‘ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈಕಮಾಂಡ್ ತೆಗೆದುಕೊಳ್ಳಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಈ ಭಾಗದ ಮುಖಂಡರ ಜತೆ ಶನಿವಾರ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್ ಅವರು ‘ಬೆಳಗಾವಿ, ಬಸವ ಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಈ ಭಾಗದ ಮುಖಂಡರ ಸಭೆ ಕರೆದು, ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿದ್ದು, ನಾನು ಹುಬ್ಬಳ್ಳಿ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
“ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ. ಅಂತಿಮ ಪಟ್ಟಿಯನ್ನು ನಾನು ಮಾಡುವುದಿಲ್ಲ. ನಾನು ಹೆಸರುಗಳನ್ನು ಶಿಫಾರಸು ಮಾತ್ರ ಮಾಡುತ್ತೇನೆ,” ಎಂದಿದ್ದಾರೆ.
ವಂಚಕ ಯುವರಾಜ್ ಜತೆ ಸಚಿವರ ಸಂಪರ್ಕದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ, ಎಂದು ಹೇಳಿದ್ದಾರೆ.