ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸೆಪ್ಟೆಂಬರ್ 16ರಂದು ಹೊರಡಿಸಿದ ಪತ್ರಿಕಾ ಪ್ರಕಟಣೆಯ ಪ್ರಕಾರ ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ ಒಟ್ಟು 9725 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಬೆಂಗಳೂರಿನಲ್ಲಿ 3571 ಹೊಸ ಪ್ರಕರಣಗಳು ಕಂಡು ಬಂದಿವೆ. ಬೆಂಗಳೂರು ಒಂದರಲ್ಲೇ ಪತ್ತೆಯಾದ ಒಟ್ಟು ಪ್ರಕರಣಗಳ ಸಂಖ್ಯೆ 1,80,283 ಕ್ಕೇರಿದೆ. ಇವರಲ್ಲಿ 1,38,289 ಜನರು ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 4,84,990 ತಲುಪಿದ್ದು, ಇವರಲ್ಲಿ 3,75,809 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 1,01,626 ಪ್ರಕರಣಗಳಲ್ಲಿ, 818 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ ಇದುವರೆಗೂ 7536 ಮಂದಿ ಅಸುನೀಗಿದ್ದಾರೆ.






