ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಿಸಿದ್ದಾರೆಂದು ರಾಜ್ಯ ಮುಖ್ಯ ಕಾರ್ಯದರ್ಶಿ ಹಾಗೂ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ವಕೀಲ ಉಮಾಪತಿ. ಎಸ್ ಎಂಬವರು ದೂರು ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಯಾವುದೇ ವ್ಯಕ್ತಿಯನ್ನು ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲು ಸಂವಿಧಾನದ ಅಥವಾ ಕಾನೂನಿನ ಅಡಿಯಲ್ಲಿ ಯಾವುದೇ ಅವಕಾಶವಿಲ್ಲ. ಮುಖ್ಯಮಂತ್ರಿಯವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ರಾಜಕೀಯ ಕಾರ್ಯದರ್ಶಿಯ ನೇಮಕಾತಿಯನ್ನು ಹಿಂತೆಗೆದುಕೊಳ್ಳದಿದ್ದರೆ, ಅದನ್ನು ಸಾರ್ವಜನಿಕ ಹಿತಾಸಕ್ತಿ ಮೂಲಕ ಹೈ ಕೋರ್ಟ್‌ನಲ್ಲಿ ಈ ವಿಚಾರವನ್ನು ಪ್ರಶ್ನಿಸಲಾಗುವುದು ಎಂದು ಉಮಾಪತಿ ಹೇಳಿದ್ದಾರೆ.
ಸಂತೋಷ್ ಅವರು ಸಿಎಂ ಬಿಎಸ್‌ವೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಇದೇ ವರ್ಷ ಮೇ ತಿಂಗಳ ಕೊನೆಯಲ್ಲಿ ಸಂತೋಷ್ ಅವರನ್ನು ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.
ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈ ಹಿಂದಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಒಡೆದು ಬಿಜೆಪಿಯನ್ನು ಅಧಿಕಾರಕ್ಕೆ ತರುವಲ್ಲಿ ಸಂತೋಷ್ ಅವರ ಪಾತ್ರ ಮಹತ್ವದ್ದಾಗಿತ್ತು. ಇನ್ನು ಸಚಿವ ಈಶ್ವರಪ್ಪ ಅವರ ಆಪ್ತ ಕಾರ್ಯದರ್ಶಿ ವಿನಯ್ ಕೊಲೆ ಪ್ರಕರಣದಲ್ಲಿ ಸಂತೋಷ್ ಕೂಡಾ ಭಾಗಿಯಾಗಿದ್ದಾರೆಂದು ಆರೋಪ ಕೇಳಿ ಬಂದಿತ್ತು. ಈ ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿದೆ.