ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜುಲೈ 30ರ ಸಂಜೆ ಐದು ಗಂಟೆಗೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 5,483 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,24,115 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 49,788 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,220 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 555,44 ತಲುಪಿದೆ. ಒಟ್ಟು 1,113 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,029 ಮಂದಿ ಮರಣಹೊಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರಾಜ್ಯದಲ್ಲಿ ಸಕ್ರಿಯವಾಗಿರುವ 72,005 ಪ್ರಕರಣಗಳಲ್ಲಿ, ಆರೋಗ್ಯ ಸ್ಥಿತಿ ಗಂಭೀರವಾಗಿರುವ 609 ಮಂದಿಯನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದಾಗಿ 84 ಮಂದಿ ಇಂದು ಅಸುನೀಗಿದ್ದಾರೆಂದು ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ. ರಾಜ್ಯದಲ್ಲಿ ಇದುವರೆಗೂ ಕರೋನಾ ಸೋಂಕಿನಿಂದಾಗಿ 2,314 ಮಂದಿ ಮೃತಪಟ್ಟಿದ್ದಾರೆ.







