
ಯೂಟ್ಯೂಬರ್ ಎಂ.ಡಿ ಸಮೀರ್ (MD Sameer) ವಿರುದ್ಧ ಇಡಿ ಅಧಿಕಾರಿಗಳು (ED) ಹಣದ ವ್ಯವಹಾರದ ಬಗ್ಗೆ ಎಸ್‌ಐಟಿ (SIT) ಅಧಿಕಾರಿಗಳು ಮಾಹಿತಿ ಕಲೆಹಾಕಿದ್ದಾರೆ. ಸಮೀರ್ ವಿರುದ್ಧ ಇಡಿ ಅಧಿಕಾರಿಗಳಿಗೆ ದೂರು ಹಿನ್ನೆಲೆ ಎಸ್‌ಐಟಿ ಅಧಿಕಾರಿಗಳಿಂದ ಸಮೀರ್‌ಗೆ ಸಂಬಂಧಪಟ್ಟ ವ್ಯವಹಾರಗಳ ಮಾಹಿತಿಯನ್ನ ಕಲೆಹಾಕಿದ್ದಾರೆ.

ಈಗಾಗಲೇ ಆರೋಪಿಗಳ ಮೊಬೈಲ್‌ನ್ನ ಪರಿಶೀಲನೆ ನಡೆಸಿದ್ದು, ಕೆಲ ಮಾಹಿತಿಗಳು ಪತ್ತೆಯಾಗಿದೆ ಎನ್ನಲಾಗಿದೆ. ಜೊತೆಗೆ ಹಲವು ಆಯಾಮದಲ್ಲಿ ಈಗಾಗಲೇ ಮಾಹಿತಿ ಕಲೆ ಹಾಕಿದ್ದಾರೆ. ಇದೀಗ ತನಿಖೆ ವೇಳೆ ಇಡಿ ಅಧಿಕಾರಿಗಳು ಸಮೀರ್ ವಿರುದ್ಧದ ಒಟ್ಟಾರೆ ಪ್ರಕರಣದಲ್ಲಿ ಹಣದ ವ್ಯವಹಾರ ನಡೆದಿದ್ಯಾ ಎಂಬುದರ ಬಗ್ಗೆ ಮಾಹಿತಿ ಕೇಳಿದ್ದಾರೆ.

ಒಂದು ವೇಳೆ ಈ ಪ್ರಕರಣದಲ್ಲಿ ಹಣದ ವ್ಯವಹಾರ ನಡೆದಿದೆ ಎಂಬ ಸುಳಿವುಗಳು ಸಿಕ್ಕಿದಲ್ಲಿ, ಧರ್ಮಸ್ಥಳದ ವಿರುದ್ಧ ಯೂಟ್ಯೂಬ್ ವಿಡಿಯೋ ಮೂಲಕ ಅಪಪ್ರಚಾರ ಮಾಡಿದ್ದ ಸಮೀರ್‌ಗೆ ಇನ್ನಷ್ಟು ಸಂಕಷ್ಟ ತಪ್ಪಿದ್ದಲ್ಲ ಎನ್ನಲಾಗಿದೆ.