• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನ: ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಕರೆ

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in ರಾಜಕೀಯ
0
Share on WhatsAppShare on FacebookShare on Telegram

ಬಾಲ ಕಾರ್ಮಿಕ ಪದ್ಧತಿ ತಡೆಗೆ ಸರ್ಕಾರದೊಂದಿಗೆ ಕೈ ಜೋಡಿಸಿ

ADVERTISEMENT

ಬೆಂಗಳೂರು, ಜೂನ್‌ 12: ಮಕ್ಕಳು ಕಾರ್ಮಿಕರಾಗಿ ದುಡಿಯುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಪದ್ಧತಿ ತಡೆಗೆ ಸರ್ಕಾರದೊಂದಿಗೆ ಸಾರ್ವಜನಿಕರೂ ಕೈ ಜೋಡಿಸಿದರೆ ಸಹಾಯವಾಗಲಿದೆ. ಬಾಲಕಾರ್ಮಿಕ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ನಮ್ಮ ಕಾರ್ಮಿಕ ಇಲಾಖೆ ಕಟಿಬದ್ಧವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವಜನಿಕರು ಕೂಡ ಕೈ ಜೋಡಿಸಬೇಕು ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ಕರೆ ನೀಡಿದರು.

ಬಾಲ ಕಾರ್ಮಿಕ ವಿರೋಧಿ ದಿನದ ಅಂಗವಾಗಿ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಬಾಲ ಕಾರ್ಮಿಕ ನಿರ್ಮೂಲನ ಯೋಜನಾ ಸೊಸೈಟಿ ಹಾಗೂ ಜಿಲ್ಲಾ ಬಾಲ ಕಾರ್ಮಿಕ ನಿರ್ಮೂಲನ ಸೊಸೈಟಿ ನಗರ ಜಿಲ್ಲೆ ವತಿಯಿಂದ ಬೆಂಗಳೂರಿನ ಎಂ ಜಿ ರಸ್ತೆಯ ಗಾಂಧಿ ಪ್ರತಿಮೆಯಿಂದ ಕೆ ಆರ್‌ ಸರ್ಕಲ್‌ವರೆಗೆ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಬಾಲ ಕಾರ್ಮಿಕರ ಪತ್ತೆ ಮತ್ತು ಅವರ ರಕ್ಷಣೆಗೆ ನಮ್ಮ ಇಲಾಖೆ ಸಾಕಷ್ಟು ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೊಳಿಸುತ್ತಾ ಬರುತ್ತಿದೆ. ಮಕ್ಕಳ ಪತ್ತೆಗೆ ದಾಳಿ ಹಾಗೂ ಬಾಲ ಕಾರ್ಮಿಕರನ್ನು ನೇಮಿಸಿಕೊಂಡವರಿಗೆ ದಂಡವನ್ನೂ ವಿಧಿಸಲಾಗುತ್ತಿದೆ. ಮಕ್ಕಳಿಂದ ದುಡಿಸಿಕೊಳ್ಳುವುದರ ಬಗ್ಗೆ ಸಾಕಷ್ಟು ಜಾಗೃತಿ ಮೂಡಬೇಕಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರೂ ನಮ್ಮೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಮಕ್ಕಳಿಂದ ಒತ್ತಾಯವಾಗಿ ದುಡಿಸಿಕೊಂಡರೆ ಅವರ ಭವಿಷ್ಯ ಕಮರಿ ಹೋಗುತ್ತದೆ. ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಬಾಲ ಕಾರ್ಮಿಕರಾಗದಂತೆ ತಡೆಯಲು ನಮ್ಮ ಇಲಾಖೆ ಸದಾ ಬದ್ಧವಾಗಿದೆ. ಕಾರ್ಮಿಕ ಇಲಾಖೆ ಪೊಲೀಸ್‌ ಸೇರಿದಂತೆ ಇತರ ಇಲಾಖೆಗಳ ಜೊತೆಗೆ ಸೇರಿಕೊಂಡು ಕೆಲಸ ಮಾಡಿದರೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಸಹಾಯವಾಣಿಗೆ ಸಾಕಷ್ಟು ಕರೆಗಳು ಬರುತ್ತಿವೆ. ಆ ಎಲ್ಲಾ ಕರೆಗಳು ಮಕ್ಕಳಿಗೆ ಸಂಬಂಧಿಸದವು ಆಗಿರುವುದಿಲ್ಲ. ಆದ್ದರಿಂದ ಆ ಎಲ್ಲಾ ಕರೆಗಳನ್ನು ಪ್ರತ್ಯೇಕಗೊಳಿಸಬೇಕು. ಸರ್ಕಾರ ಮತ್ತು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ತರಬೇಕು. ಈ ಕರೆಗಳಿಗೆ ಹೇಗೆ ಮತ್ತು ಎಷ್ಟು ಪ್ರತಿಕ್ರಿಯಿಸಲಾಗಿದೆ ಎಂಬುದು ತಿಳಿಯಬೇಕು. ಅಧಿಕಾರಿಗಳು ಈ ಸಂಬಂಧ ಮುತುವರ್ಜಿವಹಿಸಿ ಕೆಲಸ ಮಾಡಬೇಕು ಎಂದರು.

ಮಕ್ಕಳನ್ನು ಕಾರ್ಮಿಕರಾಗಿ ದುಡಿಸಿಕೊಳ್ಳುವ ಹಾಗೆಯೇ ಮಕ್ಕಳಿಂದ ಭಿಕ್ಷಾಟನೆ ಸಹ ಅಪಾಯಕಾರಿ. ಮಹಾನಗರಗಳಲ್ಲಿ ಇದು ಇತ್ತೀಚೆಗೆ ಹೆಚ್ಚುತ್ತಿದೆ. ಪೊಲೀಸ್‌ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮನ್ವಯದೊಂದಿಗೆ ಈ ಪದ್ಧತಿಯನ್ನು ತಡೆಯಬಹುದಾಗಿದೆ. ಇದಕ್ಕೊಂದು ಕಾರ್ಯಯೋಜನೆ ಸಿದ್ಧಪಡಿಸಬೇಕು. ಆಗಾಗ ಆ ಯೋಜನೆ ಪ್ರಗತಿ ಪರಿಶೀಲನ ಮಾಡಬೇಕು ಎಂದರು.

ಬಾಲ ಕಾರ್ಮಿಕ ಪದ್ಧತಿ ಬಗ್ಗೆ ಕೇವಲ ವರ್ಷಕ್ಕೆ ಒಂದು ಬಾರಿ ಕಾರ್ಯಕ್ರಮ ನಡೆದರೆ ಸಾಲದು. ವರ್ಷಪೂರ್ತಿ ಜಾಗೃತಿ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಇದೇ ವೇಳೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ ಎ ದಯಾನಂದ ಅವರು, ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡುವ ಕುರಿತ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೊಹಸಿನ್, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಸಿಇಒ ಹಾಗೂ ಕಾರ್ಯದರ್ಶಿಗಳಾದ ಶ್ರೀ ಭಾರತಿ ಡಿ, ಕಾರ್ಮಿಕ ಆಯುಕ್ತರಾದ ಡಾ. ಎಚ್‌ ಎನ್‌ ಗೋಪಾಲಕೃಷ್ಣ, ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ನಿರ್ದೇಶಕರಾದ ಶ್ರೀನಿವಾಸ್, ಇಎಸ್‌ಐ ನಿರ್ದೇಶಕರಾದ ಡಾ. ವರದರಾಜು, ನಟಿ ರಾಗಿಣಿ ದ್ವಿವೇದಿ, ಕಾರ್ಮಿಕ ಇಲಾಖೆಯ ಇತರೆ ಅಧಿಕಾರಿಗಳು, ಶಾಲಾ ಕಾಲೇಜುಗಳ ಸಿಬ್ಬಂದಿ, ಎನ್‌ಸಿಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ತಂಡಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags: BJPCongress Partysanthosh ladಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೋರ್ಟ್ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ಧರ್ಮದೇಟು

Next Post

2011ರಿಂದ 2024ರ ವರೆಗೆ ದರ್ಶನ್ ವಿರುದ್ಧ ದಾಖಲಾದ ಒಟ್ಟು ಕೇಸ್‌ಗಳು ಎಷ್ಟು ?!

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

April 12, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
2011ರಿಂದ 2024ರ ವರೆಗೆ ದರ್ಶನ್ ವಿರುದ್ಧ ದಾಖಲಾದ ಒಟ್ಟು ಕೇಸ್‌ಗಳು ಎಷ್ಟು ?!

2011ರಿಂದ 2024ರ ವರೆಗೆ ದರ್ಶನ್ ವಿರುದ್ಧ ದಾಖಲಾದ ಒಟ್ಟು ಕೇಸ್‌ಗಳು ಎಷ್ಟು ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada