ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ (10-11-2024) ರಾತ್ರಿ ಪ್ರಚಾರದ ವೇಳೆ ಬಹಿರಂಗ ಸಭೆಯಲ್ಲಿ ಸಾರ್ವಜನಿಕವಾಗಿ ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರನ್ನು, ಜಮೀರ್ ಅಹ್ಮದ್ ಖಾನ್ “ಕಾಲಾ ಕುಮಾರಸ್ವಾಮಿ” (ಕರಿಯ ಕುಮಾರಸ್ವಾಮಿ) ಎಂದು ಉರ್ದು ಭಾಷೆಯಲ್ಲಿ ನಿಂದಿಸಿದ್ದಾರೆ.
ಈ ಮೂಲಕ ಕಪ್ಪು ವರ್ಣದವರ ಜನಾಂಗೀಯ ನಿಂದನೆ ಮಾಡಿ ವರ್ಣಭೇದ ತಾರತಮ್ಯ ಎಸಗಿದ್ದಾರೆ. ಅಷ್ಟೆ ಅಲ್ಲದೇ ಒಂದು ಸಮುದಾಯವನ್ನು ಎತ್ತಿಕಟ್ಟಿ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಹದಗೆಡಲು ಜನರನ್ನು ಪ್ರಜೋದಿಸಿರುವ ಜಮೀರ್ ಅಹ್ಮದ್ ಬಾಯಿಂದ ಬಂದಿರುವ ಈ ಜನಾಂಗೀಯ ದ್ವೇಷದ ಮಾತುಗಳು ಅಕ್ಷಮ್ಯ. ಅಪರಾಧ.
ಈ ಕೂಡಲೇ ಗೃಹ ಸಚಿವರಾದ @DrParameshwara , @spramanagara ರಾಮನಗರ ಜಿಲ್ಲಾ ಪೊಲೀಸರು ಜನಾಂಗೀಯ ನಿಂದನೆ, ವರ್ಣಭೇದ ಹಾಗೂ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿರುವ ಸಚಿವ ಜಮೀರ್ ಅಹ್ಮದ್ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಾತ್ಯತೀತ ಜನತಾದಳ ಪಕ್ಷವು ಆಗ್ರಹಿಸುತ್ತದೆ.
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ @kharge ಮತ್ತ @INCIndia ಪಕ್ಷಕ್ಕೆ ನೈತಿಕತೆ ಉಳಿಸಿಕೊಂಡಿದ್ದರೇ ಮೊದಲು ಈ ಜನಾಂಗೀಯ ದ್ವೇಷಿ ಜಮೀರ್ ರಾಜೀನಾಮೆ ಪಡೆಯಬೇಕು.