• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಯುವ ವಕೀಲರು ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್

Young lawyers should start their careers in trial courts, says Supreme Court Justice Arvind Kumar

ಪ್ರತಿಧ್ವನಿ by ಪ್ರತಿಧ್ವನಿ
October 25, 2025
in Top Story, Uncategorized, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

– ನ್ಯಾಯಮಿತ್ರ ಸಹಕಾರಿ ಸಂಘದ ಬೆಳಿ ಮಹೋತ್ಸವ
– ವಕೀಲರಿಗೆ ವಸತಿ ನಿವೇಶನ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಅಗತ್ಯ ಭೂಮಿ ಮಂಜೂರು ಮಾಡಿ

ADVERTISEMENT

ಬೆಂಗಳೂರು ಅಕ್ಟೋಬರ್‌ 25: ವಕೀಲ ವೃತ್ತಿ ಆರಂಭಿಸುವ ಯುವ ವಕೀಲರು ಟ್ರಯಲ್‌ ಕೋರ್ಟ್‌ನಲ್ಲಿ ವೃತ್ತಿ ಜೀವನ ಆರಂಭಿಸುವುದು ಉತ್ತಮ, ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು ಎಂದು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಸಲಹೆ ನೀಡಿದರು.

ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಉಪಮುಖ್ಯಮಂತ್ರಿ ಗಳಾದ ಡಿ ಕೆ ಶಿವಕುಮಾರ್ ಅವರೊಂದಿಗೆ ಶನಿವಾರ ನ್ಯಾಯಮಿತ್ರ ಸಹಕಾರಿ ಸಂಘದ ಬೆಳ್ಳಿ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬೆಳ್ಳಿ‌ ಮಹೋತ್ಸವವು ಸ್ಥಿರತೆ, ಬಾಂಧವ್ಯ, ಬದ್ಧತೆ ಮತ್ತು ಸಾಧನೆಯ ಪ್ರತೀಕವಾಗಿದೆ” ಎಂದು ಹೇಳಿದರು.

“ನನ್ನ ವೃತ್ತಿ ಜೀವನ ಆರಂಭ ಆಗಿದ್ದು ವಕೀಲರ ಸಹಕಾರಿ ಸಂಘದಲ್ಲಿ. ನನ್ನ ಎಲ್ಲಾ ಸಾಧನೆಯೂ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ನ ಸಹಕಾರಿ ಬ್ಯಾಂಕ್‌ಗೆ ಸಲ್ಲುತ್ತದೆ” ಎಂದರು. “ವಕೀಲ ವೃತ್ತಿ ಆರಂಭಿಸುವವರಿಗೆ ಟ್ರಯಲ್ ಕೋರ್ಟ್‌ನಲ್ಲಿ ನಿಮ್ಮ ವೃತ್ತಿ ಆರಂಭಿಸಿ ಎಂದು ನಾನು ಸಲಹೆ ನೀಡುತ್ತೇನೆ. ಏಕೆಂದರೆ ಇಲ್ಲಿ ಸಿಗುವ ಉತ್ತಮವಾದ ವೃತ್ತಿ ಅನುಭವ ಎಲ್ಲಿಯೂ ಸಿಗಲಾರದು. ವಕೀಲರು ಸಮಾಜ ಬದಲಾಯಿಸುವ ವೈದ್ಯರಿದ್ದಂತೆ. ಸಮಾಜ ಮತ್ತು ದೇಶವನ್ನೇ ಬದಲಾಯಿಸುವ ಶಕ್ತಿ‌ ಮತ್ತು ಸಾಮರ್ಥ್ಯ ವಕೀಲರಿಗೆ ಇದೆ” ಎಂದು ತಾವು ವಕೀರಾಗಲು ಕಾರಣವಾದ ಹಿನ್ನಲೆಯನ್ನು ಹಂಚಿಕೊಂಡರು.

C M Siddaramaiah  : Yathindra ಮಾತಿನ ಬಗ್ಗೆ CM ಸಿದ್ರಾಮಯ್ಯ ಫಸ್ಟ್ ರಿಯಾಕ್ಷನ್  #pratidhvani

“ವಕೀಲರಿಗಾಗಿ ವಸತಿ ನಿವೇಶನಗಳನ್ನು ದೊಡ್ಡ ಪ್ರಮಾಣದಲ್ಲಿ (ಬಲ್ಕ್) ಮಂಜೂರು ಮಾಡುವಂತೆ ಮತ್ತು ವಕೀಲರಿಗೆ ಒಂದು ಸಮುದಾಯ ಭವನ ನಿರ್ಮಾಣ ಮಾಡಲು ಅಗತ್ಯ ಇರುವ ಭೂಮಿ ನೀಡುವಂತೆ” ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಂ.ಆರ್. ಅರವಿಂದ ಕುಮಾರ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು.

ಗೌರವಾನ್ವಿತ ಅತಿಥಿಗಳಾಗಿ, ಕರ್ನಾಟಕ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು, ವಿಶೇಷ ಆಹ್ವಾನಿತರಾಗಿ ಕರ್ನಾಟಕ ಸ್ಟೇಟ್ ಬಾರ್ ಕೌನ್ಸಿಲ್‌ನ ಅಧ್ಯಕ್ಷ ಎಂ.ಎಸ್. ಶೇಖರಪ್ಪ, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮತ್ತು ಕಾರ್ಯದರ್ಶಿ ಪ್ರವೀಣ್ ಗೌಡ, ಬೆಂಗಳೂರು ವಕೀಲರ ಸಹಕಾರಿ ಸಂಘದ ಅಧ್ಯಕ್ಷ ನಂಜಪ್ಪ ಕಲ್ಲೇಗೌಡ ಮತ್ತು ವಕೀಲರ ಸಂಘದ ಸಾಹಿತ್ಯ ಒಕ್ಕೂಟದ ಅಧ್ಯಕ್ಷ ಮಂಜುನಾಥ ಬಿ. ಗೌಡ ಅವರು ಉಪಸ್ಥಿತಿತರಿದ್ದರು. ನ್ಯಾಯಮಿತ್ರ ಸಹಕಾರಿ ಸಂಘದ ಅಧ್ಯಕ್ಷ ಎಸ್. ಯತಿರಾಜ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

Tags: cm siddaramaiah vs dk shivakumar livedk shivakumar & siddaramaiahdk shivakumar and siddaramaiahdk shivakumar siddaramaiahdk shivakumar siddaramaihdk shivakumar takes on siddaramaiahdk shivakumar vs siddaramaiahsiddaramaiah about dk shivakumarsiddaramaiah dk shivakumarsiddaramaiah on dk shivakumarsiddaramaiah vs dk shiva kumarsiddaramaiah vs dk shivakumarsiddaramaihsiddaramaih dk shivakumarsiddaramaih hd kumaraswamysiddaramaih photoshootyatindra siddaramaiah dk shivakumar
Previous Post

ನಾನು ನೀಡಿರುವ ಹೇಳಿಕೆಗೆ ಬದ್ಧನಾಗಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

Next Post

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

Related Posts

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
0

ಬೆಂಗಳೂರು: ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗೃಹ ಸಚಿವ ಪರಮೇಶ್ವರ್ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಪರಮೇಶ್ವರ್, ಅನೇಕ ವಿಚಾರಗಳು ಸಂಸದ...

Read moreDetails
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

November 18, 2025
ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

ಶ್ವಾಸಕೋಶದಲ್ಲಿ ಸೋಂಕು: ಸಿಎಂ ಪತ್ನಿ ಆಸ್ಪತ್ರೆಗೆ ದಾಖಲು

November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
Next Post
ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

ಶಬರಿಮಲೆ ದೇವಸ್ಥಾನದಲ್ಲಿ ಅರ್ಚಕನಿಂದ ಚಿನ್ನ‌ ಕದ್ದ ಪ್ರಕರಣ..

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!