• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಶೋಧ

ಅಪೆಕ್ಸ್‌ ಅಕ್ರಮ-2: ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು

by
August 6, 2020
in ಶೋಧ
0
ಅಪೆಕ್ಸ್‌ ಅಕ್ರಮ-2: ವಸೂಲಾಗದ ಸಾಲ ಸಚಿವ ರಮೇಶ್‌ ಜಾರಕಿಹೊಳಿ ಒಡೆತನದ ಕಂಪನಿಯಲ್ಲೇ ಹೆಚ್ಚು
Share on WhatsAppShare on FacebookShare on Telegram

ಜಲ ಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಲಿಮಿಟೆಡ್‌, ಅಪೆಕ್ಸ್‌ ಬ್ಯಾಂಕ್‌ನಿಂದ ಪಡೆದಿರುವ ಸಾಲವನ್ನು ತೀರಿಸದೇ ಅನುತ್ಪಾದಕ ಸಾಲಗಾರರ ಪಟ್ಟಿಗೆ ಸೇರ್ಪಡೆಯಾಗಿದೆ. ರಾಜಕೀಯ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳ ಪೈಕಿ ರಮೇಶ್‌ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ನಲ್ಲೇ ವಸೂಲಾಗದ ಆಸ್ತಿ ಪ್ರಮಾಣ ಹೆಚ್ಚಿದೆ.ಈ ಕಾರ್ಖಾನೆ ವಿವಿಧ ಉದ್ದೇಶಗಳ ಹೆಸರಿನಲ್ಲಿ ಪಡೆದಿರುವ ಸಾಲಗಳಲ್ಲಿ 2019ರ ಮಾರ್ಚ್‌ 31ರ ಅಂತ್ಯಕ್ಕೆ ಅಸಲು ಒಟ್ಟು 74.48 ಕೋಟಿ ರೂ., 29.05 ಕೋಟಿ ರೂ. ಬಡ್ಡಿ ಸೇರಿ ಒಟ್ಟು 103.54 ಕೋಟಿ ರೂ.ಬಾಕಿ ಇದೆ. ಆದರೆ ಈ ಸಾಲ ಸುಸ್ತಿಯಾಗಿದೆಯಲ್ಲದೆ 2017ರ ಏಪ್ರಿಲ್‌ 16ರಂದೇ ಇದು ವಸೂಲಾಗದ ಆಸ್ತಿ(NPA) ಎಂದು ಬ್ಯಾಂಕ್‌ ಪರಿಗಣಿಸಿದೆ.

ADVERTISEMENT

ಕೇವಲ ರಮೇಶ್‌ ಜಾರಕಿಹೊಳಿ ಮಾತ್ರವಲ್ಲ ಕಾಂಗ್ರೆಸ್‌ನ ಪ್ರಭಾವಿ ಮುಖಂಡರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳೂ ಇದೇ ಪಟ್ಟಿಗೆ ಸೇರಿವೆ. ಇವರ ಒಡೆತನದಲ್ಲಿರುವ ಸಕ್ಕರೆ ಕಾರ್ಖಾನೆಗಳು ಅಪೆಕ್ಸ್‌ ಬ್ಯಾಂಕ್‌ನಿಂದ ವಿವಿಧ ಉದ್ದೇಶಗಳಿಗಾಗಿ ಪಡೆದಿದ್ದ ಸಾಲ ಮರುಪಾವತಿಯಾಗದ ಕಾರಣ ವಸೂಲಾದ ಆಸ್ತಿ ಎಂದು ಪರಿಗಣಿಸಿದೆ ಎಂದು ಸಹಕಾರ ಸಂಘಗಳ ಜಂಟಿ ನಿಬಂಧಕ ಎಂ ಡಿ ನರಸಿಂಹಮೂರ್ತಿ ನೇತೃತ್ವದ ತನಿಖಾ ತಂಡ ಬಯಲು ಮಾಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸೌಭಾಗ್ಯಲಕ್ಷ್ಮಿ ಶುಗರ್ಸ್‌ ಲಿಮಿಟೆಡ್‌ಗೆ ಸಕ್ಕರೆ ದಾಸ್ತಾನು ಆಧಾರದ ಮೇಲೆ ದುಡಿಯುವ ಬಂಡವಾಳವಾಗಿ ಸಾಲ ಮಂಜೂರಾಗಿತ್ತು. ಆದರೆ ಮಂಜೂರಾತಿ ಮಾಡುವ ಮುನ್ನ ಅಥವಾ ಆ ನಂತರವಾಗಲಿ ಸಕ್ಕರೆ ದಾಸ್ತಾನು ಇರುವ ಬಗ್ಗೆ ಯಾವುದೇ ದಾಖಲೆಗಳು ಬ್ಯಾಂಕ್ ಅಧಿಕಾರಿಗಳ ಬಳಿ ಇರಲಿಲ್ಲ ಎಂಬುದನ್ನು ತನಿಖಾ ತಂಡ ಹೊರಗೆಡವಿದೆ.

ರಮೇಶ್‌ ಜಾರಕಿಹೊಳಿ ಒಡೆತನದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್‌ಗೆ ಅಪೆಕ್ಸ್‌ ಬ್ಯಾಂಕ್‌ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಒಟ್ಟು 122.38 ಕೋಟಿ ರೂ.ಸಾಲ ನೀಡಿತ್ತು. ಇದರಲ್ಲಿ ಅವಧಿ ಸಾಲದ ರೂಪದಲ್ಲಿ 10.00 ಕೋಟಿ ರೂ.(2014ರ ಏಪ್ರಿಲ್‌ 15), 2014ರ ನವೆಂಬರ್‌ 12ರಂದು 35 ಕೋಟಿ ರೂ., 2013ರ ಜುಲೈ 12ರಂದು ದುಡಿಯುವ ಬಂಡವಾಳ ರೂಪದಲ್ಲಿ 60.00 ಕೋಟಿ ರೂ., 2017ರ ಮಾರ್ಚ್‌ 2017ರಂದು 9.50 ಕೋಟಿ ರೂ., 2016ರ ಮಾರ್ಚ್‌ 31ರಂದು ಬ್ರಿಡ್ಜ್‌ ಲೋನ್‌ ರೂಪದಲ್ಲಿ 7.88 ಕೋಟಿ ರೂ., ಸಾಲ ಮಂಜೂರಾಗಿತ್ತು ಎಂಬ ವಿಚಾರ ತನಿಖಾ ವರದಿಯಿಂದ ತಿಳಿದು ಬಂದಿದೆ.

ಈ ಪೈಕಿ ಕಾರ್ಖಾನೆ ವಿಸ್ತರಣೆಗೆಂದು 10.00 ಕೋಟಿ ರೂ., ಎಥೆನಾಲ್‌ ಘಟಕ ಸ್ಥಾಪಿಸಲು 35.00 ಕೋಟಿ ರೂ., ಮತ್ತು ಬಾಕಿ ಇರುವ ಎಥೆನಾಲ್‌ ಘಟಕಕ್ಕೆ ಹಾಕಲು 7.88 ಕೋಟಿ ರು ಬಿಡುಗಡೆಯಾಗಿತ್ತು. ಆದರೆ ಈ ಕಾಮಗಾರಿಗಳು ಪೂರ್ಣಗೊಂಡಿರುವ ಬಗ್ಗೆ ಬ್ಯಾಂಕ್‌ನ ಅಧಿಕಾರಿಗಳು ಕಾರ್ಖಾನೆಯಿಂದ ದೃಢೀಕರಣ ಪತ್ರವನ್ನು ಪಡೆದಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ದಾಖಲಾತಿಗಳು ಲಭ್ಯವಿರಲಿಲ್ಲ ಎಂಬುದನ್ನು ತನಿಖಾ ತಂಡ ಬಹಿರಂಗಗೊಳಿಸಿದೆ.

ಮತ್ತೊಂದು ವಿಶೇಷವೆಂದರೆ ಕಾರ್ಖಾನೆ ಹೊಂದಿರುವ 16.00 ಕೋಟಿ ರು ಮತ್ತು 21.10 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಬ್ಯಾಂಕ್‌ ಅಡಮಾನ ಇರಿಸಿಕೊಂಡಿತ್ತಾದರೂ ಸ್ಥಿರಾಸ್ತಿಯ ಮೌಲ್ಯವು ನೀಡಿರುವ ಸಾಲದ ಮೊತ್ತಕ್ಕಿಂತ ಕಡಿಮೆ ಇತ್ತು. ಅದೇ ರೀತಿ ಸಕ್ಕರೆ ದಾಸ್ತಾನು ಆಧಾರದ ಮೇಲೆ ದುಡಿಯುವ ಬಂಡವಾಳ 60.00 ಕೋಟಿ ಮತ್ತು 9.50 ಕೋಟಿ ರೂ. ಬಿಡುಗಡೆ ಮಾಡಿದ್ದ ಅಪೆಕ್ಸ್‌ ಬ್ಯಾಂಕ್‌, ಹಣ ಬಿಡುಗಡೆ ಸಂದರ್ಭದಲ್ಲಿ ಸಕ್ಕರೆ ದಾಸ್ತಾನು ಇರುವ ಬಗ್ಗೆ ಖಾತರಿಪಡಿಸಿಕೊಂಡಿರಲಿಲ್ಲ ಎಂಬ ಸಂಗತಿ ತನಿಖಾ ವರದಿಯಿಂದ ತಿಳಿದು ಬಂದಿದೆ.ಒಟ್ಟು 103.54 ಕೋಟಿ ರೂ.ವಸೂಲಾಗದ ಆಸ್ತಿ ಎಂದು ಪರಿಗಣಿಸಿರುವ ಅಪೆಕ್ಸ್ ಬ್ಯಾಂಕ್‌, ಸುಸ್ತಿ ಸಾಲದ ವಸೂಲಾತಿಗಾಗಿ ಸರ್‌ಫೇಸಿಯಾ ಕಾಯ್ದೆ 2002ರ ರೀತಿ ವಸೂಲಾತಿಗೆ ನೋಟಿಸ್‌ ನೀಡಿರುವುದು ವರದಿಯಿಂದ ಗೊತ್ತಾಗಿದೆ.

Tags: Apex Bank ScamRamesh Jarakiholiಅಪೆಕ್ಸ್‌ ಅಕ್ರಮಸಚಿವ ರಮೇಶ್‌ ಜಾರಕಿಹೊಳಿ
Previous Post

ದೇವದಾಸಿ ಪದ್ಧತಿ ಇನ್ನೂ ಅಸ್ತಿತ್ವದಲ್ಲಿದೆ!!

Next Post

ರಾಜಕಾರಣಿಗಳಿಗೇಕೆ ಸರ್ಕಾರಿ ಆಸ್ಪತ್ರೆಗಳೆಂದರೆ ಅಸಡ್ಡೆ?

Related Posts

Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
0

ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿಗಳಾದ ಶ್ರೀ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ರಾಜಕಾರಣದಲ್ಲಿ ಸಕ್ರೀಯರಾಗಿ, ನಮಗೆಲ್ಲರಿಗೂ ಮಾರ್ಗದರ್ಶನ...

Read moreDetails

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025
Next Post
ರಾಜಕಾರಣಿಗಳಿಗೇಕೆ ಸರ್ಕಾರಿ ಆಸ್ಪತ್ರೆಗಳೆಂದರೆ ಅಸಡ್ಡೆ?

ರಾಜಕಾರಣಿಗಳಿಗೇಕೆ ಸರ್ಕಾರಿ ಆಸ್ಪತ್ರೆಗಳೆಂದರೆ ಅಸಡ್ಡೆ?

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada