• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕುರುಬರ ಸಂಘದ ನೂತನ ಕಟ್ಟಡವನ್ನು 34 ಕೋಟಿ ರೂ.ಗಳಲ್ಲಿ ನಿರ್ಮಿಸಲು ಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
July 6, 2025
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಶೋಷಿತ ವರ್ಗಗಳ ಅಭಿವೃದ್ಧಿಗೆ ಬದ್ಧನಾಗಿದ್ದೇನೆ-ಮುಖ್ಯಮಂತ್ರಿ ಸಿದ್ದರಾಮಯ್ಯ

ADVERTISEMENT

ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ-ಜನರಿಗೆ ಸಿಎಂ ಕರೆ
ಬೆಂಗಳೂರು, ಜುಲೈ 6 : ಶಿಕ್ಷಣದಿಂದ ವಂಚಿತರಾಗದೇ, ವೈಚಾರಿಕತೆ ಮತ್ತು ವೈಜ್ಞಾನಿಕತೆ ಬೆಳೆಸಿಕೊಂಡು ಸ್ವಾಭಿಮಾನಿಗಳಾಗಿ ಬದುಕಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಸಮಾಜದ ಬಂಧುಗಳಿಗೆ ಕರೆ ನೀಡಿದರು.

ಅವರು ಇಂದು ತಾವರೆಕೆರೆ ಬಳಿಯ ಕೆತೋಹಳ್ಳಿ ಯಲ್ಲಿರುವ ಬ್ರಹ್ಮಲೀನ ಜಗದ್ಗುರು ಶ್ರೀ ಬಿರೇಂದ್ರ ಕೇಶದ ತಾರಕಾನಂದಪುರಿ ಮಹಾಸ್ವಾಮಿಗಳ 19ನೇ ವರ್ಷದ ಪುಣ್ಯರಾಧನೆಯ ಸ್ಮರಣಾರ್ಥವಾಗಿ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ ಭಂಡಾರದ ಕುಟೀರವನ್ನು ಲೋಕಾರ್ಪಣೆ ಮಾಡಿದ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು

Siddaramaih : ಮಠಕ್ಕೆ 10 ಕೋಟಿ ರೂಪಾಯಿ ಅನುದಾನ #pratidhvani

ಕಾಗಿನೆಲೆ ಗುರುಪೀಠದ ಶಾಖಾಮಠದ ಭಕ್ತರ ಭಂಡಾರದ ಕುಟೀರಕ್ಕೆ ಹಿಂದೆ ನಾನೇ ಶಂಕುಸ್ಥಾಪನೆ ಮಾಡಿ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿರುವುದಾಗಿ ತಿಳಿಸಿದರು.ಕಾಗಿನೆಲೆ ಗುರುಪೀಠದ ಸ್ವಾಮಿಗಳು ಶಾಖಾಮಠದ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ. 10 ಕೋಟಿ ರೂ.ಬೆಲೆಬಾಳುವ ಆಸ್ತಿಯನ್ನು ಒಂದು ಎಕರೆ ಜಾಗವನ್ನು ಮಹೇಶ್ ಅವರು ಕೊಟ್ಟಿದ್ದು ಶ್ಲಾಘನೀಯ. ಅವರಿಗೆ ಎಲ್ಲರ ಪರವಾಗಿ ಧನ್ಯವಾದಗಳನ್ನು ಮುಖ್ಯಮಂತಿಗಳು ಅರ್ಪಿಸಿದರು.

ಕಾಗಿನೆಲೆ ಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಯಾವುದೇ ಕಟ್ಟಡಗಳನ್ನು ಅತ್ಯಂತ ಕ್ಷಿಪ್ರವಾಗಿ ಕಟ್ಟುತ್ತಾರೆ ಎಂದು ಶ್ಲಾಘಿಸಿದ ಮುಖ್ಯಮಂತ್ರಿಗಳು ಎರಡೇ ವರ್ಷಗಳಲ್ಲಿ ಭಕ್ತರಿಂದ ವಂತಿಗೆ ಪಡೆದು ನಿರ್ಮಾಣ ಮಾಡಿದ್ದಾರೆ. ಸಚಿವ ಸುರೇಶ್ ಅವರು 50 ಲಕ್ಷ ರೂ.ಗಳ ದೇಣಿಗೆ ನೀಡಿದ್ದು, ಈ ಕಾರ್ಯಕ್ಕೆ ವಂತಿಗೆ ನೀಡಿದ ಎಲ್ಲರಿಗೂ ಮುಖ್ಯಮಂತ್ರಿಗಳು ಧನ್ಯವಾದಗಳನ್ನು ಅರ್ಪಿಸಿದರು. ಕುಟೀರವನ್ನು ನಿರ್ಮಾಣ ಮಾಡಲು ಎಲ್ಲರ ಸಹಾಯ ಪಡೆದಿದ್ದಾರೆ. ಸುಮಾರು 4 ಕೋಟಿ ಯಷ್ಟು ಹಣವನ್ನು ವೆಚ್ಚ ಮಾಡಿದ್ದು, ಇತರರು ವಸ್ತುಗಳ ರೂಪದಲ್ಲಿ ದೇಣಿಗೆ ನೀಡಿದ್ದಾರೆ. ಮಠ ಬೆಳೆಯಬೇಕು. ಬೆಳೆಯಬೇಕಾದರೆ ಜನರಿಂದಲೇ ಬೆಳೆಯಬೇಕು. ಮಠಮಾನ್ಯಗಳು ಬೆಳೆಯಬೇಕಾದರೆ ಜನರಿಂದ ಮಾತ್ರ ಸಾಧ್ಯ. ಸರ್ಕಾರದ ಮೇಲೆ ಅವಲಂಬಿತವಾದರೆ ಬೆಳೆಯಲು ಸಾಧ್ಯವಿಲ್ಲ. 1992 ರಲ್ಲಿ ಪ್ರಾರಂಭವಾದ ಮಠವನ್ನು ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 25 ಲಕ್ಷ ರೂ.ಗಳ ನೀಡಲು ಮುಂದಾದಾಗ, ಅದನ್ನು ನಿರಾಕರಿಸಲಾಯಿತು ಎಂದು ಸ್ಮರಿಸಿದರು. ಉದ್ಯಮಿ ಹರಿ ಖೋಡೆಯವರು ಮಠ ಕುರುಬರ ಮಠವಲ್ಲ, ದಲಿತರು, ಅಲ್ಪಸಂಖ್ಯಾತರು ಹಾಗೂ ಮಠವನ್ನು ಹೊಂದಿಲ್ಲದವರಿಗೆ ಸೇರಿದ ಮಠ ಎಂದು ಘೋಷಣೆ ಮಾಡಿದ್ದರು ಎಂದು ತಿಳಿಸಿದರು.

ಜನರಲ್ಲಿ ಜಾಗೃತಿ ಮೂಡಿಸಲು ಮಠದ ಅಗತ್ಯವಿದೆ

ಜನರಲ್ಲಿ ಜಾಗೃತಿ ಮೂಡಿಸಲು ಮಠದ ಅಗತ್ಯವಿದೆ. ಶಿಕ್ಷಣ, ಆರೋಗ್ಯ, ಸಂಘಟನೆ ಸಾಧ್ಯವಾಗುತ್ತಿರಲಿಲ್ಲ ಎಂದರು. ಜಾತ್ಯಾತೀತ ಸಮಾಜ ನಿರ್ಮಾಣ ಮಾಡಬೇಕು ಎಂದು ಬಸವಾದಿ ಶರಣರು, ಕನಕದಾಸರು, ಮಹಾತ್ಮಾ ಗಾಂಧಿ, ಅಂಬೇಡ್ಕರ್ ಹಾಗೂ ಸಂವಿಧಾನ ಹೇಳಿರುವುದು. ಸರ್ವೋದಯವಾಗಬೇಕೆಂದು ಇವರೆಲ್ಲರೂ ಕರೆ ನೀಡಿದ್ದರು. ಕುವೆಂಪು ಅವರು ಸರ್ವರಿಗೂ ಸಮಪಾಲು, ಸಮಬಾಳು ಇರಬೇಕೆಂದು ಕರೆ ನೀಡಿದರು. ಅಂತಿಮವಾಗಿ ಸಮ ಸಮಾಜ ನಿರ್ಮಾಣವಾಗಬೇಕು ಎಂದರು. ವಿಚಾರ ಕ್ರಾಂತಿಕಾರರನ್ನು ನೆನೆದು ಸ್ಪೂರ್ತಿ ಪಡೆಯುವ ಕೆಲಸವಾಗಬೇಕು ಎಂದರು.

ಶಿಕ್ಷಣ ಪಡೆದು ಗುಲಾಮಗಿರಿಯಿಂದ ದೂರವಾಗಬೇಕು
ಡಾ.ಬಿ.ಆರ್.ಅಂಬೇಡ್ಕರ್ ಅವರು ಹೇಳಿದಂತೆ ಜಾತಿಯತೆ ವಾಸ್ತವವಾಗಿದ್ದು, ಶಿಕ್ಷಣ, ಸಂಘಟನೆ,ಹೋರಾಟಗಳನ್ನು ಶೋಷಿತ ವರ್ಗದ ಜನರು ಪಾಲಿಸಬೇಕಾದ ಅಂಶಗಳು. ಇಲ್ಲದಿದ್ದರೆ ಜಾತಿ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯವಿಲ್ಲ. ಶೋಷಿತ ವರ್ಗಗಳು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ಸಮಸಮಾಜ ನಿರ್ಮಾಣವಾಗುತ್ತದೆ. ವಿದ್ಯೆಯಿಂದ ಮಾತ್ರ ಸ್ವಾಭಿಮಾನ ಬೆಳೆದು ಮನುಷ್ಯರಾಗಲು ಸಾಧ್ಯ. ಇಲ್ಲವೇ ಗುಲಾಮಗಿರಿ ನಮ್ಮಲ್ಲಿ ಮನೆಮಾಡುತ್ತದೆ. ಸಮುದಾಯವನ್ನು ಬೆಳೆಸಿ ಇತರರನ್ನು ಬೆಳೆಸಿ ಎಂದು ತಿಳಿಸಿದರು.

80 ಎಕರೆ ಸರ್ಕಾರಿ ಜಮೀನನ್ನು ವಿವಿಧ ಸಮಾಜದ ಮಠಮಾನ್ಯಗಳಿಗೆ ನೀಡಲು ಪರಿಶೀಲನೆ
ಕಾಗಿನೆಲೆ ಮಹಾಸಂಸ್ಥಾನದ ಪೀಠದ ವತಿಯಿಂದ ಸಮಾಜಮುಖಿ ಕೆಲಸಗಳಾಗುತ್ತಿರುವುದು ಶ್ಲಾಘನೀಯ. ಇದಕ್ಕೆ ಶ್ರಮಿಸುತ್ತಿರುವ ಜಗದ್ಗುರು ನಿರಂಜನಾನಂದ ಸ್ವಾಮಿ ಹಾಗೂ ಶಾಖಾಮಠದ ಸ್ವಾಮೀಜಿಗಳಿಗೆ ಅಭಿನಂದಿಸುತ್ತೇನೆ. ಮೈಸೂರಿನಲ್ಲಿ ಯಾಂದಳ್ಳಿ ಗ್ರಾಮದಲ್ಲಿ 12 ಎಕರೆ ಜಾಗವನ್ನು ನೀಡಲಾಗಿದ್ದು, ಭವನ ನಿರ್ಮಾಣವನ್ನು ಪೂರ್ಣಗೊಳಿಸುವುದಾಗಿ ತಿಳಿಸಿದರು. ಬೆಂಗಳೂರಿನ ಬನಶಂಕರಿಯಲ್ಲಿ ಕಾನೂನು ಕಾಲೇಜು ಮತ್ತು ಯುಪಿಎಸ್ ಸಿ ತರಬೇತಿಗಾಗಿ ಕಟ್ಟಡವನ್ನು ಈಗಾಗಲೇ ನಿರ್ಮಿಸಲಾಗಿದೆ. ಕುರುಬರ ಸಂಘದ ನೂತನ ಕಟ್ಟಡ ನಿರ್ಮಾಣವನ್ನು 34 ಕೋಟಿ ರೂ. ಕೈಗೆತ್ತಿಕೊಳ್ಳಲಾಗಿದೆ. ಮೈಸೂರು ಜಿಲ್ಲೆಯಲ್ಲಿ 300 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ಮತ್ತು ಯುಪಿಎಸ್ ಸಿ ತರಬೇತಿ ನೀಡಲು ಕ್ರಮಕೈಗೊಳ್ಳಲಾಗುತ್ತಿದೆ. ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿರುವ ಶ್ರೀ ಕಾಗಿನೆಲೆ ಗುರುಪೀಠದಕ್ಕೆ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ವ್ಯಾಪ್ತಿಯಲ್ಲಿ 80 ಎಕರೆ ಸರ್ಕಾರಿ ಜಮೀನನ್ನು ವಿವಿಧ ಸಮಾಜದ ಮಠಮಾನ್ಯಗಳಿಗೆ ಹಂಚುವ ಬಗ್ಗೆ ಸರ್ಕಾರ ಪರಿಶೀಲಿಸಿದೆ. ವಿವಿಧ ಸಮಾಜದ ಸ್ವಾಮೀಜಿಗಳು ಕೋರಿದಂತೆ ಸಮಾಜದ ಅಭಿವೃದ್ಧಿಗೆ ಅನುದಾನವನ್ನು ನೀಡಲು ಪರಿಶೀಲಿಸಲಾಗುವುದು ಎಂದರು.

Siddaramaiah: ನಾಗಲಕ್ಷ್ಮಿ ಹೆಸರು ಹೇಳಿದಾಗ ಕೇಕೇ ಹೊಡೆದ ವ್ಯಕ್ತಿ.. ಪ್ರಶ್ನಿಸಿದ ಸಿದ್ರಾಮಯ್ಯ #pratidhvani

ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷ ಜಗದ್ಗುರು ನಿರಂಜನಾನಂದ ಸ್ವಾಮಿ, ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್ ಎಂ.ರೇವಣ್ಣ, ಸಚಿವರಾದ ಬೈರತಿ ಸುರೇಶ್, ಶಾಸಕರಾದ ಎಸ್.ಆರ್. ವಿಶ್ವನಾಥ್, ಮಾಜಿ ಸಚಿವ ಬಂಡೆಪ್ಪ ಕಾಶ್ಯಂಪುರ, ಬಸವರಾಜ ಶಿವಣ್ಣ, ಹುಲಿನಾಯ್ಕರ್ , ಆರ್.ಶಂಕರ್, ಶಾಸಕರಾದ ಮಂಜುನಾಥ್, ಶ್ರೀನಿವಾಸ್, ಭೀಮಸೇನಾ ಚಿಮ್ಮನಕಟ್ಟಿ, ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬಳ್ಳಾರಿ ಸಮ್ಮೇಳನದ ಸರ್ವಾಧ್ಯಕ್ಷ ಸ್ಥಾನವನ್ನು ಬಾನು ಮಷ್ತಾಕ್‌

Next Post

ತಾಯ್ತನ ಹೆಣ್ಣಿನ ಆಜನ್ಮ ಸಿದ್ದ ಹಕ್ಕು ನಿಜ. ಆದರೆ ಮದುವೆ ಎನ್ನುವುದು ಸಾಮಾಜಿಕ ಬದ್ಧತೆ.

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ತಾಯ್ತನ ಹೆಣ್ಣಿನ ಆಜನ್ಮ ಸಿದ್ದ ಹಕ್ಕು ನಿಜ. ಆದರೆ ಮದುವೆ ಎನ್ನುವುದು ಸಾಮಾಜಿಕ ಬದ್ಧತೆ.

ತಾಯ್ತನ ಹೆಣ್ಣಿನ ಆಜನ್ಮ ಸಿದ್ದ ಹಕ್ಕು ನಿಜ. ಆದರೆ ಮದುವೆ ಎನ್ನುವುದು ಸಾಮಾಜಿಕ ಬದ್ಧತೆ.

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada