ಮೌನ ವಹಿಸುವ ಮೂಲಕ ಜಾಣ ಕಿವುಡು ಪ್ರದರ್ಶನ ನಿಲ್ಲಿಸಿ ದೇಶದಲ್ಲಿ ಹೆಚ್ಚಾಗುತ್ತಿರುವ ದ್ವೇಷ ರಾಜಕಾರಣಕ್ಕೆ ಕೊನೆ ಹಾಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ 100 ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.
ದೇಶದಲ್ಲಿ ಹಲವಾರು ಕಡೆ ಉದ್ಭವಿಸಿರುವ ಗಲಭೆಗಳ ಹಿನ್ನೆಲೆಯಲ್ಲಿ ಪ್ರಧಾನಿಗೆ ಪತ್ರ ಬರೆದಿರುವ 100ಕ್ಕೂ ಹೆಚ್ಚು ಮಾಜಿ ಅಧಿಕಾರಿಗಳು ಕೂಡಲೇ ದ್ವೇಷ ರಾಜಕಾರಣವನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

ಮಾಜಿ ರಾಷ್ಟ್ರೀಯ ರಕ್ಷಣ ಸಲಹೆಗಾರ (ಎನ್ ಎಸ್‌ಎ) ಶಿವಶಂಕರ ಮೆನನ್, ಮಾಜಿ ಕೇಂದ್ರ ವಿದೇಶಾಂಗ ಕಾರ್ಯದರ್ಶ ಸುಜಾತಾ ಸಿಂಗ್, ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಜಿಕೆ ಪಿಳ್ಳೈ, ದೆಹಲಿಯ ಮಾಜಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಪ್ರಿನ್ಸಿಪಾಲ್ ಸೆಕ್ರೆಟರಿ ಟಿಕೆಎ ನಾಯರ್ ಮುಂತಾದ ೧೦೮ ಮಾಜಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.