ಕರ್ನಾಟಕ ಸಾರಿಗೆ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ನೇರವಾಗಿ ಹೆಬ್ರಿಯ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ನಡೆದಿದೆ.
ಶಿವಮೊಗ್ಗದಿಂದ ಉಡುಪಿಗೆ ಬರುತ್ತಿದ್ದ ಬಸ್‌ನಲ್ಲಿ 19 ವರ್ಷದ ಸುರಕ್ಷಾ ಎಂಬ ಯುವತಿ ಮೇಗರವಳ್ಳಿ ಬಸ್ ಹತ್ತಿದ್ದರು. ಆಗುಂಬೆ ಘಾಟ್‌ನಲ್ಲಿ ಯುವತಿ ತೀವ್ರ ಅಸ್ವಸ್ಥಗೊಂಡಹಿನ್ನೆಲೆ, ಬಸ್ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಬಂದಿದ್ದಾರೆ.
ಯುವತಿ ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸೋಮೇಶ್ವರ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಯ್ತು. ಆದರೂ ಯುವತಿ ಸುರಕ್ಷಾ ಚೇತರಿಕೆ ಕಾಣಲಿಲ್ಲ. ಆ ಬಳಿಕ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಗೆ ಕಳುಹಿಸಲಾಯ್ತು.
ಬಸ್ ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಬಹಳಷ್ಟು ಶ್ರಮವಹಿಸಿದರು. ಬಸ್‌ನಲ್ಲಿ ಮಹಿಳೆಯರ ನೆರವು ಕೇಳಿದಾಗ ಯಾರೊಬ್ಬರೂ ಸಹಾಯಕ್ಕೆ ಬಾರದಿದ್ದರೂ ಮುಸ್ಲಿಂ ಯುವತಿಯೊಬ್ಬರು ಒಬ್ಬಳು ಬಾಯಿಗೆ ಶ್ವಾಸ ನೀಡಿ ಮಾನವೀಯತೆ ಮೆರೆದಿದ್ದಾಳೆ. ಹೆಬ್ರಿ ಪೊಲೀಸರು ಹಾಗು ಸಾರ್ವಜನಿಕರು ಅಭಿನಂದಿಸಿದ್ದಾರೆ.