ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಜುಲೈ 10 ರಂದು ಹೊರಡಿಸಿರುವ ಕೋವಿಡ್-19 ಮಾಧ್ಯಮ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2313 ಹೊಸ ಪ್ರಕರಣಗಳು ಪತ್ತೆಯಾಗಿದೆ. 1003 ಮಂದಿ ಕರೋನಾ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದು, ಒಟ್ಟು 13,836 ಮಂದಿ ಸೋಂಕಿನಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ.
ರಾಜ್ಯದಲ್ಲಿ ಇದುವರೆಗೂ ಒಟ್ಟು 33,418 ಕರೋನಾ ಪ್ರಕರಣಗಳು ಅಧಿಕೃತವಾಗಿ ದಾಖಲಾಗಿದೆ.ಇಂದು 57 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಕರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 543 ತಲುಪಿದೆ. ರಾಜ್ಯದಲ್ಲಿ ಸದ್ಯ 19,035 ಸಕ್ರಿಯ ಕರೋನಾ ಪ್ರಕರಣಗಳಿವೆ. 472 ಮಂದಿ ಸೋಂಕಿತರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ.

ಬೆಂಗಳೂರು ನಗರವೊಂದರಲ್ಲೇ 1447 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 15,329 ತಲುಪಿದೆ. ಅಂದರೆ ರಾಜ್ಯದಲ್ಲಿ ಪತ್ತೆಯಾದ ಪ್ರಕರಣಗಳಲ್ಲಿ ಸುಮಾರು ಅರ್ಧಕ್ಕರ್ಧ ಪ್ರಕರಣಗಳು ರಾಜ್ಯ ರಾಜಧಾನಿಯೊಂದರಲ್ಲೇ ಪತ್ತೆಯಾಗಿದೆ. ಅದೇ ವೇಳೆ ರಾಜ್ಯ ರಾಜಧಾನಿಯಲ್ಲಿ ಚೇತರಿಕೆಯ ಪ್ರಮಾಣ ಗಣನೀಯವಾಗಿ ಕಡಿಮೆಯಿದೆ. ಇದುವರೆಗೂ ನಗರದಲ್ಲಿ 3435 ಪ್ರಕರಣಗಳಲ್ಲಷ್ಟೇ ಚೇತರಿಕೆ ಕಂಡು ಬಂದಿದೆ.
ಇನ್ನು ದೇಶದಾದ್ಯಂತ 26,506 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 7,93,802 ತಲುಪಿದೆ. ಇದುವರೆಗೂ 4,95,513 ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಒಟ್ಟು 2,76,685 ಸಕ್ರಿಯ ಪ್ರಕರಣಗಳಿವೆ. ದೇಶದೊಳಗೆ ಕರೋನಾ ಸೋಂಕಿನಿಂದ 21,604 ಮಂದಿ ಮೃತಪಟ್ಟಿದ್ದಾರೆ.