು ಎಂಬುದು ಇಲ್ಲಿ ಮುಖ್ಯವಾದುದು. ಟೀಕೆ ಮಾಡಿದರು ಎಂದ ತಕ್ಷಣ ನಾನು ಸಿಟ್ಟು ಮಾಡಿಕೊಳ್ಳುವುದು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸದನದಲ್ಲಿ ಈ ಹಿಂದೆ ಇದ್ದ ನಾಯಕರಾದ ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಲಕ್ಕಪ್ಪ, ಮೇಲ್ಮನೆಯಲ್ಲಿ ನಾಣಯ್ಯ, ಎಕೆ ಸುಬ್ಬಯ್ಯ, ಎಂ.ಸಿ ನಾಣಯ್ಯ ಸೇರಿದಂತೆ ಅನೇಕರು ಚೆನ್ನಾಗಿ ಚರ್ಚೆ ಮಾಡುತ್ತಿದ್ದರು. ಆಗಿನ ಚರ್ಚೆ ಸಕಾರಾತ್ಮಕವಾಗಿ ನಡೆಯುತ್ತಿತ್ತು. ಚರ್ಚೆ ಈಗ ನಕರಾತ್ಮಕವಾಗಿ ಹೋಗುತ್ತಿದೆ. (Positive thinkers always have a solution for every problem. Negative thinker always have problem for every solution) ಧನಾತ್ಮಕ ಎಂಬುದು ಯಾವಾಗಲೂ ಇರಬೇಕು ಎಂದು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ಎರಡು ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳ್ಕರ್ ಕೊಟ್ಟ ಕಾರಣವೇನು..?

ಆಸಕ್ತಿ ಪಟ್ಟು ಬೆಂಗಳೂರು ಅಭಿವೃದ್ದಿ ಖಾತೆಯನ್ನು ವಹಿಸಿಕೊಂಡಿದ್ದೇನೆ. ನಾನು ಈ ಹಿಂದೆ ನಗರಾಭಿವೃದ್ದಿ ಸಚಿವನಾಗಿದ್ದೆ, ಇಂಧನ ಸಚಿವನಾಗಿದ್ದೆ, ನನಗೆ ಈಗ ಸಾಕಷ್ಟು ಅನುಭವ ಹೊಂದಿದ್ದು ಬೆಂಗಳೂರಿನಲ್ಲೂ ಬದಲಾವಣೆ ಮಾಡಬೇಕು ಎಂದು ಹೊರಟಿದ್ದೇನೆ. ಆದರೂ ಒಂದಷ್ಟು ಜನ ತಪ್ಪು ಕಂಡುಹಿಡಿದರು. ಇದು ವಿರೋಧ ಪಕ್ಷದ ಕರ್ತವ್ಯವೂ ಆಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರಿಗೆ ಇದೇ ಸದನದಲ್ಲಿ ಒಮ್ಮೆ ಡಿವಿಜಿ ಅವರ ಸಾಲುಗಳನ್ನು ಹೇಳಿದ್ದೆ. ಎದ್ದೆದ್ದು ಬೀಳುತಿಹೆ ಗುದ್ದಾಡಿ ಸೋಲುತಿಹೆ ಗದ್ದಲವ ತುಂಬಿ ಪ್ರಸಿದ್ಧನಾಗುತಿಹೆ, ಜಗವನ್ನು ಉದ್ದರಿಸುವೆ ಎನುತಿಹೆ ಸಖನೇ ನಿನ್ನ ಉದ್ದಾರ ಎಷ್ಟಾಯಿತೋ ಮಂಕುತಿಮ್ಮ ಎನ್ನುವ ಮಾತು ವಿರೋಧ ಪಕ್ಷದ ನಾಯಕರ ಮಾತು ಕೇಳಿ ನೆನಪಿಗೆ ಬಂತು. ನಾನು ಬೆಂಗಳೂರು ಅಭಿವೃದ್ಧಿ ಇಲಾಖೆ ಜವಾಬ್ದಾರಿ ಹೊತ್ತುಕೊಂಡ ಮೇಲೆ ಸಾಕಷ್ಟು ಅಧ್ಯಯನ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೇನೆ. ಆಗ 70 ಲಕ್ಷ ಇದ್ದ ಜನಸಂಖ್ಯೆ ಈಗ 1.40 ಕೋಟಿ ಆಗಿದೆ. 1.30 ಲಕ್ಷ ವಾಹನಗಳಿವೆ. ಬೇರೆ ನಗರಗಳಲ್ಲಿ ದೊಡ್ಡ ರಸ್ತೆಗಳು ಶೇ.16 ರಷ್ಟಿವೆ. ನಮ್ಮಲ್ಲಿ ಶೇ. 8 ರಷ್ಟು ಮಾತ್ರ ಇದೆ. ಈ ಹಿಂದೆ ನೈಸ್ ರಸ್ತೆ ಮಾಡಿದರೂ ಪೂರ್ಣಗೊಳಿಸಲಿಲ್ಲ. ಫೆರಿಫೆರಲ್ ರಿಂಗ್ ರಸ್ತೆ ಅಂದು ಮಾಡಿದ್ದರೆ 3 ಸಾವಿರ ಕೋಟಿಗೆ ಮುಗಿದು ಹೋಗುತ್ತಾ ಇತ್ತು. ಈ ಎಲ್ಲಾ ಕಾರಣಗಳಿಂದ ಸಂಚಾರ ದಟ್ಟಣೆ ಉಂಟಾಗಿದೆ ಎಂದು ಹೇಳಿದ್ದಾರೆ.

“ಬೆಂಗಳೂರು ನಗರದ ಆಡಳಿತ ಸುಧಾರಣೆಗಾಗಿ 2025 ಮೇ 15 ರಂದು ಹೊಸ ನೋಟಿಫಿಕೇಶನ್ ಮಾಡಿ ಪ್ರಸ್ತುತ ಇರುವ ಪ್ರದೇಶಗಳನ್ನು ಸೇರಿ ಐದು ಪಾಲಿಕೆಗಳನ್ನು ಮಾಡಲಾಯಿತು. ಸೆಪ್ಟೆಂಬರ್ 2 ರಂದು 74 ನೇ ತಿದ್ದುಪಡಿ ತರಬೇಕು ಎಂದು ಹೊರಡಲಾಯಿತು. ಏಕಾಏಕಿ ತೀರ್ಮಾನ ಮಾಡಲಿಲ್ಲ. ವಿರೋಧ ಪಕ್ಷದ ನಾಯಕರ ಮಾತಿನಂತೆ ಸದನ ಸಮತಿ ರಚನೆ ಮಾಡಿ ಅವರು ನೀಡಿದ ಸಲಹೆಗಳನ್ನು ತೆಗೆದುಕೊಳ್ಳಲಾಯಿತು ಎಂದಿದ್ದಾರೆ.

ಇದರಲ್ಲಿ ತಪ್ಪುಗಳಿದ್ದರೆ ಅದನ್ನೂ ಸಹ ತಿದ್ದುಪಡಿ ಮಾಡಲಾಗುವುದು. ಈಗ 369 ವಾರ್ಡ್ ಗಳನ್ನು ಮಾಡಲಾಗಿದೆ. ಬೆಂಗಳೂರನ್ನು ಯಾವುದೇ ಕಾರಣಕ್ಕೂ ಒಡೆಯುತ್ತಿಲ್ಲ. ಇದು ಆಡಳಿತದ ವಿಕೇಂದ್ರಿಕರಣ. ಬೆಂಗಳೂರಿನಲ್ಲಿ ದೊಡ್ಡ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಅದಕ್ಕೆ ಸರ್ಕಾರ ಸಹಾಯ ಬೇಕುತ್ತದೆ ಅದಕ್ಕೆ ಜಿಬಿಎಗೆ ಮುಖ್ಯಮಂತ್ರಿಯವರನ್ನು ಮುಖ್ಯಸ್ಥರನ್ನಾಗಿ ಮಾಡಲಾಗಿದೆ. ಬೆಂಗಳೂರಿಗೆ ಪ್ಲಾನಿಂಗ್ ಅಥಾರಿಟಿ ಇರಲಿಲ್ಲ ಅದನ್ನು ಸಹ ಬಗೆಹರಿಸಲಾಗಿದೆ. ಜಿಬಿಎ ಇದರ ಬಗ್ಗೆ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದ್ದಾರೆ.

Budget Assembly: ಖಾತಾ ಬದಲಾವಣೆ ಬಗ್ಗೆ ಸದನಕ್ಕೆ ಡಿಕೆ ಡಿಸಿಎಂ ಮಾಹಿತಿ #pratidhvani

ಬೆಂಗಳೂರಿನ ಅಭಿವೃದ್ಧಿಗೆ 2008 ಬಿಜೆಪಿ ಸರ್ಕಾರ ಐದು ವರ್ಷಕ್ಕೆ 1960 ಕೋಟಿ ಅನುದಾನ ನೀಡಿತ್ತು. ನಮ್ಮ ಸರ್ಕಾರ 7 ಸಾವಿರ ಕೋಟಿ ನೀಡಿತ್ತು, ಬಿಜೆಪಿ 12 ಸಾವಿರ ಕೋಟಿಗೆ ಏರಿಕೆ ಮಾಡಿತ್ತು. ಹೀಗೆ ಹಂತ ಹಂತವಾಗಿ ನಾವು 3 ಸಾವಿರ ಕೋಟಿ, 2025 ರಲ್ಲಿ 7 ಸಾವಿರ ಕೋಟಿ ಹಾಗೂ ಮುಖ್ಯಮಂತ್ರಿಯವರ ಅನುದಾನದಲ್ಲಿ ಮತ್ತೆ 1,500 ಕೋಟಿ ನೀಡಿದ್ದಾರೆ. ಈ ವರ್ಷ 7 ಸಾವಿರ ಕೋಟಿ ನೀಡಲಾಗಿದೆ. ಹೀಗೆ ಕಾಲಕ್ಕೆ ತಕ್ಕಂತೆ ಅನುದಾನ ಜಾಸ್ತಿಯಾಗುತ್ತಾ ಹೋಗಿದೆ ಎಂದು ಲೆಕ್ಕ ನೀಡಿದ್ದಾರೆ.

ಬಿಜೆಪಿ 2020 ರಲ್ಲಿ ಬಿಜೆಪಿ ಸರ್ಕಾರ ಮಾಡಿದ ತೆರಿಗೆ ಕಾನೂನನ್ನು ಬದಲಾವಣೆ ಮಾಡಿಲ್ಲ. ನಾವು ಜನರಿಗೆ ಇನ್ನಷ್ಟು ಅನುಕೂಲ ಮಾಡಿಕೊಟ್ಟಿದ್ದೇವೆ. ಒಟಿಎಸ್, ಕಡಿಮೆ ದಂಡ ಸೇರಿದಂತೆ ಅನೇಕ ಅವಕಾಶ ಕೊಡಲಾಗಿದೆ. ಒಟಿಎಸ್ ಜಾರಿ ಮಾಡಿದ ಕಾರಣಕ್ಕೆ 1277 ಕೋಟಿ ಹೆಚ್ಚುವರಿ ಆದಾಯ ಬಂದಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮೋದಿಯವರು ಏಕೆ ಬೆಂಗಳೂರನ್ನು ಗ್ಲೋಬಲ್ ಸಿಟಿ ಎಂದು ಕರೆದರು? ಭವಿಷ್ಯದ ಎಲ್ಲಾ ಸವಾಲುಗಳಿಗೆ ಬೆಂಗಳೂರನ್ನು ಸಿದ್ದತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರು ಬೆಂಗಳೂರು ಮೂಲಕ ಭಾರತವನ್ನು ನೋಡಲಾಗುತ್ತದೆ ಎಂದು ಹೇಳಿದ್ದರು. ಜಾಗತಿಕ ನಾಯಕರು ಮೊದಲು ದೆಹಲಿಗೆ ಬರುತ್ತಿದ್ದರು ಈಗ ಸಮಯ ಬದಲಾಗಿದೆ ಮೊದಲು ಬೆಂಗಳೂರಿಗೆ ಬರುತ್ತಾರೆ ಎಂದಿದ್ದರು. ಇದು ಕೇವಲ ನಮ್ಮಿಂದ ಮಾತ್ರವಲ್ಲ, ಪ್ರತಿಭಾವಂತ ಯುವಕರು, ನಾಗರೀಕರು ಎಲ್ಲಾ ಸರ್ಕಾರಗಳಿಂದ ಸಾಧ್ಯವಾಗಿದೆ ಎಂದು ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ನನಗೆ ಎಲ್ಲವನ್ನು ಕೊಟ್ಟಿದೆ, ನಾನು ಬೆಂಗಳೂರಿಗೆ ಕೊಡುಗೆ ನೀಡುವ ಬಯಕೆ ಇದೆ..

“ನಾನು ಬೆಂಗಳೂರಿನ ಶಾಸಕರಿಗೆ ಸಭೆಗಳಲ್ಲಿ ಒಂದು ಮಾತು ಹೇಳುತ್ತೇನೆ. ನಾನು ಬೇರೆ ಕಡೆಯಿಂದ ಬಂದವನು ಎಂದು ಭಾವಿಸಬೇಡಿ. ಬೆಂಗಳೂರು ಕರ್ನಾಟಕ ರಾಜ್ಯದ ಹೃದಯ ಎಂದು ಹೇಳಿದ್ದೇನೆ. ನಾನು ಬೆಂಗಳೂರಿನಲ್ಲಿ ಹುಟ್ಟಿಲ್ಲದಿರಬಹುದು. ಕನಕಪುರದಲ್ಲಿ ಹುಟ್ಟಿದರೂ ಅದು ಬೆಂಗಳೂರಿನ ಭಾಗ. ನನ್ನ 6ನೇ ವಯಸ್ಸಿಗೆ ಬೆಂಗಳೂರಿಗೆ ಬಂದವನು ಇಲ್ಲಿಯವರೆಗೂ ಇಲ್ಲೇ ನೆಲೆಸಿದ್ದೇನೆ. ಬೆಂಗಳೂರು ನನಗೆ ಎಲ್ಲವನ್ನು ಕೊಟ್ಟಿದ್ದು, ಬೆಂಗಳೂರಿಗೆ ನಾನು ಸ್ವಲ್ಪವಾದರೂ ಕೊಡುಗೆ ನೀಡಬೇಕು ಎಂದು ಅಭಿಮಾನ ಮೆರೆದಿದ್ದಾರೆ.

ನಾನು ಇಲ್ಲಿ ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ನಾನು ಹೆಚ್ಚು 10-15 ವರ್ಷ ರಾಜಕೀಯ ಮಾಡಬಹುದು. ನಮಗೆ ಸಿಕ್ಕ ಅವಕಾಶದಲ್ಲಿ ಏನಾದರೂ ಕೊಡುಗೆ ನೀಡಬೇಕು ಎಂದು ಪ್ರಯತ್ನಿಸುತ್ತಿದ್ದೇನೆ. ನಾನೊಬ್ಬನೇ ಎಲ್ಲವನ್ನು ಮಾಡಲು ಸಾಧ್ಯವಿಲ್ಲ. ನನ್ನ ಜತೆಗೆ ನೀವೆಲ್ಲರೂ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಮೂಲ್ಯವಾದ ಸಲಹೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರು ರಸ್ತೆ ಅಗಲೀಕರಣ ಅಸಾಧ್ಯ..

“ಸಂಚಾರ ದಟ್ಟಣೆ ಬಗ್ಗೆ ನಮ್ಮ ಬಗ್ಗೆಯೇ ಹೆಚ್ಚು ಸುದ್ದಿ. ಮುಂಬೈ, ಹೈದರಾಬಾದ್, ದೆಹಲಿಯಲ್ಲಿ ನಮಗಿಂತ ಕೆಟ್ಟದಾಗಿ ಇದ್ದರೂ ನಮ್ಮ ಬಗ್ಗೆಯೇ ಹೆಚ್ಚು ಸುದ್ದಿ. ಟ್ರಾಫಿಕ್ ವಿಚಾರದಲ್ಲಿ ಅನೇಕ ಕ್ರಮ ಕೈಗೊಂಡಿದ್ದೇವೆ. ಬೆಂಗಳೂರಿನಲ್ಲಿ ಇರುವ ರಸ್ತೆ ಪ್ರಮಾಣ ಕೇವಲ 8% ಮಾತ್ರ. ರಸ್ತೆ ಅಗಲೀಕರಣ ಮಾಡಬೇಕು, 2013ರಲ್ಲಿ ಪರಿಹಾರ ವಿಚಾರವಾಗಿ ಬಂದ ಕಾಯ್ದೆ ಬಂದ ನಂತರ ಪರಿಹಾರ 2 ಪಟ್ಟು ನೀಡಬೇಕು. ಹೀಗಾಗಿ ರಸ್ತೆ ಅಗಲೀಕರಣ ಅಸಾಧ್ಯ ಎಂದು ಸದನಕ್ಕೆ ತಿಳಿಸಿದ್ದಾರೆ.

ಹೀಗಾಗಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮಾಡಲು ಮುಂದಾಗಿದ್ದೇವೆ. ಈ ಯೋಜನೆಗೆ ಸ್ವಾಧೀನಪಡಿಸಿಕೊಂಡಿರುವ ಭೂಮಿಯನ್ನು ಕೈಬಿಡಲು ಆಗುವುದಿಲ್ಲ. ಅಲ್ಲಿನ ಭೂ ಮಾಲೀಕರಿಗೆ 2013ರ ಕಾಯ್ದೆ ಅನ್ವಯ ಪರಿಹಾರ ನೀಡಿದ್ದೇವೆ. ಪರಿಹಾರಕ್ಕೆ 5 ಅವಕಾಶಗಳನ್ನು ನೀಡಿದ್ದೇವೆ. ಮೊದಲ ಹಂತದ ಯೋಜನೆ ಜಾರಿಗೆ 80% ಭೂಸ್ವಾಧೀನ ಪ್ರಕ್ರಿಯೆಗೆ ಅನುಮತಿ ನೀಡಲಾಗಿದೆ. ಸಧ್ಯದಲ್ಲೇ ಟೆಂಡರ್ ಕರೆಯಲಾಗುವುದು. ಈ ರಸ್ತೆ ಆದರೆ ಬೆಂಗಳೂರಿನಲ್ಲಿ ಅರ್ಧ ಸಂಚಾರಿ ದಟ್ಟಣೆ ನಿವಾರಣೆಯಾಲಿದೆ. ಈ ಯೋಜನೆಗೆ ಒಂದೇ ದಿನದಲ್ಲಿ 26 ಸಾವಿರ ಕೋಟಿ ಸಾಲ ನೀಡಲು ಮುಂದಾದ ಹುಡ್ಕೋ ಕಂಪನಿಗೆ ಧನ್ಯವಾದಗಳನ್ನು ಹೇಳಿದ್ದಾರೆ.

ಸಂಚಾರ ದಟ್ಟಣೆ ನಿವಾರಣೆಗೆ ಟನಲ್ ಉತ್ತಮ ಆಯ್ಕೆ..

“ನಗರದ ಒಳಗೆ ರಸ್ತೆ ಅಗಲೀಕರಣ ಅಸಾಧ್ಯವಾಗಿರುವುದರಿಂದ ನಾನು ಕೇಂದ್ರ ಸಚಿವರಾದ ನಿತೀನ್ ಗಡ್ಕರಿ, ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿ, ಟನಲ್ ರಸ್ತೆ ಮಾಡಲು ಮುಂದಾಗಿದ್ದೇವೆ. ಮುಂಬೈನಲ್ಲಿ 6-7 ಟನಲ್ ರಸ್ತೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಇದರ ಹೊರತಾಗಿ ಬೇರೆ ಆಯ್ಕೆಗಳಿಲ್ಲ ಎಂದು ವಿವರಿಸಿದ್ದಾರೆ.

ಟನಲ್ ರಸ್ತೆಯಲ್ಲಿ ಕೆಲವು ಪಾಯಿಂಟ್ ಗಳಲ್ಲಿ 2-3 ಸಾವಿರ ಕೋಟಿ ಭೂಸ್ವಾಧೀನಕ್ಕೆ ಬೇಕಾಗುತ್ತದೆ. ಅದರ ಹೊರತಾಗಿ 17 ಸಾವಿರ ಕೋಟಿ ರಸ್ತೆ ನಿರ್ಮಾಣಕ್ಕೆ ಬೇಕಾಗುತ್ತದೆ. ಬೇರೆ ರಾಜ್ಯಗಳಲ್ಲಿ ಟನಲ್ ರಸ್ತೆಗೆ ಆಗಿರುವ ಟೆಂಡರ್ ಗೂ ನಮ್ಮ ಟೆಂಡರ್ ಗೂ ಬಹಳ ವ್ಯತ್ಯಾಸವಿದೆ. ನಮ್ಮಲ್ಲಿ 700-800 ಕೋಟಿ ಪ್ರತಿ ಕಿ.ಮೀ.ಗೆ ವೆಚ್ಚವಾಗಲಿದ್ದು, ಬೇರೆ ರಾಜ್ಯಗಳಲ್ಲಿ 1300-1400 ಕೋಟಿ ವೆಚ್ಚವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿವರಿಸಿದ್ದಾರೆ.

Tags: BBMPBDABenglore Developmentbjp karnatakaBussiness Corridorcongress karnatakaDK ShivakumarElivated CorridorGBAGlobal CityH D KumaraswamyInvest Karnatakakarnataka newsKarnataka PoliticsPratidhvaniR Ashok
Previous Post

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?

Next Post

ಐಪಿಎಲ್ 2026: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಟ್ಟು ನಿಟ್ಟಿನ ಭದ್ರತೆ ಹೀಗಿದೆ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
Next Post
ಐಪಿಎಲ್ 2026: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಟ್ಟು ನಿಟ್ಟಿನ ಭದ್ರತೆ ಹೀಗಿದೆ

ಐಪಿಎಲ್ 2026: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕಟ್ಟು ನಿಟ್ಟಿನ ಭದ್ರತೆ ಹೀಗಿದೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada