ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 2 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ 5532 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 1,34,819 ಕ್ಕೇರಿದೆ. ಇದುವರೆಗೂ ರಾಜ್ಯದಲ್ಲಿ 57,725 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,105 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 59,501 ತಲುಪಿದೆ. ಒಟ್ಟು 20,910 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,077 ಮಂದಿ ಮರಣಹೊಂದಿದ್ದಾರೆ.







