ಕರ್ನಾಟಕ ಉಪಚುನಾವಣೆ ಬಳಿಕ ಎದುರಾಗುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ಮೇಲೆ ಕಣ್ಣಿಟ್ಟಿರುವ ಆಡಳಿತರೂಢ ಭಾರತೀಯ ಜನತಾ ಪಕ್ಷ ಅತೀ ಹೆಚ್ಚು ಸ್ಥಾಗಳನ್ನು ಗೆಲ್ಲಲು ಮುಂದಾಗಿದೆ. ಹೀಗಾಗಿ ರಾಜ್ಯ ಚುನಾವಣೆ ಆಯೋಗ ಚುನಾವಣೆ ಘೋಷಣೆ ಮಾಡುವ ಮುನ್ನವೇ ತಯಾರಿ ನಡೆಸಿಕೊಳ್ಳುತ್ತಿರುವ ಬಿಜೆಪಿ, ರಾಜ್ಯಾದ್ಯಂತ ಮತದಾರರನ್ನು ಸೆಳೆಯಲು ಹಲವಾರು ಸಮಾವೇಶಗಳನ್ನು ಮಾಡಲು ನಿರ್ಧರಿಸಿದೆ.
‘ಗ್ರಾಮ ಸ್ವರಾಜ್’ ಹೆಸರಿನಲ್ಲಿ ಸಾಲು ಸಾಲು ಸಮಾವೇಶಗಳನ್ನು ನಡೆಸುವ ಮೂಲಕ ಪಕ್ಷ ಬಲವರ್ಧನೆಗೆ ಪಣತೊಟ್ಟಿದೆ. ಈ ಸಮಾವೇಶಗಳಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಶಿ, ಸಚಿವರು, ಶಾಸಕರು, ಸಂಸದರು ಎಲ್ಲರೂ ಭಾಗವಹಿಸಬೇಕು ಎಂದು ಹೈಕಮಾಂಡ್ ಆದೇಶಿಸಿದೆ ಎನ್ನಲಾಗಿದೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲೇ ಮೊದಲ ಸಮಾವೇಶ ನಡೆಯಲಿದೆ. ಈಗಾಗಲೇ ಸಮಾವೇಶದ ದಿನಾಂಕ ಪ್ರಕಟಿಸಿರುವ ಬಿಜೆಪಿ ಇದಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದೆ. ಸಮಾವೇಶದ ಮೂಲಕ ತಳಮಟ್ಟದಿಂದ ಪಕ್ಷ ಸಂಘಟನೆಗೆ ರಾಜ್ಯ ನಾಯಕರು ಮುಂದಾಗಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಾಧನೆಯನ್ನು ಮನೆ ಮನೆಗೆ ತಲುಪಿಸಿ ಮತ ಕೇಳಲಿದ್ದಾರೆ.
ಯಾವಾಗ? ಎಲ್ಲೆಲ್ಲಿ ಸಮಾವೇಶ?
ನ.27- ಉಡುಪಿ
ನ.28- ದಕ್ಷಿಣ ಕನ್ನಡ
ನ.29- ಚಿಕ್ಕಬಳ್ಳಾಪುರ
ನ.30- ಕೋಲಾರ
ಡಿ.01- ರಾಮನಗರ
ಡಿ.02- ಬೆಂಗಳೂರು ಗ್ರಾಮಾಂತರ
ಡಿ.07- ಬೆಂಗಳೂರು ನಗರ
Also Read: ಗ್ರಾಮ ಪಂಚಾಯಿತಿ ಚುನಾವಣೆ; ಕಾಂಗ್ರೆಸ್, BJPಯನ್ನು ಸೋಲಿಸಲು JDS ಭರ್ಜರಿ ಪ್ಲಾನ್
ಇದಾದ ಬಳಿಕ ಎರಡನೇ ಹಂತದಲ್ಲಿ ವಿವಿಧ ಜಿಲ್ಲೆಗಳಲ್ಲಿ ಬಿಜೆಪಿ ಸಮಾವೇಶಗಳು ನಡೆಯಲಿವೆ. ಸಮಾವೇಶದಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲಿದ್ದಾರೆ. ಈ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಗೆ ಮತದಾರರನ್ನು ಸೆಳೆಯುವ ಪ್ರಯತ್ನ ಇದಾಗಿದೆ.
ಈ ಬಾರಿ ಪಕ್ಷ ಅಧಿಕಾರದಲ್ಲಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಗೊಳಿಸಲು ಬಿಜೆಪಿ ನಿರ್ಧರಿಸಿದೆ. ಬಿಜೆಪಿಯು ಗ್ರಾಮ ಪಂಚಾಯಿತಿ ಮಾತ್ರವಲ್ಲದೆ, ರಾಜ್ಯದ ಎಲ್ಲಾ ಚುನಾವಣೆಗಳಲ್ಲೂ ಬೂತ್ ಮಟ್ಟದಲ್ಲಿ ಸಕ್ರಿಯ ಕಾರ್ಯ ನಿರ್ವಹಿಸುವ ಸಮಿತಿಯೊಂದನ್ನು ಶುರು ಮಾಡಿದೆ.