ಕರೋನಾ ಸೋಂಕಿನ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಿಯುಸಿ ಫಲಿತಾಂಶ ಜುಲೈ 14 ರ ತಾರೀಕಿಗೆ ಹೊರ ಬೀಳಲಿದೆ ಎಂದು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಇಂದು ಆನ್‌ಲೈನ್ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಪರೀಕ್ಷೆಯ ಫಲಿತಾಂಶ ನಾಳೆ ಬೆಳಗ್ಗೆ 11:30 ಗೆ ಪ್ರಕಟವಾಗಲಿದೆ. ಮೊಬೈಲ್‌ಗಳಲ್ಲೇ ಫಲಿತಾಂಶ ವೀಕ್ಷಿಸಬಹುದು ಎಂದಿದ್ದಾರೆ.
ಮಾರ್ಚ್ ತಿಂಗಳಲ್ಲಿ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಕರೋನಾ, ಲಾಕ್‌ಡೌನ್ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟು ಜೂನ್ 18 ರಂದು ನಡೆಸಲಾಗಿತ್ತು.