• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರ್ಕಾರಿ ಕೆಲಸದ ಆಸೆ ಬಿಟ್ಟು ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ

ಪ್ರತಿಧ್ವನಿ by ಪ್ರತಿಧ್ವನಿ
October 11, 2021
in ಕರ್ನಾಟಕ
0
ಸರ್ಕಾರಿ ಕೆಲಸದ ಆಸೆ ಬಿಟ್ಟು  ಯುವಕರು ಸ್ವಾವಲಂಬಿಯಾಗಬೇಕು: ಸಚಿವ ನಿರಾಣಿ
Share on WhatsAppShare on FacebookShare on Telegram

ವಿದ್ಯಾವಂತರು ಕೇವಲ ಸರ್ಕಾರಿ ಹುದ್ದೆಗಳನ್ನು ಬಯಸದೆ ಸ್ವತಃ ಉದ್ಯಮಿಗಳಾಗುವ ಮೂಲಕ ದೇಶದ ಪ್ರಗತಿಯಲ್ಲಿ ಕೈ ಜೋಡಿಸಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಕರೆ ನೀಡಿದ್ದಾರೆ.

ADVERTISEMENT

ಸೋಮವಾರ ಬೆಂಗಳೂರಿನ ಅರಮನೆಯಲ್ಲಿ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ  ‘ಉದ್ಯಮಿಯಾಗು ಉದ್ಯೋಗ ನೀಡು, ಹಾಗೂ ಕೈಗಾರಿಕಾ ಆದಾಲತ್ ‘ಕಾರ್ಯಕ್ರಮದಲ್ಲಿ  ಅವರು, ಉದ್ಘಾಟನಾ ಭಾಷಣದಲ್ಲಿ ಮಾತನಾಡಿದ್ದಾರೆ.

ಒಬ್ಬ ಯಶಸ್ವಿ ಉದ್ಯಮಿಯಾದರೆ  ನೀವು ಮಾಲೀಕರಾಗಿ ಸಾವಿರಾರು ಜನರಿಗೆ ಉದ್ಯೋಗ ನೀಡಬಹುದು. ಕೇವಲ ಉದ್ಯೋಗ ಪಡೆಯುವುದೇ ನಿಮ್ಮ ಗುರಿಯಾದರೆ ನೀವೊಬ್ಬ ಉದ್ಯೋಗಿಯಾಗಬಹುದು. ಆಯ್ಕೆ ನಿಮ್ಮದು ಎಂದು ಸಲಹೆ ಮಾಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳು ಪ್ರತಿಯೊಬ್ಬರನ್ನು ಸ್ವಾವಲಂಬಿ ಮಾಡಲು ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು, ಯುವಕರು/ ಯುವತಿಯರು ಇದರ ಸದುಪಯೋಗಮಾಡಿಕೊಂಡು ಉದ್ಯಮಿಗಳಾಗಿ ಎಂದು ಕಿವಿಮಾತು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಯಶಸ್ವಿ  ಉದ್ಯಮಿಗಳ ಉದಾಹರಣೆಯನ್ನು ವಿವರಿಸಿದ ಅವರು, ಯಾವುದೇ ಕೆಲಸ ಮಾಡುವಾಗ ಪ್ರಾರಂಭದಲ್ಲಿ ಸಾಕಷ್ಟು ಅಡೆತಡೆಗಳು ಎದುರಾಗುತ್ತವೆ. ಅವೆಲ್ಲವನ್ನೂ ಮೆಟ್ಟಿ ನಿಂತಾಗಲೇ ನಾವು ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ಫೋಸಿಸ್‍ನ ಸುಧಾ ನಾರಾಯಣ ಮೂರ್ತಿಯವರು  ಹುಬ್ಬಳ್ಳಿಯ ಬಿ.ವಿ. ಎಂ ಕಾಲೇಜಿನಲ್ಲಿ ಸುಧಾ ನಾರಾಯಣಮೂರ್ತಿಯವರು ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ ಬಳಿಕ ನಾರಾಯಣ ಮೂರ್ತಿ ಅವರನ್ನು ವಿವಾಹವಾಗಿ ಉದ್ಯಮ ಆರಂಭಿಸಲು ಮುಂದಾದರು.  ಆಗ ಅವರಿಗೆ ಸಾಕಷ್ಟು ಅಡೆತಡೆಗಳು  ಎದುರಾದವು. ಆದರೂ ಧೃತಿಗೆಡದೆ ಇನ್ಫೋಸಿಸ್ ಎಂಬ ಸಂಸ್ಥೆಯನ್ನು ಪ್ರಾರಂಭಿಸಿದರು. ಪರಿಣಾಮ ಇಂದು 2 ಲಕ್ಷ ಉದ್ಯೋಗ ಹಾಗೂ  54 ದೇಶಗಳಲ್ಲಿ ಕಂಪನಿಗಳು  ಪ್ರಾರಂಭವಾಗಿವೆ ಎಂದು ಅವರ ‘ ಯಶೋಗಾಧೆಯನ್ನು’ ತೆರೆದಿಟ್ಟರು.

ವಿಆರ್ ಎಲ್ ನ‌ ವಿಜಯ್ ಸಂಕೇಶ್ವರ ಕೂಡ ಸಣ್ಣ ಪ್ರಮಾಣದಲ್ಲಿ ಉದ್ಯಮವನ್ನು ಆರಂಭಿಸಿದರು. ಪ್ರಾರಂಭದಲ್ಲಿ ಅವರಿಗೂ ಇಂತಹ ಅನೇಕ ಸಮಸ್ಯೆಗಳೇ ಎದುರಾಗಿದ್ದವು. ಆದರೂ  ಎಲ್ಲವನ್ನೂ ಎದುರಿಸಿ ದೇಶದಲ್ಲೇ ಒಬ್ಬ ಯಶಸ್ವಿ ಉದ್ಯಮಿಯಾಗಿದ್ದಾರೆ. ಸಾವಿರಾರು ಜನರಿಗೆ ಉದ್ಯೋಗ ನೀಡಿ ಸಾರಿಗೆ ಕ್ಷೇತ್ರದಲ್ಲಿ ದೊಡ್ಡ ಕ್ರಾಂತಿಯನ್ನು ಸೃಷ್ಟಿಸಿದಾರೆ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳಿಗೆ ಇಂಥವರು  ಪ್ರೇರಣೆಯಾಗಬೇಕು. ನೀವು ಕಷ್ಟಪಟ್ಟರೆ ಮುಂದೆ ಬರಲು  ಸಾಧ್ಯ. ಯಾರು ಸತತ  ಪರಿಶ್ರಮಪಟ್ಟು ಸವಾಲುಗಳನ್ನು ಎದುರಿಸುತ್ತಾರೋ ಅವರು ಮಾತ್ರ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದ್ದಾರೆ.

ನಾವು 2010-12ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ನಡೆಸಿದ್ದವು. ಪರಿಣಾಮ ₹10.84 ಲಕ್ಷ ಕೋಟಿ ಬಂಡವಾಳ ಹಾಗೂ 15 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಿದ್ದವು. ಈ ವಿಶೇಷ ಕಾರ್ಯಕ್ರಮದಲ್ಲೂ ಹೆಚ್ಚಿನ ಪ್ರಮಾಣದ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂಬ ವಿಶ್ವಾಸವನ್ನು ನಿರಾಣಿ ವ್ಯಕ್ತಪಡಿಸಿದ್ದಾರೆ.

ಎಂಬಿಎ, ಬಿಬಿಎ, ಇಂಜಿನಿಯರಿಂಗ್‌  ಸೇರಿದಂತೆ ಮತ್ತಿತರ ‌ವೃತ್ತಿಪರ‌ ಕೋಸ್೯ಗಳಲ್ಲಿ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಪಠ್ಯಗಳನ್ನು ಆಳವಡಿಸುವ  ಕುರಿತಾಗಿ ಸದ್ಯದಲ್ಲೇ ಸಂಬಂಧಪಟ್ಟವರ ಜತೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು  ತಿಳಿಸಿದ್ದಾರೆ.

ಉದ್ಯಮಿಗಳಾಗಿ ಉದ್ಯೋಗ ಸೃಷ್ಟಿಸುವುದು ಹೇಗೆ,? ಯಾವ ಕ್ಷೇತ್ರಗಳಲ್ಲಿ ಹೂಡಿಕೆಗೆ ಅವಕಾಶ ಇದೆ.? ಉದ್ಯಮ ಆರಂಭಕ್ಕೆ ಅನುಕೂಲವಾಗುವ ಸರ್ಕಾರದ ಯೋಜನೆಗಳು ಯಾವುವು, ? ಆರ್ಥಿಕ ನೆರವು ಹೇಗೆ, ?ಎಲ್ಲಿ ಪಡೆಯಬಹುದು.? ಎಂಬ ಮಾಹಿತಿ ಕಾರ್ಯಕ್ರಮದಲ್ಲಿ ದೊರೆಯಲಿದೆ. ಉತ್ಸಾಹಿ ಯುವಜನರನ್ನು ಉದ್ಯಮಿಗಳಾಗಿಸಲು ಎಲ್ಲ ಅಗತ್ಯ ಮಾಹಿತಿ ಒದಗಿಸುವ ಮೂಲಕ  ಸಹಾಯ ಹಸ್ತ ಚಾಚಲಿದ್ದೇವೆ ಎಂದು ಹೇಳಿದ್ದಾರೆ.

ವೈಮಾನಿಕ ಮತ್ತು ರಕ್ಷಣಾ ಕ್ಷೇತ್ರ, ಆರೋಗ್ಯ, ಶಿಕ್ಷಣ ವಿಶೇಷವಾಗಿ ಎಜು ಟೆಕ್, ಸ್ಟಾರ್ಟ್ಅಪ್ ವಲಯದಲ್ಲಿನ ಅವಕಾಶಗಳ ಬಗ್ಗೆ ಮಾಹಿತಿ ದೊರೆಯಲಿದೆ. ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ. ನಮ್ಮ  ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇವಿಗೆ ಸಬ್ಸಿಡಿ

ಹೆಚ್ಚುತ್ತಿರುವ ಪರಿಸರ ಮಾಲಿನ್ಯವನ್ನು ಗಮನದಲ್ಲಿರಿಸಿಕೊಂಡು ರಾಜ್ಯ ಸರ್ಕಾರ ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ಉತ್ತೇಜನ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ ಸಬ್ಸಿಡಿ ನೀಡಲು ಚಿಂತನೆ ನಡೆಸಿದೆ. ಬ್ಯಾಟರಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಒಟ್ಟಾರೆ ವೆಚ್ಚದ ಶೇ.25 ಅಥವಾ ಗರಿಷ್ಠ 10 ಲಕ್ಷ ಬ್ಯಾಟರಿ ಬದಲಾವಣೆ ಕೇಂದ್ರ ಸ್ಥಾಪನೆಗೆ 2.5 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಸಬ್ಸಿಡಿ ಘೋಷಣೆ ಮಾಡಲು ಮುಂದಾಗಿದೆ ಎಂದು ಸಚಿವ ನಿರಾಣಿ ‌ಪ್ರಕಟಿಸಿದ್ದಾರೆ.

ವಿದೇಶಿ ನೇರ ಹೂಡಿಕೆ

ಪ್ರಸಕ್ತ ಹಣಕಾಸು ವರ್ಷದ ಮೊದಲನೆಯ ತ್ರೈಮಾಸಿಕ (ಏಪ್ರಿಲ್ ನಿಂದ ಜೂನ್) ದಲ್ಲಿ ರೂ.62,085 ಕೋಟಿ ವಿದೇಶಿ ನೇರ ಬಂಡವಾಳ ಆಕರ್ಷಿಸಿ ರಾಜ್ಯ ಮೊದಲ ಸ್ಥಾನದಲ್ಲಿದೆ. 2020-21 ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ.

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ – ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ 2022ರ ನವೆಂಬರ್ 2ರಿಂದ ಮೂರು ದಿನಗಳ ಕಾಲ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು ‌ಸ್ಪಷ್ಟಪಡಿಸಿದ್ದಾರೆ.

ಬಂಡವಾಳ ಹೂಡಿಕೆದಾರರ ಸಮಾವೇಶದಿಂದ ರಾಜ್ಯಕ್ಕೆ ದೇಶ-ವಿದೇಶದಿಂದ ಹೆಚ್ಚಿನ ಬಂಡವಾಳ ಹರಿದು ಬರಲಿದೆ. ಈ ಕ್ರಾಂತಿಯಿಂದ ಬೃಹತ್ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಯಾಗಲಿದೆ. ಈ ಸಮಾವೇಶಕ್ಕೆ ಪೂರ್ವ ತಯಾರಿಯಾಗಿ ರಾಜ್ಯದಲ್ಲಿ ಲ್ಯಾಂಡ್ ಬ್ಯಾಂಕ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.‌

ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದು ಯಶಸ್ವಿ ಉದ್ಯಮಿಗಳಾಗಲಿ ಎಂದು ಆಶಿಸುತ್ತೇನೆ. ಈ ನಿಟ್ಟಿನಲ್ಲಿ ಎಲ್ಲ ರೀತಿಯ ಸಹಕಾರ ನೀಡಲು ನಮ್ಮ ಸರ್ಕಾರ ಬದ್ಧ ಎಂದು ವಾಗ್ದಾನ ಮಾಡಿದ್ದಾರೆ.

Tags: Basavaraj BommaiBJPCovid 19investmentsinvestorsmurugesh niraniಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಅವಿದ್ಯಾವಂತರು ಉತ್ತಮ ನಾಗರಿಕರಾಗಲು ಸಾಧ್ಯವಿಲ್ಲ, ಅವರು ದೇಶಕ್ಕೆ ಹೊರೆ – ಅಮಿತ್ ಶಾ

Next Post

ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

Related Posts

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ
ಕರ್ನಾಟಕ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

by ಪ್ರತಿಧ್ವನಿ
April 13, 2026
0

ಬೆಂಗಳೂರು, ರಾಜ್ಯದಲ್ಲಿ ಬೇಸಿಗೆ ತೀವ್ರಗೊಳ್ಳುತ್ತಿರುವ ಹಿನ್ನೆಲೆ, ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಹಿತದೃಷ್ಟಿಯಿಂದ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್...

Read moreDetails
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

ಸಚಿವ ಮುರುಗೇಶ ನಿರಾಣಿಯನ್ನು ಹಾಡಿ ಹೊಗಳಿದ ಮಾಜಿ-ಹಾಲಿ ಸಿಎಂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada