ಜ್ಯೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಹಾಗೂ ಅವಿವಾ ಮದುವೆಗೆ ದಿನಗಣನೆ ಶುರುವಾಗಿದೆ. ಇದೇ ಜೂನ್ 5ಕ್ಕೆ ಈ ಜೋಡಿ ಸಪ್ತಪದಿ ತುಳಿಯಲಿದ್ದಾರೆ.
ಅಭಿಷೇಕ್ ಮತ್ತು ಅವಿವಾ ಅದ್ಧೂರಿ ವಿವಾಹಕ್ಕೆ ಈಗಾಗಲೇ ಭರ್ಜರಿ ತಯಾರಿ ನಡೆಸಲಾಗ್ತಿದೆ. ಈ ಮಧ್ಯೆ ಅಭಿಷೇಕ್ ಅಂಬರೀಶ್ ಮ್ಯಾರೇಜ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನ, ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಿದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ.
ಮದುವೆ ಡೇಟ್ ಫಿಕ್ಸ್ ಆಗ್ತಿದ್ದಂತೆ, ಪ್ರಧಾನಿ ಮೋದಿ ಅವರನ್ನ ನಟ ಅಭಿಷೇಕ್, ಸಂಸದೆ ಸುಮಲತಾ ಅಂಬರೀಶ್ ಭೇಟಿಯಾಗಿದ್ದಾರೆ. ಅಲ್ಲದೇ ಮದುವೆಯ ಕರೆಯೋಲೆಯನ್ನ ನೀಡಿ ಆಹ್ವಾನಿಸಿದ್ದಾರೆ ಎನ್ನಲಾಗ್ತಿದೆ.
ಒಟ್ನಲ್ಲಿ ಅಭಿ-ಅವಿವಾ ವಿವಾಹಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ, ನವ ವಧುವರರನ್ನು ಹಾರೈಸುತ್ತಾರಾ ಅಂತ ಕಾದುನೋಡ್ಬೇಕಿದೆ.