ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 17ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 6317 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಒಟ್ಟು ಕರೋನಾ ಸೋಂಕಿತರ ಸಂಖ್ಯೆ 2,33,283 ಕ್ಕೇರಿದೆ.
ಇದುವರೆಗೂ ರಾಜ್ಯದಲ್ಲಿ 1,4,8562 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 80,643 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 7071 ಸೋಂಕಿತರು ಬಿಡುಗಡೆಹೊಂದಿದ್ದಾರೆ. 695 ಮಂದಿ ಐಸಿಯಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಬೆಂಗಳೂರು ನಗರವೊಂದರಲ್ಲೇ 2,053 ಹೊಸ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 91,864 ತಲುಪಿದೆ. ಒಟ್ಟು 55,972 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರೋನಾ ಸೋಂಕಿನಿಂದಾಗಿ ರಾಜ್ಯ ರಾಜಧಾನಿಯಲ್ಲಿ 1,483 ಮಂದಿ ಸಾವನ್ನಪ್ಪಿದ್ದಾರೆ.






