![](https://pratidhvani.com/wp-content/uploads/2024/06/download-1.jpeg)
ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ವಿಶ್ವಕಪ್ ತಂಡದ ಸದಸ್ಯ ಯೂಸುಫ್ ಪಠಾಣ್(Yusuf Pathan) ಅವರು ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಟಿಎಂಸಿ(TMC) ಪಕ್ಷದಿಂದ ಸ್ಪರ್ಧಿಸಿದ್ದ ಯೂಸುಫ್, ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ 5 ಬಾರಿಯ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ(Adhir Chowdhury) ವಿರುದ್ಧ 50 ಸಾವಿರ ಮುನ್ನಡೆ ಸಾಧಿಸಿದ್ದು ಬಹುತೇಕ ಗೆಲುವಿನ ಕಡೆ ಹೆಜ್ಜೆ ಹಾಕಿದ್ದಾರೆ.ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿ, ಸಚಿವರ ಮಾತಿಗೆ ಅಡ್ಡಿಪಡಿಸಿದ ಆರೋಪದ ಹಿನ್ನಲೆಯಲ್ಲಿ ಅಧೀರ್ ರಂಜನ್ ಚೌಧರಿ ಅವರನ್ನು ಸದನದಿಂದ ಸಸ್ಪೆಂಡ್ ಮಾಡಲಾಗಿತ್ತು. ಕಾಂಗ್ರೆಸ್ ಸಂಸದೀಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸಸ್ಪೆಂಡ್ ಮಾಡುವ ನಿರ್ಣಯವನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಮಂಡಿಸಿದ್ದರು.