• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಉದ್ಯೋಗ ಸೃಷ್ಟಿಗೆ ನಿಮ್ಮ ಯೋಜನೆಗಳೇನು? ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

by
September 17, 2020
in ದೇಶ
0
ಉದ್ಯೋಗ ಸೃಷ್ಟಿಗೆ ನಿಮ್ಮ ಯೋಜನೆಗಳೇನು? ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ನರೇಂದ್ರ ಮೋದಿ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸುವ ಅಭಿಯಾನಕ್ಕೆ ಕರ್ನಾಟಕ ವಿಪಕ್ಷ ನಾಯಕ ಸಿದ್ಧರಾಮಯ್ಯ ಕೈಜೋಡಿಸಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನರೇಂದ್ರ ಮೋದಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ ಎಂದು ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ಮಾರ್ಚ್‌ನಲ್ಲಿ 564 ಇದ್ದ ದೇಶದ ಕೊರೊನಾ ಸೋಂಕಿತರ ಪ್ರಮಾಣವನ್ನು ಕೇವಲ ಆರೇ ತಿಂಗಳಲ್ಲಿ 51 ಲಕ್ಷಕ್ಕೆ ಮುಟ್ಟಿಸಿರುವುದೇ @narendramodi ಅವರ ಮಹತ್ತರ ಸಾಧನೆ. ಭಾರತವನ್ನು ವಿಶ್ವಗುರು ಮಾಡ್ತೀನಿ ಅಂತ ಹೇಳಿ, ಈಗ ಕೊರೊನಾದಲ್ಲಿ ನಂ.1 ಮಾಡಲು ಹೊರಟಿದ್ದಾರೆ.
ಸದ್ಯ ಸೋಂಕಿತರ ಏರಿಕೆ ಪ್ರಮಾಣದಲ್ಲಿ ಭಾರತವೇ ಮುಂದಿದೆ. 5/7#Pressmeet

— Siddaramaiah (@siddaramaiah) September 17, 2020


ಇದೇ ವೇಳೆ ಪ್ರಧಾನಿಗೆ ಹುಟ್ಟು ಹಬ್ಬದ ಶುಭಾಶಯ ಹಾರೈಸಿದ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರಿಗೆ ಧೀರ್ಘ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಈ ವೇಳೆ ಹಾರೈಸುತ್ತೇನೆ. ಮೋದಿಯವರ ಜನ್ಮದಿನದ ಆಚರಣೆಯನ್ನು ಯಾರೂ ಬೇಡ ಅಂದಿಲ್ಲ, ಆದರೆ ಕೋಟ್ಯಂತರ ರೂಪಾಯಿ ಸುರಿದು ಜಾಹೀರಾತು ನೀಡಿ ಮಾಡದೇ ಇರುವ ಕೆಲಸಗಳನ್ನೆಲ್ಲಾ ಮೋದಿಯ ಸಾಧನೆ ಎಂದು ಸುಳ್ಳು ಪ್ರಚಾರ ಪಡೆಯುತ್ತಿರುವುದಕ್ಕಷ್ಟೇ ನಮ್ಮ ವಿರೋಧ. ಪ್ರಧಾನಿ ನರೇಂದ್ರ ಮೋದಿಯವರ ನಿಜವಾದ ಸಾಧನೆಗಳೆಂದರೆ, ಭಾರತದ ಜಿಡಿಪಿಯನ್ನು -23% ಗೆ ಕೊಂಡೊಯ್ದಿರುವುದು, ನಿರುದ್ಯೋಗ ಪ್ರಮಾಣವನ್ನು ಕಳೆದ 45 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿಸಿರುವುದು, ಪೆಟ್ರೋಲ್ ಡೀಸೆಲ್ ಬೆಲೆ ನೂರರ ಆಸುಪಾಸಿಗೆ ತಂದು ನಿಲ್ಲಿಸಿರುವುದು ಎಂದಿದ್ದಾರೆ.

ಪ್ರಧಾನಿ @narendramodi ಅವರ ನಿಜವಾದ ಸಾಧನೆಗಳೆಂದರೆ,
ಭಾರತದ ಜಿಡಿಪಿಯನ್ನು -23% ಗೆ ಕೊಂಡೊಯ್ದಿರುವುದು, ನಿರುದ್ಯೋಗ ಪ್ರಮಾಣವನ್ನು ಕಳೆದ 45 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿಸಿರುವುದು, ಪೆಟ್ರೋಲ್ ಡೀಸೆಲ್ ಬೆಲೆ ನೂರರ ಆಸುಪಾಸಿಗೆ ತಂದು ನಿಲ್ಲಿಸಿರುವುದು. 2/7#Pressmeet

— Siddaramaiah (@siddaramaiah) September 17, 2020


ದೇಶದ ಯುವಜನತೆ ಪ್ರಧಾನಿ ಮೋದಿಯವರಲ್ಲಿ ಅವರಲ್ಲಿ ಭರವಸೆ ಇಟ್ಟು ಮತ ನೀಡಿದ್ದರು, ಇಂದು ಅದೇ ಯುವಜನಾಂಗ ಉದ್ಯೋಗವಿಲ್ಲದೆ ಖಿನ್ನತೆ ಅನುಭವಿಸುತ್ತಿದೆ. ಕೃಷಿ ಕ್ಷೇತ್ರವೊಂದನ್ನು ಹೊರತುಪಡಿಸಿ ದೇಶದ ಉಳಿದೆಲ್ಲಾ ವಲಯಗಳ ಪ್ರಗತಿ ಋಣಾತ್ಮಕವಾಗಿದೆ. ಇದರಿಂದ ರಾಷ್ಟ್ರದ ಭವಿಷ್ಯಕ್ಕೆ ಅಂಧಕಾರ ಆವರಿಸಿದೆ.

ಪ್ರಧಾನಿ ಮೋದಿಯವರ ಸರ್ಕಾರ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿ, ಈಗ ಇರುವ ಉದ್ಯೋಗವನ್ನು ಕಳೆದುಕೊಳ್ಳುವಂತೆ ಮಾಡಿದೆ. ಇದರಿಂದ ನೊಂದಿರುವ ಉದ್ಯೋಗವಂಚಿತ ಯುವಜನತೆ ಈ ದಿನವನ್ನು #NationlUnemploymentDay ಎಂದು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ.

.@narendramodi ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ.

ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ.

ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು?
ದೇಶದ ಯುವಜನ ಕೇಳುತ್ತಿದ್ದಾರೆ.
2/2#NationalUnemploymentDay pic.twitter.com/TJk81IIO4z

— Siddaramaiah (@siddaramaiah) September 17, 2020


ಮಾರ್ಚ್‌ನಲ್ಲಿ 564 ಇದ್ದ ದೇಶದ ಕೊರೊನಾ ಸೋಂಕಿತರ ಪ್ರಮಾಣವನ್ನು ಕೇವಲ ಆರೇ ತಿಂಗಳಲ್ಲಿ 51 ಲಕ್ಷಕ್ಕೆ ಮುಟ್ಟಿಸಿರುವುದೇ ನರೇಂದ್ರ ಮೋದಿಯವರ ಮಹತ್ತರ ಸಾಧನೆ. ಭಾರತವನ್ನು ವಿಶ್ವಗುರು ಮಾಡ್ತೀನಿ ಅಂತ ಹೇಳಿ, ಈಗ ಕರೊನಾದಲ್ಲಿ ನಂ.1 ಮಾಡಲು ಹೊರಟಿದ್ದಾರೆ. ಸದ್ಯ ಸೋಂಕಿತರ ಏರಿಕೆ ಪ್ರಮಾಣದಲ್ಲಿ ಭಾರತವೇ ಮುಂದಿದೆ. ಆರೋಗ್ಯ ಮಂತ್ರಿ ಶ್ರೀರಾಮುಲು ತನ್ನ ಕೈಯಲ್ಲಿ ಆರೋಗ್ಯ ಇಲಾಖೆಯನ್ನು ನಿಭಾಯಿಸೋಕೆ ಆಗ್ತಿಲ್ಲ, ಸ್ವಲ್ಪ ಸಹಾಯ ಮಾಡಿ ಅಂತ ಕೇಳಿರಬಹುದು. ಇಲ್ಲದಿದ್ದರೆ ಸಂವಿಧಾನಾತ್ಮಕ ಹುದ್ದೆಯೇ ಇಲ್ಲದ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಗಳ ಸಭೆ ನಡೆಸೋಕೆ ಹೇಗೆ ಸಾಧ್ಯ? ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಾ? ಅಥವಾ ವಿಜಯೇಂದ್ರನಾ? ಎಂದು ಸರ್ಕಾರದಲ್ಲಿ ವಿಜಯೇಂದ್ರ ಅವರ ಹಸ್ತಕ್ಷೇಪವನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆರೋಗ್ಯ ಮಂತ್ರಿ @sriramulubjp ತನ್ನ ಕೈಯಲ್ಲಿ ಆರೋಗ್ಯ ಇಲಾಖೆಯನ್ನು ನಿಭಾಯಿಸೋಕೆ ಆಗ್ತಿಲ್ಲ, ಸ್ವಲ್ಪ ಸಹಾಯ ಮಾಡಿ ಅಂತ ಕೇಳಿರಬಹುದು. ಇಲ್ಲದಿದ್ದರೆ ಸಂವಿಧಾನಾತ್ಮಕ ಹುದ್ದೆಯೇ ಇಲ್ಲದ ವ್ಯಕ್ತಿಯೊಬ್ಬ ಸರ್ಕಾರಿ ಅಧಿಕಾರಿಗಳ ಸಭೆ ನಡೆಸೋಕೆ ಹೇಗೆ ಸಾಧ್ಯ? ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪನವರಾ? ಅಥವಾ ವಿಜಯೇಂದ್ರನಾ? 6/7#Pressmeet

— Siddaramaiah (@siddaramaiah) September 17, 2020


ADVERTISEMENT

ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಈಗಲೇ ಹೆಚ್ಚಿದೆ, ಇದಕ್ಕೆ ಇನ್ನಷ್ಟು ಗ್ರಾಮಗಳನ್ನು ಸೇರಿಸಿ, ಹುದ್ದೆಗಳ ಹೆಸರು ಬದಲಾಯಿಸಿದ್ರೆ ನಗರದ ಚಿತ್ರಣ ಬದಲಾಗುತ್ತಾ? ರಾಜಾಕಾಲುವೆಗಳ, ರಸ್ತೆಗಳ ದುರಸ್ತಿ, ಮೂಲ ಸೌಕರ್ಯ ಅಭಿವೃದ್ಧಿ ಆಗಬೇಕಲ್ಲಾ? ಕರ್ನಾಟಕ ಬಿಜೆಪಿ ನಾಯಕರು ಬರೀ ಭಾಷಣದಿಂದ ಬದಲಾವಣೆ ಮಾಡೋಕೆ ಹೊರಟಿದ್ದಾರೆ ಎಂದು ಹೇಳಿದ್ದಾರೆ.

ಇನ್ನು ಸಿದ್ಧರಾಮಯ್ಯರಿಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿ, “ನಿಮ್ಮ ಪಕ್ಷದ ಯುವಕ ರಾಹುಲ್‌ ಗಾಂಧಿಗೆ ಉದ್ಯೋಗವಿಲ್ಲದಿದ್ದರೆ ಅದಕ್ಕೆ ನರೇಂದ್ರ ಮೋದಿ ಹೇಗೆ ಜವಾಬ್ದಾರಿಯಾಗುತ್ತಾರೆ” ಎಂದು ಪ್ರಶ್ನಿಸಿದೆ. ಅದಾಗ್ಯೂ, ತಮ್ಮ ಪ್ರಧಾನಿ ಮೋದಿ ಸರ್ಕಾರ, ಉದ್ಯೋಗ ಸೃಷ್ಟಿಸಲು ತರುವಂತಹ ಯೋಜನೆಗಳು, ರಚನಾತ್ಮಕ ಕಾರ್ಯಗಳೇನಿದ್ದರೆ ಅದರ ಮೇಲೆ ಬೆಳಕು ಚೆಲ್ಲಬೇಕಾದಂತಹ ಬಿಜೆಪಿ ವ್ಯಂಗ್ಯದ ಮೂಲಕ ಜವಾಬ್ದಾರಿಯಿಂದ ನುಣುಚಿಕೊಳ್ಳುವುದು ಸ್ಪಷ್ಟವಾಗಿ ಗೋಚರಿಸಿದೆ.

ಸೆಪ್ಟೆಂಬರ್‌ 17 ರಂದು 70 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವೆಂದು ದಿನಪೂರ್ತಿ ಟ್ವಿಟರ್‌ ಟ್ರೆಂಡ್‌ ಮಾಡಲಾಗುತ್ತಿದೆ.

Also Read: ಮೋದಿ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಿಸಿದ ನೆಟ್ಟಿಗರು

Tags: ‌ ಸಿದ್ದರಾಮಯ್ಯನರೇಂದ್ರ ಮೋದಿ
Previous Post

ಮೋದಿ ಹುಟ್ಟುಹಬ್ಬವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಆಚರಣೆ

Next Post

ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
Next Post
ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು

ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada