ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 22 ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 7,330 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಪ್ರಕರಣಗಳ ಸಂಖ್ಯೆ 2,71,876 ಕ್ಕೇರಿದೆ.
ಇದುವರೆಗೂ ರಾಜ್ಯದಲ್ಲಿ 1,84,568 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 83,066 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 7,626 ಸೋಂಕಿತರು ಬಿಡುಗಡೆಹೊಂದಿದ್ದಾರೆ. 727 ಮಂದಿ ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,979 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 1,05,749 ತಲುಪಿದೆ. ಒಟ್ಟು 69,861 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,663 ಮಂದಿ ಸಾವನ್ನಪ್ಪಿದ್ದಾರೆ.
ಅಚ್ಚರಿಯೆನಿಸುವಂತೆ, ಸರ್ಕಾರ ಬಿಡುಗಡೆ ಮಾಡಿರುವ ಕೋವಿಡ್ ಪ್ರಕಟನೆಯಲ್ಲಿ, ಮೈಸೂರಿನಲ್ಲಿ ನಿನ್ನೆ ಹಾಗೂ ಇಂದು ಕಂಡು ಬಂದ ಹೊಸ ಪ್ರಕರಣಗಳು ಶೂನ್ಯ, ಹಾಗೂ ಬಿಡುಗಡೆಹೊಂದಿದವರ ಸಂಖ್ಯೆಯೂ 0. ಮೈಸೂರಿನಲ್ಲಿ ನಡೆಯುತ್ತಿರುವ ಕರೋನಾ ವಾರಿಯರ್ಸ್ ಪ್ರತಿಭಟನೆಯ ಹಿನ್ನಲೆಯಲ್ಲಿ ಕರೋನಾ ಪರೀಕ್ಷೆ ನಡೆಯದಿರುವುದೇ ಇದಕ್ಕೆ ಕಾರಣ.