• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗೋಹತ್ಯೆ ನಿಷೇಧ ಕಾನೂನು; ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ ಕುಮಾರಸ್ವಾಮಿ

by
December 10, 2020
in ಕರ್ನಾಟಕ
0
ಗೋಹತ್ಯೆ ನಿಷೇಧ ಕಾನೂನು; ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳಿದ ಕುಮಾರಸ್ವಾಮಿ
Share on WhatsAppShare on FacebookShare on Telegram

ಸರ್ಕಾರ ಜಾರಿಗೆ ತರಲು ಹೊರಟಿರುವ ಗೋಹತ್ಯೆ ನಿಷೇಧ ಕಾಯ್ದೆಯನ್ನು ರೈತ ದೃಷ್ಟಿಕೋನದಿಂದ ಪರಾಮರ್ಶಿಸಿರುವ ಕುಮಾರಸ್ವಾಮಿ ಅವರು, ಸರ್ಕಾರಕ್ಕೆ ಹಲವು ಸಲಹೆಗಳನ್ನು ಸಲ್ಲಿಸಿದ್ದಾರೆ. ಇದರೊಂದಿಗೆ ಕಾಯ್ದೆಯಲ್ಲಿರುವಂತಹ ಲೋಪದೋಷಗಳ ಕುರಿತು ಪ್ರಶ್ನಿಗಳನ್ನು ಎತ್ತಿದ್ದಾರೆ.

ADVERTISEMENT

“ಗೋಹತ್ಯೆ ನಿಷೇಧ ಕಾಯ್ದೆಯಲ್ಲಿ ಕಾಂಗ್ರೆಸ್‌-ಬಿಜೆಪಿಗೆ ಮತಬ್ಯಾಂಕ್‌ನದ್ದೇ ಆದ್ಯತೆ. ಆದರೆ, ಹಾಲು ಉತ್ಪಾದನೆಯಲ್ಲಿ ತೊಡಗಿರುವ 24 ಲಕ್ಷ ರೈತ ಕುಟುಂಬಗಳಿಗೆ ಕಾಯ್ದೆ ಬಗ್ಗೆ ಇರಬಹುದಾದ ಆತಂಕಗಳನ್ನು ಜೆಡಿಎಸ್‌ ವಿಮರ್ಶಿಸಲು ಬಯಸುತ್ತದೆ. ಈ ಹಿಂದೆಯೇ ಹೇಳಿದಂತೆ ಜೆಡಿಎಸ್‌ ಒಂದು ಪಕ್ಷವಾಗಿ ಮಾತ್ರವಲ್ಲ, ರೈತ ಸಂಘವಾಗಿ ಕೆಲಸ ಮಾಡಲಿದೆ,” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಸರ್ಕಾರ ಗೋಹತ್ಯೆ ನಿಷೇಧಿಸುವ ಕಾಯ್ದೆಯನ್ನು ರೂಪಿಸಿದೆ. ಆದರೆ, ಗೋಹತ್ಯೆ ನಿಷೇಧದ ಜೊತೆಗೆ ಗೋಮಾತೆಯನ್ನು ರಕ್ಷಿಸುವ, ಗೋಮಾತೆಯನ್ನೇ ನಂಬಿದ ರೈತರನ್ನು ರಕ್ಷಿಸುವ ಕಾನೂನಾಗಿಯೂ ಇವತ್ತಿನ ಈ ಕಾಯ್ದೆ ವರ್ತಿಸಬೇಕು ಎಂಬುದು ರೈತರ ಪ್ರತಿನಿಧಿಯಾದ ಜೆಡಿಎಸ್‌ನ ಒತ್ತಾಯ. ಈ ವಿಚಾರವಾಗಿ ಯಾರದ್ದೂ ತಕರಾರು ಇಲ್ಲ ಎಂದು ನಾವು ಭಾವಿಸುತ್ತೇವೆ. ನಾವೆಲ್ಲರೂ ಹಸುಗಳನ್ನು ಪೂಜಿಸುತ್ತೇವೆ. ಆದರೆ, ರೈತ ಮಾತ್ರ ಅದನ್ನು ಪೋಷಿಸುವ ಹೊಣೆ ಹೊತ್ತಿದ್ದಾನೆ. ಮತ್ತು, ಅದರ ಮೇಲೆಯೇ ಅವನ ಜೀವನ ನಿರ್ವಹಣೆಯೂ ಅವಲಂಬಿತವಾಗಿದೆ. ಗೋವಿನ ಪೋಷಣೆ ಎಂಬುದೇ ಆರ್ಥಿಕ ಹೊರೆಗೆ ಕಾರಣವಾದರೆ, ಆತನ ನೆರವಿಗೆ ನಿಲ್ಲುವವರು ಯಾರು? ಇದು ಸಾಮಾನ್ಯ ರೈತನಿಗೆ ಇರುವ ಪ್ರಶ್ನೆ. ಸರ್ಕಾರ ಇದಕ್ಕೆ ಪರಿಹಾರ ಹುಡುಕಬೇಕು, ಎಂದು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ರೈತ ತಾನು ಪೂಜಿಸುವ, ಪೋಷಿಸುವ, ಜೀವನಾಧಾರವನ್ನಾಗಿ ನಂಬಿರುವ ಗೋವು ಈ ಕಾಯ್ದೆ ಮೂಲಕ ಆತನಿಗೆ ಹೇಗೆ ಹೊರೆಯಾಗುತ್ತದೆ? ತಾನು ಸಾಕಿದ ಹಸು ಗಂಡು ಕರು ಹಾಕಿದಾಗ, ಹಸುವಿಗೆ ವಯಸ್ಸಾದಾಗ, ಕಾಯಿಲೆ ಬಿದ್ದಾಗ ಅದರ ನಿರ್ವಹಣೆ ಕಷ್ಟ. ಈಗಾಗಲೇ ಸಂಕಷ್ಟದಲ್ಲಿರುವ ರೈತನಿಗೆ ಈ ಹೊರೆ ಜೀವನ್ಮರಣದ ಪ್ರಶ್ನೆಯಾಗಲೂಬಹುದು ಎಂಬುದನ್ನು ಸರ್ಕಾರ ಮರೆತಂತಿದೆ. ರೈತರು ಈಗ ಹಾಲು ಉತ್ಪಾದನೆಗಾಗಿ ಪೋಷಿಸುತ್ತಿರುವ ಹಸುಗಳ ಗಂಡು ಕರುಗಳನ್ನು ಸಾಕುವುದು ಆರ್ಥಿಕವಾಗಿ ಹೊರೆ. ಅದು ಬೆಳೆದರೂ ಕೃಷಿ ಕಾರ್ಯಗಳಿಗೆ ಬಳಕೆಗೆ ಯೋಗ್ಯವಲ್ಲ. ಹೀಗಾದಾಗ ಹೈನುಗಾರಿಕೆಗೆ ಹೊಡೆತ ಬೀಳುತ್ತದೆ. ಕ್ರಮೇಣ ರೈತರು ಹೈನುಗಾರಿಕೆಯಿಂದಲೇ ವಿಮುಖವಾಗಬಹುದು. ಅದು ಮತ್ತೊಂದು ಸಮಸ್ಯೆಗೆ ಕಾರಣವಾಗಬಹುದು ಎಂಬುದನ್ನು ಗಮನಿಸಲೇಬೇಕು,” ಎಂದಿದ್ದಾರೆ.

“ಸದ್ಯ ಸರ್ಕಾರ ತಂದಿರುವ ಕಾಯ್ದೆಯು ರೈತರು ಗಂಡು ಕರುಗಳನ್ನು, ವಯಸ್ಸಾದ ರಾಸುಗಳನ್ನು, ರೋಗಕ್ಕೀಡಾದ ಹಸುಗಳನ್ನು ಪೋಷಿಸಲೇಬೇಕಾದ ಷರತ್ತಿಗೆ ದೂಡುತ್ತದೆ. ಪ್ರಾಯೋಗಿಕವಲ್ಲದ ಷರತ್ತುಗಳ ಮೂಲಕ ಸರ್ಕಾರ ರೈತರ ಮೇಲೆ ಹೆಚ್ಚಿನ ಒತ್ತಡ ಹೇರಲು ಪ್ರಯತ್ನಿಸಿದರೆ, ರೈತರು ಹೈನುಗಾರಿಕೆಯಿಂದ ದೂರ ಸರಿಯಬಹುದು. ಆಗ ಹಾಲು ಉತ್ಪಾದನೆಗೆ ಹೊಡೆತ ಬೀಳಲಿದೆ. ಜಾನುವಾರುಗಳನ್ನು ಸೂಕ್ತ ಪ್ರಾಧಿಕಾರದ ಪರವಾನಗಿ ಪಡೆದು ವಧೆ ಮಾಡಬಹುದು. ಇದಕ್ಕೆ ಪಶು ವೈದ್ಯಾಧಿಕಾರಿಯ ಪ್ರಮಾಣ ಪತ್ರ ಬೇಕು ಎಂದು ಹೇಳಲಾಗಿದೆ. ಚಿಕಿತ್ಸೆಗೇ ಈಗ ಪಶುವೈದ್ಯರ ಲಭ್ಯತೆ ಇಲ್ಲ. ಇನ್ನು ಪ್ರಮಾಣ ಪತ್ರಕ್ಕೆ ಲಭ್ಯರಾಗುವರೇ? ಪ್ರಮಾಣ ಪತ್ರ, ಅನುಮತಿ ಪಡೆಯುವ ಪ್ರಕ್ರಿಯೆ ದಂಧೆಯ ರೂಪ ತಾಳದೇ? ರೈತರ ಶೋಷಣೆ ನಡೆಯುವುದಿಲ್ಲವೇ?” ಎಂದು ಅವರು ಹೇಳಿದ್ದಾರೆ.

ಜಾನುವಾರಿನ ವಧೆಯಾದ ಪ್ರಕರಣದಲ್ಲಿ ಮಾರಾಟ ಮಾಡಿದ ರೈತನನ್ನೂ ಹೊಣೆಗಾರನನ್ನಾಗಿಸುವ ನಿಯಮವಿದೆ. ರೈತ ತಾನು ಮಾರಾಟ ಮಾಡಿದ ಜಾನುವಾರು ವಧಾಸ್ಥಳಕ್ಕೆ ಹೋಗುತ್ತದೆ ಎಂಬುದನ್ನು ಅಂದಾಜಿಸಲು ಹೇಗೆ ಸಾಧ್ಯ? ಎಂದು ಅವರು ಪ್ರಶ್ನಿಸಿದ್ದಾರೆ.

Previous Post

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ; ರಾಜ್ಯಪಾಲರಿಂದ ಸರ್ಕಾರಕ್ಕೆ ನಿರ್ದೇಶನ ನೀಡುವ ಭರವಸೆ

Next Post

ಪ್ರಧಾನಿ ಮೋದಿ ಕುರಿತು ಯೂರೋಪ್‌ನಲ್ಲಿ ಸುಳ್ಳು ಪ್ರಚಾರ; ANI ಹಾಗೂ ಶ್ರೀವಾಸ್ತವ ಗ್ರೂಪ್‌ ವಿರುದ್ದ ಆರೋಪ

Related Posts

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?
Top Story

ಗಂಡನ ಸಾಲ, ಹೆಂಡತಿ ಅಕೌಂಟ್‌ಗೆ ಬಿತ್ತು ಕತ್ತರಿ : ಗೃಹ ಲಕ್ಷ್ಮಿ ಹಣಕ್ಕೂ ಬ್ಯಾಂಕ್‌ಗಳಲ್ಲಿ ಇಲ್ಲದಾಯಿತೇ ಭದ್ರತೆ..?

by ಪ್ರತಿಧ್ವನಿ
May 1, 2026
0

ಹಾವೇರಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮೆ ಮಾಡಲಾಗುತ್ತಿದೆ. ಕೆಲವರಿಗೆ ಅದರ ಲಾಭ...

Read moreDetails
ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
Next Post
ಪ್ರಧಾನಿ ಮೋದಿ ಕುರಿತು ಯೂರೋಪ್‌ನಲ್ಲಿ ಸುಳ್ಳು ಪ್ರಚಾರ; ANI ಹಾಗೂ ಶ್ರೀವಾಸ್ತವ ಗ್ರೂಪ್‌ ವಿರುದ್ದ ಆರೋಪ

ಪ್ರಧಾನಿ ಮೋದಿ ಕುರಿತು ಯೂರೋಪ್‌ನಲ್ಲಿ ಸುಳ್ಳು ಪ್ರಚಾರ; ANI ಹಾಗೂ ಶ್ರೀವಾಸ್ತವ ಗ್ರೂಪ್‌ ವಿರುದ್ದ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada