ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನವೆಂಬರ್ 3ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 2756 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 1479 ಹೊಸ ಪ್ರಕರಣಗಳು ಕಂಡು ಬಂದಿವೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 8,32,396 ತಲುಪಿದ್ದು, ಇವರಲ್ಲಿ 7,80,735 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 40,395 ಪ್ರಕರಣಗಳಲ್ಲಿ, 932 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 11,247 ಮಂದಿ ಅಸುನೀಗಿದ್ದಾರೆ. ಕಳೆದ 24 ಗಂಟೆಯಲ್ಲಿ 26 ಜನರು ಕರೋನಾ ಸೋಂಕಿಗೆ ಬಲಿಯಾಗಿದ್ದಾರೆ.






