ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಅಲ್ ಖೈದಾ ಮುಖ್ಯಸ್ಥ ಅಯ್ಮನ್ ಅಲ್ ಜವಾಹಿರಿ ಅವರನ್ನು ಅಮೆರಿಕ ಹತ್ಯೆಗೈದಿದೆ.
ಸೆಪ್ಟೆಂಬರ್ 11, 2001ರ ವಿಶ್ವ ವಾಣಿಜ್ಯ ಸಂಸ್ಥೆ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಅಲ್-ಖೈದಾ ಮುಖ್ಯಸ್ಥ ಬಿನ್ ಲಾಡೆನ್ ಹತ್ಯೆಗೈದ ೨೧ ವರ್ಷಗಳ ಬಳಿಕ ಜವಾಹಿರಿ ಅವರನ್ನು ಆಫ್ಘಾನಿಸ್ತಾನದ ಕಾಬೂನ್ ನಲ್ಲಿ ಡ್ರೋಣ್ ದಾಳಿ ಮೂಲಕ ಅಮೆರಿಕ ಸೇನೆ ಹತ್ಯೆಗೈದಿದೆ.
ಶನಿವಾರ ಕಾಬೂಲ್ನಲ್ಲಿ ನಡೆಸಲಾದ ದಾಳಿಯಲ್ಲಿ ಜವಾಹಿರಿ ಹತನಾಗಿದ್ದಾನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಘೋಷಿಸಿದ್ದಾರೆ. ಆತನ ವಿರುದ್ಧದ ಕಾರ್ಯಾಚರಣೆಗೆ ಅಂತಿಮ ಅನುಮೋದನೆ ನೀಡಿದ್ದೆ. ದಾಳಿಯಲ್ಲಿ ನಾಗರಿಕರ ಹತ್ಯೆಯಾಗಿಲ್ಲ. ಇದೀಗ ನ್ಯಾಯ ಒದಗಿಸಲಾಗಿದೆ. ಉಗ್ರ ಸಂಘಟನೆ ನಾಯಕ ಇನ್ನಿಲ್ಲ. ಈ ಮೂಲಕ ಕೊನೆಗೂ ಅಮೆರಿಕನ್ನರಿಗೆ ನ್ಯಾಯ ಒದಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಕಾಬೂಲ್ನ ನಿವಾಸದ ಬಾಲ್ಕನಿಯಲ್ಲಿ ಝವಾಹಿರಿಯನ್ನು ಡ್ರೋನ್ ದಾಳಿಯ ಮೂಲಕ ಹತ್ಯೆ ಮಾಡಲಾಗಿದೆ. ಅಫ್ಘಾನಿಸ್ತಾನದಲ್ಲಿ ನಮ್ಮ ಪಡೆಗಳು ಈಗ ಇಲ್ಲ ಎಂದು ಅಮೆರಿಕ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಝವಾಹಿರಿಯು ಅಫ್ಗಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಇರುವುದು 2020ರಲ್ಲಿ ದೋಹಾದಲ್ಲಿ ಅಮೆರಿಕದ ಪಡೆಗಳನ್ನು ವಾಪಸ್ ಕರೆಸಿಕೊಳ್ಳುವ ಸಂದರ್ಭದಲ್ಲಿ ತಾಲಿಬಾನ್ ಜತೆ ಮಾಡಿಕೊಂಡಿದ್ದ ಒಪ್ಪಂದದ ಸ್ಪಷ್ಟ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.
2021ರ ಆಗಸ್ಟ್ 31ರಂದು ಅಮೆರಿಕದ ಪಡೆಗಳು ಅಫ್ಗಾನಿಸ್ತಾನದಿಂದ ವಾಪಸಾದ ಬಳಿಕ ಅಮೆರಿಕವು ಅಲ್ಲಿ ನಡೆಸಿದ ಮೊದಲ ದಾಳಿ ಇದಾಗಿದೆ. ಮೂಲತಃ ಈಜಿಪ್ಟ್ನವನಾಗಿದ್ದ ಝವಾಹಿರಿ ಕೈರೊದಲ್ಲಿ ಬಾಲ್ಯ ಕಳೆದಿದ್ದ. ವೃತ್ತಿಯಲ್ಲಿ ಶಸ್ತ್ರಚಿಕಿತ್ಸಕನಾಗಿದ್ದ ಆತ ನಂತರ ಹಿಂಸಾತ್ಮಕ ಮೂಲಭೂತವಾದದಲ್ಲಿ ತೊಡಗಿಕೊಂಡಿದ್ದ. 2001ರ ಸೆಪ್ಟೆಂಬರ್ 11ರ ದಾಳಿ ಬಳಿಕ ತಲೆಮರೆಸಿಕೊಂಡಿದ್ದ.
ಒಸಾಮಾ ಬಿನ್ ಲಾಡೆನ್ನಲ್ಲಿ ಅಮೆರಿಕದ ವಿಶೇಷ ಪಡೆಗಳು 2011ರಲ್ಲಿ ಹತ್ಯೆ ಮಾಡಿದ ಬಳಿಕ ಅಲ್ಕೈದಾ ಉಗ್ರ ಸಂಘಟನೆಯ ಮುಖ್ಯಸ್ಥನಾಗಿದ್ದ ಝವಾಹಿರಿ. ಆತನ ಸುಳಿವು ನೀಡಿದವರಿಗೆ 2.5 ಕೋಟಿ ಡಾಲರ್ ಇನಾಮು ಘೋಷಿಸಲಾಗಿತ್ತು.